ವೆನ್ಲಾಕ್‌ಗೆ ಹೆಚ್ಚುವರಿ 300 ಹಾಸಿಗೆ ಸೌಲಭ್ಯ


Team Udayavani, Dec 7, 2017, 11:47 AM IST

7-Dec-7.jpg

ಮಹಾನಗರ: ರಾಜ್ಯದಲ್ಲೇ ಉತ್ತಮ ಜಿಲ್ಲಾಸ್ಪತ್ರೆಯೆಂದು ಹೆಸರು ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದ್ದು, ಸುಮಾರು 25 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ವಿಭಾಗ ಮತ್ತು ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗಗಳನ್ನು ಆರಂಭಿಸಲಿದೆ.

ವೆನ್ಲಕ್‌ ಆಸ್ಪತ್ರೆ ಮಕ್ಕಳ ವಿಭಾಗದ ಹಿಂಭಾಗದಲ್ಲಿ ಹೊಸ ಕಟ್ಟಡ ತಲೆ ಎತ್ತಲಿದ್ದು, ಸೂಪರ್‌ ಸ್ಪೆಷಾಲಿಟಿ ವಿಭಾಗ ನಿರ್ಮಾಣ ಹಂತದಲ್ಲಿದೆ. 176 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ವಿಭಾಗದ ನೂತನ ಕಟ್ಟಡವನ್ನು 15.16 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕಾಮಗಾರಿಗಾಗಿ ಆರೋಗ್ಯ ರಕ್ಷಾ ಸಮಿತಿಯ ಕ್ಲಿನಿಕಲ್‌ ವೆಚ್ಚದಿಂದ 5.10 ಕೋಟಿ ರೂ. ಗಳನ್ನು ಕೆಎಚ್‌ಎಸ್‌ಡಿಆರ್‌ಪಿಗೆ ಪಾವತಿಸಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಸೂಪರ್‌ ಸ್ಪೆಷಾಲಿಟಿ ವಿಭಾಗದ ಕೆಳ ಹಾಗೂ ಮೊದಲ ಅಂತಸ್ತಿನ ಕಾಮಗಾರಿ ಮುಗಿದಿದ್ದು, ಎರಡನೇ ಅಂತಸ್ತಿನ ಕಾಮಗಾರಿ ಪ್ರಗತಿಯಲ್ಲಿದೆ.

ಇದರೊಂದಿಗೆ ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗವೂ ಕಾರ್ಯ ನಿರ್ವಹಿಸಲಿದ್ದು, ಇದು 124 ಹಾಸಿಗೆ ಸಾಮರ್ಥ್ಯ ಹೊಂದಿರುತ್ತದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಹೊಂದಿಕೊಂಡಂತೆ ಈ ವಿಭಾಗವನ್ನು ನಿರ್ಮಿಸಲಾಗುತ್ತಿದ್ದು, ಸರಕಾರದ 10 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ಈ ವಿಭಾಗ ನಿರ್ಮಾಣಗೊಂಡ ಬಳಿಕ ಮೆಡಿಸಿನ್‌ಗೆ ಸಂಬಂಧಿಸಿದ ಎಲ್ಲ ತರಹದ ವಿಭಾಗದ ಸೇವೆಯು ಇಲ್ಲಿ ಲಭ್ಯವಾಗಲಿದೆ. ಎಂಡೋಸ್ಕೋಪಿ, ಕ್ಯಾತ್‌ಲ್ಯಾಬ್‌, ಇಂಟೆನ್ಸಿವ್‌ ಕೊರೊನರಿ ಕೇರ್‌ ಯೂನಿಟ್‌, ಇಂಟೆನ್ಸಿವ್‌ ಕೇರ್‌ ಯೂನಿಟ್‌, ಡಯಾಲಿಸಿಸ್‌ ರಿಕವರಿ ವಾರ್ಡ್‌ ಹಾಗೂ ಜನರಲ್‌ ವಾರ್ಡ್‌ಗಳು ಈ ವಿಭಾಗದಲ್ಲಿ ಕಾರ್ಯನಿರ್ವಹಿಸಲಿವೆ. 

