ತುಳು ಅಧಿಕೃತ ಭಾಷೆ ಘೋಷಣೆಗೆ ಅಕಾಡೆಮಿ ಪ್ರಯತ್ನ
Team Udayavani, Jan 10, 2019, 5:24 AM IST
ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ಅನು ಕೂಲವಾಗುವಂತೆ ಅದನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವಂತೆ ತುಳು ಸಾಹಿತ್ಯ ಅಕಾಡೆಮಿ ಸರಕಾರ ಹಾಗೂ ಕರಾವಳಿ ಭಾಗದ ಎಲ್ಲ ಶಾಸಕರಿಗೆ ಪತ್ರ ಬರೆದಿದೆ.
ಅಕಾಡೆಮಿಯ ಈ ಪತ್ರಕ್ಕೆ ಕರಾವಳಿಯ ಹೆಚ್ಚಿನ ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಖ್ಯಮಂತ್ರಿಗಳಲ್ಲಿ ಈ ಸಂಬಂಧ ಚರ್ಚೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರ ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದರೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಬೇಡಿಕೆಗೆ ಬಲ ಬರುತ್ತದೆ.
ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಹಕ್ಕೊತ್ತಾಯವನ್ನು ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಕರಾವಳಿ ಶಾಸಕರು ಮುಂದಾಗಿದ್ದರು. ಲೋಕ ಸಭೆಯಲ್ಲಿಯೂ ಪ್ರಸ್ತಾಪವಾಗಿತ್ತು. ಆದರೆ ದೊಡ್ಡಮಟ್ಟದ ಚರ್ಚೆಗೆ ಅವಕಾಶ ಲಭ್ಯವಾಗಿರ ಲಿಲ್ಲ. ಈಗ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಿ, ಆ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರುವುದಕ್ಕೆ ಕರಾವಳಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ.
ಕರಾವಳಿಯಷ್ಟೇ ಅಲ್ಲದೆ ಕೇರಳ, ಮಹಾರಾಷ್ಟ್ರ, ತ.ನಾಡು, ಆಂಧ್ರ, ಗುಜರಾತ್, ಹೊಸದಿಲ್ಲಿಗಳಲ್ಲಿಯೂ ತುಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬೆಂಗಳೂರು, ಮುಂಬಯಿ, ಹೈದರಾಬಾದ್, ಚೆನ್ನೆ , ಅಹಮದಾಬಾದ್, ಬರೋಡ, ಕೋಲ್ಕತ್ತಾ ಸೇರಿದಂತೆ ಇನ್ನಿತರ ಪಟ್ಟಣಗಳಲ್ಲಿ ತುಳುವರು ತಮ್ಮ ನೆಲೆ ಕಂಡುಕೊಂಡಿದ್ದಾರೆ.
ಸುಮಾರು 40 ಭಾಷೆಗಳಿಂದ ಬೇಡಿಕೆ,22 ಭಾಷೆಗಳಿಗೆ ಮಾನ್ಯತೆ
ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಗೊಳಿಸಬೇಕು ಎಂಬ ಕೂಗು ತುಳು ಸಹಿತ ಅನೇಕ ಭಾಷೆಗಳಿಂದ ಕೇಳಿಬರುತ್ತಿದೆ. ಕೊಡವ, ಲೆಪc, ಬಂಜಾರ, ಹರಿಯಾನ್ವಿ, ಗೊಂಡಿ, ಗುಜ್ಜಾರಿ, ಕರ್ಬಿ, ಮುಂಡಾರಿ, ನಾಗ್ಪುರಿ, ರಾಜಸ್ಥಾನಿ ಸೇರಿ ದಂತೆ ಸುಮಾರು 40ಕ್ಕೂ ಹೆಚ್ಚಿನ ಭಾಷೆಗಳು ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಿವೆ. ಸಂವಿಧಾನ ರಚನೆಯ ಸಮಯದಲ್ಲಿ 14 ಭಾಷೆಗಳಿಗೆ ಮಾನ್ಯತೆ ನೀಡಲಾಗಿತ್ತು. 1967ರಲ್ಲಿ ಸಿಂಧಿ, 1992ರಲ್ಲಿ ನೇಪಾಳಿ, ಕೊಂಕಣಿ, ಮಣಿಪುರಿಗಳನ್ನು ಸೇರ್ಪಡೆ ಮಾಡ ಲಾಯಿತು. 2003ರಲ್ಲಿ ಕಾಶ್ಮೀರದ ಡೋಗ್ರಿ, ಅಸ್ಸಾಂನ ಬೋಡೊ, ಸಾಂಥಾಲಿ, ಬಿಹಾರದ ಮೈಥಿಲಿ ಭಾಷೆಯನ್ನು ಕೇಂದ್ರ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಿದೆ.
ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡರೆ ಅನುಕೂಲ
*ರಾಷ್ಟ್ರಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಸಿಗಲಿದೆ
* ಮಾನ್ಯತೆ ಪಡೆದ ಭಾಷೆಗಳ ಸಂಶೋಧನೆಗೆ ಕೇಂದ್ರದಿಂದ ಹೆಚ್ಚಿನ ಹಣ ಬಿಡುಗಡೆ
*ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಪ್ರಶಸ್ತಿಗೆ ತುಳು ಸಾಹಿತ್ಯ ಪರಿಗಣನೆ
* ತುಳು ವಿಶ್ವವಿದ್ಯಾನಿಲಯದ ಬೇಡಿಕೆಗೆ ಮತ್ತಷ್ಟು ಬಲ
* ವಿಧಾನಸಭೆ, ಲೋಕಸಭೆಯಲ್ಲಿ ಜನಪ್ರತಿನಿಧಿಗಳು ತುಳು ಭಾಷೆಯಲ್ಲಿಯೂ ಪ್ರಮಾಣ ವಚನ ಸೀÌಕರಿಸಲು ಅವಕಾಶ
ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ರಾಜ್ಯ ಸರಕಾರ ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಸರಕಾರಕ್ಕೆ ಮತ್ತು ಕರಾವಳಿ ಭಾಗದ ಶಾಸಕರಿಗೆ ಈಗಾಗಲೇ ತುಳು ಸಾಹಿತ್ಯ ಅಕಾಡೆಮಿಯಿಂದ ಪತ್ರವನ್ನು
ಬರೆಯಲಾಗಿದೆ. ಹೆಚ್ಚಿನ ಶಾಸಕರು ಈ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಒಂದು ವೇಳೆ ಸರಕಾರ ಅಧಿಕೃತ ಭಾಷೆಯಾಗಿ ಘೋಷಿಸಿದರೆ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆಗೆ ಮತ್ತಷ್ಟು ಬಲ ಬರುತ್ತದೆ.
ಎ.ಸಿ. ಭಂಡಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.