ಮದ್ಯ ಸೇವಿಸಿ ವಾಹನ ಚಾಲನೆ ನಾಲ್ಕು ದಿನಗಳಲ್ಲಿ 272 ಪ್ರಕರಣ ದಾಖಲು
Team Udayavani, Apr 2, 2019, 6:30 AM IST
ಮಂಗಳೂರು: ನಗರದಲ್ಲಿ ಸಂಚಾರ ವ್ಯವಸ್ಥೆ ಯಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿರುವ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ನಾಲ್ಕು ದಿನ ಅವಧಿಯಲ್ಲಿ ನಗರದಲ್ಲಿ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ 272 ಪ್ರಕರಣಗಳನ್ನು ಸಂಚಾರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಝೀಬ್ರಾ ಕ್ರಾಸಿಂಗ್ ಮೇಲೆ ವಾಹನಗಳನ್ನು ನಿಲ್ಲಿಸಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿ ಪಡಿಸಿದ 422 ಕೇಸುಗಳನ್ನು ದಾಖಲಿಸಲಾಗಿದೆ.
ಬಸ್‌ಗಳ ಕರ್ಕಶ ಹಾರ್ನ್ ವಿರುದ್ಧ 144 ಪ್ರಕರಣ, ಟಿಂಟ್ ಗ್ಲಾಸ್ ಕುರಿತಂತೆ 186 ಕೇಸುಗಳು ದಾಖಲಾಗಿವೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದ ಮೇಲೆ 212 ವಾಹನಗಳನ್ನು ಟೋಯಿಂಗ್ ಮಾಡಲಾಗಿದೆ.
ಟರ್ಪಾಲು ಹಾಕದೆ ಲಾರಿ/ ಟೆಂಪೊಗಳಲ್ಲಿ ಮರಳು, ಮಣ್ಣು, ಕಲ್ಲು ಇತ್ಯಾದಿ ಸಾಗಾಟ ಮಾಡಿದ ಬಗ್ಗೆ ನಾಲ್ಕು ದಿನಗಳಲ್ಲಿ 94 ಕೇಸು ದಾಖಲಿಸಲಾಗಿದೆ. ಮಿತಿ ಮೀರಿದ ವೇಗದಲ್ಲಿ ಹಾಗೂ ಅಜಾಗ್ರತೆಯಿಂದ ವಾಹನ ಚಲಾಯಿಸಿದ ಬಗ್ಗೆ 212 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿ ಎಂಬುದಾಗಿ ಕಮಿಷನರ್ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.