ಸಂಭಾವ್ಯ ರೈಲು ಅವಘಡ ತಪ್ಪಿಸಿದ ಮಹಿಳೆ!
ಹಳಿಗೆ ಬಿದ್ದ ಮರ; ಕೆಂಪು ವಸ್ತ್ರ ಹಿಡಿದು ರೈಲಿಗೆ ಬ್ರೇಕ್
Team Udayavani, Apr 4, 2023, 7:10 AM IST
ಮಂಗಳೂರು: ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70ರ ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ.
ಪಡೀಲ್ – ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು.
ಆಗಿದ್ದೇನು?
ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿತ್ತು. ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸéಗಂಧ ರೈಲು ಸಂಚರಿಸುವುದರಲ್ಲಿತ್ತು. ಇದನ್ನು ತತ್‌ಕ್ಷಣವೇ ಗಮನಿಸಿದ 70 ವರ್ಷ ಪ್ರಾಯದ ಚಂದ್ರಾವತಿ ಅವರು ಏನು ಮಾಡಬೇಕು ಎಂದು ತೋಚದೆ, ತತ್‌ಕ್ಷಣವೇ ಮನೆಯಲ್ಲಿದ್ದ ಕೆಂಪು ವಸ್ತ್ರವನ್ನು ತಂದು ರೈಲು ಬರುವ ಸಮಯಕ್ಕೆ ಪ್ರದರ್ಶಿಸಿ ಲೋಕೋಪೈಲೆಟ್ ಅವರ ಗಮನ ಸೆಳೆದರು. ಅಪಾಯ ಅರಿತ ಲೋಕೋಪೈಲೆಟ್ ರೈಲಿನ ವೇಗವನ್ನು ಕಡಿಮೆ ಮಾಡಿ ರೈಲನ್ನು ನಿಲ್ಲಿಸುವ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ರೈಲ್ವೇ ಇಲಾಖೆಯ ಕೆಲವರು ಸೇರಿ ಮರ ತೆರವು ಮಾಡಿದರು.
“ದೇವರೇ ಕಳುಹಿಸಿದ್ದು’!
ಚಂದ್ರಾವತಿ ಅವರು “ಉದಯವಾಣಿ’ ಜತೆಗೆ ಮಾತನಾಡಿ, “ಆಗಷ್ಟೇ ಊಟ ಮಾಡಿ ಮನೆಯ ಅಂಗಳದಲ್ಲಿದ್ದೆ. ನನ್ನ ಅಕ್ಕ ಮನೆಯಲ್ಲಿ ಮಲಗಿದ್ದರು. ಅದೇ ವೇಳೆ ಮನೆ ಎದುರಿನ ರೈಲು ಹಳಿಗೆ ಏನೋ ಬಿದ್ದ ಶಬ್ದ ಕೇಳಿತು. ಬಂದು ನೋಡಿದಾಗ ದೊಡ್ಡ ಮರ ಹಳಿಯಲ್ಲಿತ್ತು. ಅದೇ ವೇಳೆಗೆ ಮುಂಬಯಿ ರೈಲು ಸಂಚರಿಸುವ ಬಗ್ಗೆ ಗೊತ್ತಿತ್ತು. ಏನು ಮಾಡಬೇಕು ಎಂದು ತತ್‌ಕ್ಷಣಕ್ಕೆ ಗೊತ್ತಾಗಲಿಲ್ಲ. ಯಾರಿಗಾದರೂ ಕರೆ ಮಾಡಿ ತಿಳಿಸುವ ಎಂದು ಮನೆಗೆ ಬಂದೆ. ಆಗ ರೈಲಿನ ಹಾರ್ನ್ ಕೇಳಿಸಿತು. ಆಗ ದೇವರ ದಯೆಯಿಂದ ಅಲ್ಲೇ ಕೆಂಪು ಬಟ್ಟೆ ಕಂಡಿತು. ಅದನ್ನೇ ಹಿಡಿದು ಹಳಿಯ ಬಳಿಗೆ ಓಡಿದೆ. ನನಗೆ ಹೃದಯದ ಆಪರೇಷನ್ ಆಗಿತ್ತು. ಆದರೂ ಲೆಕ್ಕಿಸದೆ ಓಡಿ ಬಂದೆ ಎಂದವರು ಹೇಳಿದ್ದಾರೆ.
ಅರ್ಧ ತಾಸು ರೈಲು ನಿಲುಗಡೆ!
ಆಯರಮನೆ ಸಮೀಪ ರೈಲ್ವೇ ಹಳಿಗೆ ಮರ ಬಿದ್ದಿತ್ತು. ಇದೇ ಸಮಯಕ್ಕೆ ರೈಲು ಬರುವುದನ್ನು ಅರಿತಿದ್ದ ಚಂದ್ರಾವತಿ ಅವರು ಕೆಂಪು ಬಟ್ಟೆ ತಂದು ಇನ್ನೊಂದು ಹಳಿಯಲ್ಲಿ ನಿಂತು ರೈಲು ನಿಲ್ಲಿಸಲು ಸೂಚನೆ ನೀಡಿದರು. ಮಾಹಿತಿ ತಿಳಿದು ನಾನು, ಬಾಲಕೃಷ್ಣ ಕಾರಂತ ಸಹಿತ ಸ್ಥಳೀಯರು ಸೇರಿದೆವು. ಎಲ್ಲರ ಸಹಕಾರದಿಂದ ಬಳಿಕ ಮರ ತೆರವು ಮಾಡಿದೆವು. ಸುಮಾರು ಅರ್ಧ ತಾಸು ರೈಲು ನಿಲುಗಡೆಯಾಗಿತ್ತು. ಬಳಿಕ ತೆರಳಿದೆ ಎನ್ನುತ್ತಾರೆ ಸ್ಥಳೀಯರಾದ ಅನಂತ ಕಾರಂತ.
ರೈಲು ನಿಲ್ಲಿಸಿದ್ದ “ರಥಪುಷ್ಪ’!
ಕೆಲವು ವರ್ಷಗಳ ಹಿಂದೆ ಪಚ್ಚನಾಡಿಯಲ್ಲಿ ರೈಲು ಹಳಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದ ಕೃಷಿಕ ಪ್ರಾಂಕ್ಲಿನ್ ಫೆರ್ನಾಂಡಿಸ್ ಅವರು ರಥಪುಷ್ಪದ ಹೂವನ್ನು ಕೈಯಲ್ಲಿ ಹಿಡಿದು ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
- ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.