ಉಳ್ಳಾಲ: ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಸ್ವೀಡನ್ ಪ್ರಜೆ
Team Udayavani, Oct 12, 2022, 8:04 PM IST
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ. ಸ್ವೀಡನ್ ದೇಶದ ಪ್ರವಾಸಿಗ ಆಡಮ್ ರಕ್ಷಿಸಿದವರು.
ಇಂದು ( ಬುಧವಾರ) ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಆಯಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು. ಈ ವೇಳೆ ಅಲ್ಲೇ ಮೀನಿಗೆ ಗಾಳ ಹಾಕುತ್ತಿದ್ದ ಸ್ವೀಡನ್ ದೇಶದ ಪ್ರವಾಸಿಗ ಆಡಮ್ ತಕ್ಷಣ ಸಮುದ್ರಕ್ಕೆ ಧುಮುಕಿ ಪ್ರವೀಣ್ ಅವರನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಪ್ರವೀಣ್ ಅವರಿಗೆ ಆಡಂ ಪ್ರಾಥಮಿಕ ಚಿಕಿತ್ಸೆ ನೀಡಿ , ನಂತರ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವೀಣ್ ಪ್ರಾಣ ರಕ್ಷಿಸಿದ ವಿದೇಶಿ ಪ್ರಜೆ ಆಡಂ ಅವರ ಕಾರ್ಯದ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೂವರೆ ತಿಂಗಳ ಭಾರತ ದೇಶದ ಪ್ರವಾಸದಲ್ಲಿರುವ ಆಡಂ ಅವರು ಮಂಗಳೂರು ಸೇರಿದಂತೆ ಚೆನ್ನೈ ಇನ್ನಿತರ ಬೀಚ್ ಗಳಿಗೆ ಭೇಟಿ ನೀಡಿ ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.