Mangaluru ಆಯುಷ್ಮಾನ್ ಯೋಜನೆಯಡಿ ಸಮರ್ಪಕ ಸೇವೆ: ಡಿಸಿ ಸೂಚನೆ
Team Udayavani, Dec 4, 2023, 11:21 PM IST
ಮಂಗಳೂರು: ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ರೋಗಿಗಳಿಗೆ ಸಮರ್ಪಕ ಸೇವೆ ನೀಡಬೇಕು. ಯಾವುದೇ ದೂರು ಬಾರದಂತೆ ರೋಗಿಗಳೊಂದಿಗೆ ವ್ಯವಹರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯುಷ್ಮಾನ್ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡದಿರುವ ಬಗ್ಗೆ ಹಾಗೂ ಹೆಚ್ಚುವರಿ ಮೊತ್ತ ಪಾವತಿಸಿರುವ ಬಗ್ಗೆ ಮಾರ್ಚ್ ತಿಂಗಳಿನಿಂದ ಒಟ್ಟು 16 ದೂರುಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.
ಆಯುಷ್ಮಾನ್ ಯೋಜನೆಯಡಿ ದಾಖಲಾದ ರೋಗಿಗಳಿಗೆ ಯೋಜನೆ ಯಡಿ ಬರುವ ಎಲ್ಲ ಸೌಲಭ್ಯಗಳನ್ನು ಆಸ್ಪತ್ರೆಗಳು ಒದಗಿಸಲೇಬೇಕು. ಅದೇ ರೀತಿ ಸರಕಾರ ನಿಗದಿಪಡಿಸಿದ ಮೊತ್ತವನ್ನೇ ಪಡೆಯಬೇಕು. ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದರು.
16 ದೂರುಗಳಲ್ಲಿ 9 ಪ್ರಕರಣವನ್ನು ಜಿಲ್ಲಾ ಆರೋಗ್ಯಾಧಿಕಾರಿ ಹಂತದಲ್ಲಿ ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್ ಕುಮಾರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಆಯುಷ್ಮಾನ್ ಭಾರತ್ ನೋಡಲ್ ಅಧಿಕಾರಿ ಡಾ| ಸುದರ್ಶನ್, ಪ್ರಾದೇಶಿಕ ಸಮನ್ವಯ ಅಧಿಕಾರಿಗಳಾದ ಡಾ| ಯಶಸ್ವಿನಿ, ಡಾ| ನೌಷಾದ್ ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.