Mangaluru ಅನ್ಯ ಧರ್ಮದ ಯುವಕನಿಂದ ವಿದ್ಯಾರ್ಥಿನಿಯ ಅಪಹರಣ; ಕಾಸರಗೋಡಿನಲ್ಲಿ ಪತ್ತೆ


Team Udayavani, Jul 11, 2024, 7:20 AM IST

ಅನ್ಯ ಧರ್ಮದ ಯುವಕನಿಂದ ವಿದ್ಯಾರ್ಥಿನಿಯ ಅಪಹರಣ; ಕಾಸರಗೋಡಿನಲ್ಲಿ ಪತ್ತೆ

ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳನ್ನು ಅನ್ಯ ಧರ್ಮದ ಯುವಕ ಅಪಹರಿಸಿದ ಘಟನೆ ನಡೆದಿದ್ದು ಈರ್ವರನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ.

ಕಾಸರಗೋಡಿನ ವಿದ್ಯಾನಗರ ನಿವಾಸಿ ಮುಹಮ್ಮದ್‌ ಅಶ್ಫಾಕ್‌ ಪ್ರಕರಣದ ಆರೋಪಿ. ಯುವತಿ ಉಳ್ಳಾಲದ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದಳು. ಆರೋಪಿ ಜೂ.30ರಂದು ವಿದ್ಯಾರ್ಥಿನಿಯನ್ನು ಉಳ್ಳಾಲದಿಂದಲೇ ಅಪಹರಿಸಿ ಕೊಚ್ಚಿಗೆ ಕರೆದೊಯ್ದಿದ್ದ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮತ್ತು ಯುವತಿಯನ್ನು ಕಾಸರಗೋಡಿನಲ್ಲಿ ಪತ್ತೆ ಮಾಡಿದ್ದು ಯುವತಿಯನ್ನು ನಗರದ ಸಲಹಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

ಆರೋಪಿ ಮಹಮ್ಮದ್‌ ಅಶ್ಫಾಕ್‌ನ ಮೇಲೆ ಕಾಸರಗೋಡಿನ ನಾನಾ ಪೊಲೀಸ್‌ ಠಾಣೆಯಲ್ಲಿ 15ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈತನಿಗೆ ಈ ಹಿಂದೆಯೇ ಮದುವೆಯಾಗಿತ್ತು.

ತಂದೆಯಿಂದ ಪೊಲೀಸ್‌ ಆಯುಕ್ತರಿಗೆ ದೂರು
ಯುವತಿಯ ತಂದೆ ಈ ಬಗ್ಗೆ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಮಗಳನ್ನು ಮತಾಂತರ ಗೊಳಿಸುವುದಕ್ಕಾಗಿ ಅಪಹರಣ ನಡೆಸಲಾಗಿದೆ.ಅಶ#ಕ್‌ ಮತ್ತು ಆತನ ತಂಡದಿಂದ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮತ್ತೊಂದು ಲವ್‌ ಜೆಹಾದ್‌: ವಿಎಚ್‌ಪಿ
ಇದು ಮತ್ತೊಂದು ಲವ್‌ ಜೆಹಾದ್‌ ಪ್ರಕರಣವಾಗಿದೆ. ಕರಾವಳಿ ಭಾಗದಲ್ಲಿ ಪ್ರೀತಿ, ಪ್ರೇಮದ ಹೆಸರಿನಲ್ಲಿ ಮತಾಂತರ, ಲವ್‌ ಜೆಹಾದ್‌ ಪ್ರಕರಣಗಳು ಹೆಚ್ಚುತ್ತಿದ್ದು ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ. ಲವ್‌ ಜೆಹಾದ್‌ ತಡೆಯಲು ಪ್ರಬಲ ಕಾನೂನು ಜಾರಿಗೆ ತರಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ ವೆಲ್‌ ಒತ್ತಾಯಿಸಿದ್ದಾರೆ.

ತನಿಖೆಗೆ ಶ್ರೀ ರಾಮಸೇನೆ ಆಗ್ರಹ
ಪಾಂಡೇಶ್ವರ ಠಾಣೆಯಲ್ಲಿ ದಾಖಲಾದ ಪ್ರಕರಣ ಲವ್‌ ಜೆಹಾದ್‌ ಆಗಿದ್ದು, ಇದರ ವಿರುದ್ದ ಗಂಭೀರ ತನಿಖೆಯ ಅಗತ್ಯವಿದೆ ಎಂದು ಶ್ರೀ ರಾಮಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌ ಶೆಟ್ಟಿ ಅಡ್ಯಾರ್‌ ಆಗ್ರಹಿಸಿದ್ದಾರೆ.

ಇದೊಂದು ವ್ಯವಸ್ಥಿತ ಮತಾಂತರ ಜಾಲವಾಗಿದ್ದು ಇದರ ವಿರುದ್ಧ ಸೂಕ್ತ ಕ್ರಮ ವಹಿಸುವಂತೆ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.