Panambur ಬೀಚ್ನಲ್ಲಿ ವಿದ್ಯಾರ್ಥಿ ಮುಳುಗಿ ನಾಪತ್ತೆ
Team Udayavani, Feb 25, 2024, 12:25 AM IST
ಪಣಂಬೂರು: ಪಣಂಬೂರು ಬೀಚ್ನಲ್ಲಿ ನೀರಾಟವಾಡುತ್ತಿದ್ದ ಸರಕಾರಿ ಶಾಲಾ ವಿದ್ಯಾರ್ಥಿ ತುಕಾರಾಮ (13) ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದಾನೆ.
ಬೈಕಂಪಾಡಿ ಮೀನಕಳಿಯ ಸರಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್ಗೆ ಆಗಮಿಸಿದ್ದ ಎನ್ನಲಾಗಿದೆ.
ಬೀಚ್ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್ನ ರಕ್ಷಣ ದಳಕ್ಕೆ ತಿಳಿಸಿದರು. ತತ್ಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದಾರೆ. ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.