Mangaluru ಎಂಡಿಎಂಎ ಡ್ರಗ್ಸ್ ಸಹಿತ ಆರೋಪಿಯ ಬಂಧನ
Team Udayavani, Aug 8, 2023, 8:29 PM IST
ಮಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡಲು ಹೋಗುತ್ತಿದ್ದ ಉಪ್ಪಳದ ಮೊಹಮ್ಮದ್ ರಫೀಕ್ ಬಿ. (40) ಎಂಬಾತನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಈತ ಬೆಳಗ್ಗೆ ತಲಪಾಡಿ ಕೆ.ಸಿ.ರೋಡ್‌ನ ರಾಷ್ಟ್ರೀಯ ಹೆದ್ದಾರಿ ಬದಿಯ ಸರ್ವೀಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ 50 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕಮಾಪನ, 1 ಮೊಬೈಲ್ ಪೋನ್, 8,000 ರೂ. ನಗದು ಸೇರಿದಂತೆ ಒಟ್ಟು 2,68,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಎಂಡಿಎಂಎ ಡ್ರಗ್ಸ್‌ನ್ನು ಆರೋಪಿ ಬೆಂಗಳೂರಿನಿಂದ ಖರೀದಿಸಿಕೊಂಡು ಬಂದಿದ್ದ. ಈ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.