ಕುಕ್ಕೆಶ್ರೀ ಕೇತ್ರಕ್ಕೆ ನಟ ಯಶ್ ಭೇಟಿ:ಕೆಜಿಎಫ್ ಯಶಸ್ಸಿಗೆಪ್ರಾರ್ಥನೆ
Team Udayavani, Dec 17, 2018, 12:04 PM IST
ಸುಬ್ರಹ್ಮಣ್ಯ : ತಮ್ಮ ಅಭಿನಯದ ಕೆ.ಜಿ.ಎಫ್. ಚಲನಚಿತ್ರ ಶೀಘ್ರ ಬಿಡುಗಡೆಗೊಳ್ಳಲಿದೆ. ಅದರ ಯಶಸ್ಸಿಗೆ ಹಾಗೂ ಕುಟುಂಬಕ್ಕೆ ಒಳಿತಾಗಲೆಂದು ದೇವರ ಅನುಗ್ರಹ ಪಡೆಯಲು ಕುಕ್ಕೆ ಕ್ಷೇತ್ರಕ್ಕೆ ಬಂದಿದ್ದಾಗಿ ಚಲನಚಿತ್ರ ನಟ ಯಶ್ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಆಗಮಿಸಿ, ದೇವರ ದರ್ಶನ ಪಡೆದ ಅವರು ಸಂಕಲ್ಪ ಹಾಗೂ ಪ್ರಾರ್ಥನೆ ನಡೆಸಿದರು. ಬಳಿಕ ಶೇಷ ಸೇವೆ ನೆರವೇರಿಸಿದರು. ಈ ವೇಳೆ ದೇಗುಲದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಯಶ್‌ಗೆ ಶಾಲು ಹೊದೆಸಿ, ಫಲಪುಷ್ಪ ಹಾಗೂ ದೇವರ ಪ್ರಸಾದ ನೀಡಿ ಹರಸಿದರು.
2. 08 ಲಕ್ಷ ರೂ. ದೇಣಿಗೆ
ಬಳಿಕ ಯಶ್ ಹೊಸಳಿಗಮ್ಮ ಗುಡಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಕಚೇರಿಯಲ್ಲಿ ಅನ್ನದಾನ ನಿಧಿಗೆ ವೈಯಕ್ತಿಕವಾಗಿ 1 ಲಕ್ಷ ರೂ. ಹಾಗೂ ಚಲನಚಿತ್ರ ಸಂಸ್ಥೆ ಹೆಸರಿನಲ್ಲಿ 1.08 ಲಕ್ಷ ರೂ. ದೇಣಿಗೆ ನೀಡಿದರು. ಕೆ.ಜಿ.ಎಫ್. ಚಲನಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಮತ್ತೆ ಕ್ಷೇತ್ರಕ್ಕೆ ಬಂದು ದೇವರಿಗೆ ಮಹಾಭಿಷೇಕ ನೆರವೇರಿಸುವುದಾಗಿ ಹರಕೆ ಹೇಳಿಕೊಂಡರು.
ಹೆಲಿಕಾಪ್ಟರ್ ಮೂಲಕ ಆಗಮನ
ಧರ್ಮಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಕುಮಾರಧಾರಾ ಶಾಲೆಯ ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿದ ಯಶ್, ನೇರವಾಗಿ ದೇವಸ್ಥಾನಕ್ಕೆ ತೆರಳಿ, ಸೇವೆಯಲ್ಲಿ ಭಾಗಿಯಾದರು. ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದವ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ನಟ ಯಶ್ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ಮಾಧವ ಡಿ., ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶ, ನಿವೃತ್ತ ಶಿಷ್ಟಾಚಾರ ಅಧಿಕಾರಿ ವೆಂಕಟ್ರಾಜ್, ದೇಗುಲದ ಪ್ರಮೋದ್ ಉಪಸ್ಥಿತರಿದ್ದರು.
ಮುಗಿಬಿದ್ದ ಅಭಿಮಾನಿಗಳು
ಯಶ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ನಟನ ಜತೆ ಸೆಲ್ಫಿ ತೆಗೆಸಿಕೊಳ್ಳಲು ನೂಕುನುಗ್ಗಲು ನಡೆಸಿದರು. ಆದರೆ, ತಡವಾಯಿತೆಂದು ಯಶ್ ಅಭಿಮಾನಿಗಳತ್ತ ಕೈಮುಗಿದು ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.