ಹಳೆ ಲಾಂಡ್ರಿಗೆ ಹೊಸ ಕಾಯಕಲ್ಪ
ಬ್ರಿಟಿಷ್‌ ರಾಣಿ ವಿಕ್ಟೋರಿಯಾ ಕಾಲದಲ್ಲಿ ನಿರ್ಮಾಣವಾದ ಹಳೆ ಲಾಂಡ್ರಿ ಆಸ್ಪತ್ರೆ ಆವರಣದಲ್ಲಿದ್ದು, ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ರೋಗಿ ಮತ್ತು ಸಂಬಂಧಿಕರ ಬಟ್ಟೆ ಒಗೆಯಲು ತೊಂದರೆಯಾಗುತ್ತಿದೆ. ಇದನ್ನು ಕೆಡವಿ ಹೊಸ ಲಾಂಡ್ರಿ ನಿರ್ಮಾಣ ಮಾಡುವ ಚಿಂತನೆಯಿದೆ. ರೀಜನಲ್‌ ಎಡ್ವಾನ್ಸ್‌ಡ್‌ ಪೀಡಿಯಾಟ್ರಿಕ್‌ ಕೇರ್‌ ಸೆಂಟರ್‌ನ್ನು (ಆರ್‌ ಎಪಿಸಿಸಿ) ಮಕ್ಕಳ ಆರೋಗ್ಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದಕ್ಕಾಗಿ 3 ಕೋ. ರೂ. ಬಿಡುಗಡೆಯಾಗಿದೆ. ಕಟ್ಟಡದ ಪೈಂಟಿಂಗ್‌, ಮರು ನವೀಕರಣ ಜತೆಗೆ 40 ಕೋಣೆಗಳ ವಿಶೇಷ ವಾರ್ಡ್‌ನ್ನು ನಿರ್ಮಿಸಲಾಗುತ್ತಿದೆ. ಈಗಿರುವ ಎನ್‌ಐ ಸಿಯು ವಿಭಾಗ ಸಂಕೀರ್ಣವಾಗಿದ್ದು, ಅದನ್ನು ವಿಸ್ತರಿಸುವ ಯೋಜನೆಯಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ‘ಉದಯವಾಣಿಯ ಸುದಿನ’ಕ್ಕೆ ತಿಳಿಸಿದ್ದಾರೆ.

170 ವರ್ಷ ಹಳೆಯ ಕಟ್ಟಡ
ವೆನ್ಲಾಕ್‌ಆಸ್ಪತ್ರೆಗೆ ರಾಜ್ಯದ ನಾನಾ ಭಾಗಗಳಿಂದ ರೋಗಿಗಳು ಬರುತ್ತಾರೆ. ಸರಕಾರಿ ಆಸ್ಪತ್ರೆಗಳ ಪೈಕಿ ಉತ್ತಮ ಆಸ್ಪತ್ರೆ ಎಂದೂ ಗುರುತಿಸಿ ಕೊಂಡಿದ್ದರೂ ಆಸ್ಪತ್ರೆ ಕಟ್ಟಡವು 170 ವರ್ಷ ಹಳೆಯದಾಗಿದ್ದು, ಶಿಥಿಲಾ ವಸ್ಥೆಯಲ್ಲಿದೆ. ಅದು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಆತಂಕ ಸೃಷ್ಟಿಸುವಂತಿದೆ. ಅದರಲ್ಲೂ 2 ಬ್ಲಾಕ್‌ನ ಕಟ್ಟಡ ಸಂಪೂರ್ಣ ಹಾಳಾಗಿದೆ. ಈ ಹಿನ್ನೆಲೆ ಯಲ್ಲಿ ಶೀಘ್ರ ಕಟ್ಟಡದ ದುರಸ್ತಿ ನಡೆಸಲಾಗುವುದು. 1000 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯನ್ನು ತಜ್ಞ ವೈದ್ಯರಿಂದ ಉನ್ನತ ಮಟ್ಟದ ಚಿಕಿತ್ಸೆ ಕೊಡಿಸುವ ತರ್ಶರಿ ಕೇರ್‌ (Tertiary Care) ರೀಜನಲ್‌ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ಹಂತ-ಹಂತವಾಗಿ ಅಭಿವೃದ್ಧಿ
ವೆನ್ಲಾಕ್‌ ಅನ್ನು ಮಾದರಿ ಆಸ್ಪತ್ರೆಯಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ನಡೆಯುತ್ತಿದೆ. ಸೂಪರ್‌ ಸ್ಪೆಷಾಲಿಟಿ ವಿಭಾಗ ನಿರ್ಮಾಣ ಹಂತದಲ್ಲಿದೆ. ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗ ಸದ್ಯದಲ್ಲೇ ಸೇರ್ಪಡೆಗೊಳ್ಳಲಿದೆ. ಹಂತ ಹಂತವಾಗಿ ಎಲ್ಲ ಅಭಿವೃದ್ಧಿ ನಡೆಸಲಾಗುವುದು.
ಡಾ| ರಾಜೇಶ್ವರಿ ದೇವಿ, ವೈದ್ಯಕೀಯ
  ಅಧೀಕ್ಷಕಿ, ವೆನ್ಲಾಕ್‌ ಆಸ್ಪತ್ರೆ

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.