ಲಂಚಕ್ಕೆ ಕೈ ಚಾಚಿದ ಇಎಸ್ ಐ ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ಎಸಿಬಿ ಬಲೆಗೆ
2000 ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ
Team Udayavani, Jun 4, 2022, 7:04 PM IST
ಮಂಗಳೂರು : ರೋಗಿಯೊಬ್ಬರ ಬಳಿ ಲಂಚಕ್ಕೆ ಕೈ ಚಾಚಿದ ಇಎಸ್ ಐ ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಮೆಡಿಕಲ್ ಬಿಲ್ ಗಳನ್ನು ಮಂಜೂರು ಮಾಡಲು ಲಂಚ ಕೇಳುತ್ತಿದ್ದ ಪಣಂಬೂರಿನ ಇಎಸ್ ಐ ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ವಿಷ್ಣುಮೂರ್ತಿ ಅವರು 2000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಎಸಿಬಿ ಕಚೇರಿಯಲ್ಲಿ ದೂರು ದಾಖಲಾಗಿತ್ತು.
ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಪಣಂಬೂರಿನ ವ್ಯಕ್ತಿ ಯೊಬ್ಬರು ದೂರು ನೀಡಿದ್ದರು. ದೂರುದಾರರ ಪತ್ನಿ ಬೇಕರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅವರು ಇಎಸ್ ಐ ಸದಸ್ಯತ್ವವನ್ನು ಹೊಂದಿದ್ದರು.ಕೆ ಎಂಸಿ ವೈದ್ಯರ ಸಲಹಯಂತೆ ಇಎಸ್ಐ ಡಿಸ್ಪೆನ್ಸರಿಯಿಂದ ಮಾತ್ರೆ, ಇಂಜೆಕ್ಷನ್ ಇತ್ಯಾದಿಗಳನ್ನು ಪಡೆದುಕೊಂಡು ಹೋಗಿ ಮಂಗಳೂರು ಆಸ್ಪತ್ರೆ ಯಲ್ಲಿ ಡಯಲಿಸಿಸ್ ಚಿಕಿತ್ಸೆಯನ್ನು ಪಡೆಯುತ್ತಿದ್ದು ಒಂದು ವೇಳೆ ಇಎಸ್ ಐ ಡಿಸ್ಪೆನ್ಸರಿಯಿಂದ ಮಾತ್ರೆ ಮತ್ತು ಇಂಜೆಕ್ಷನ್ ಇಲ್ಲದೆ ಇದ್ದಲ್ಲಿ ಖಾಸಗಿ ಮೆಡಿಕಲ್ ನಿಂದ ಖರೀದಿಸಿ ಆ ಬಿಲ್ ನ್ನು ಇಎಸ್ ಐ ಡಿಸ್ಪೆನ್ಸರಿಗೆ ನೀಡಿದ್ದಲ್ಲಿ ಬಿಲ್ಲು ಮಂಜೂರಾತಿ ಆಗಿ ದೂರುದಾರರ ಪತ್ನಿಯ ಖಾತೆಗೆ ಜಮೆಯಾಗುತ್ತಿತ್ತು.
ಶನಿವಾರ ಮಧ್ಯಾಹ್ನ ಲಂಚವನ್ನು ಸ್ವೀಕರಿಸುವ ವೇಳೆಯಲ್ಲಿ ಎ ಸಿ ಬಿ ದಾಳಿ ಮಾಡಿ ಆರೋಪಿ ವಿಷ್ಣುಮೂರ್ತಿ ಯನ್ನು ವಶಕ್ಕೆ ಪಡೆಯಲಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಪಶ್ಚಿಮ ವಲಯದ ಪೊಲೀಸ್ ಅಧೀಕ್ಷಕರಾದ ಸಿ. ಎ ಸೈಮನ್ ಅವರ ಮಾರ್ಗದರ್ಶನ ದಲ್ಲಿ ಎಸಿಬಿ ಪೊಲೀಸ್ ಠಾಣೆ ಉಪಾಧೀಕ್ಷಕರಾದ ಕೆ ಸಿ ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಮತ್ತು ಗುರುರಾಜ್ ಹಾಗೂ ಸಿಬ್ಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ ಡಿ ಎ. ರಾಧಾಕೃಷ್ಣ ಕೆ, ಉಮೇಶ್, ವೈಶಾಲಿ, ಗಂಗಣ್ಣ,ಆದರ್ಶ, ರಾಕೇಶ್, ಭರತ್, ಮೋಹನ್ ಸಾಲಿಯಾನ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.