ಮಂಗಳೂರು:ಸಿಎಂ ಸಮ್ಮುಖದಲ್ಲೇ ಕೈ ಭಿನ್ನಮತ ಸ್ಫೋಟ
Team Udayavani, Oct 22, 2017, 12:07 PM IST
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್ ಮತ್ತು ಸರ್ಕಾರದ ಮುಖ್ಯಸಚೇತಕ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಡುವಿನ ಭಿನ್ನಮತ ಬಯಲಾಗಿದೆ.
ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸ್ವಾಗತಿಸಲು ತೆರಳಿದ ಇಬ್ಬರು ನಾಯಕರ ಭಿನ್ನಮತ ಬಯಲಾಗಿದೆ.
ಸಿಎಂ ಪಕ್ಕಕ್ಕೆ ಬರಲು ಯತ್ನಿಸಿದ ಡಿಸೋಜಾರನ್ನು ಜೈನ್ ತಳ್ಳಿದ್ದಾರೆ ಎಂದು ವರದಿಯಾಗಿದೆ.
ಡಿಸೋಜಾ ಅವರು ಹಾಲಿ ಅಭಯಚಂದ್ರ ಜೈನ್ ಅವರು ಪ್ರತಿನಿಧಿಸುತ್ತಿರುವ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದು ಪರಸ್ಪರ ಭಿನ್ನಮತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ವಿಮಾನ ನಿಲ್ದಾಣದಲ್ಲಿ ಸಿಎಂ ಸ್ವಾಗತಿಸಲು ಭಾರೀ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಸಿಎಂ ಕಾರು ಹತ್ತಬೇಕಾದರೆ ಸುತ್ತಲೂ ಮುತ್ತಿದ್ದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಅಭಯಚಂದ್ರ ಜೈನ್ ಮತ್ತು ಐವನ್ ಡಿಸೋಜಾ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದರು.
ಬಿ.ಸಿ.ರೋಡ್ ಲಘು ಲಾಠಿ ಪ್ರಹಾರ
ಬಿ.ಸಿ.ರೋಡ್ ನಲ್ಲಿ ಸಿ.ಎಂ. ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನೂಕುನುಗ್ಗಲು ಉಂಟಾಗಿ ಮಿನಿ ವಿಧಾನಸೌಧದ ಬಾಗಿಲು ಜಖಂಗೊಂಡಿದೆ . ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.