ಮುಂದುವರಿದ ಸಮೀಕ್ಷೆ, ಫಾಗಿಂಗ್, ನಿಯಂತ್ರಣ ಕಾರ್ಯಾಚರಣೆ
Team Udayavani, Jul 22, 2019, 5:16 AM IST
ಮಂಗಳೂರು: ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯಿಂದ ವಿವಿಧಡೆ ಸಮೀಕ್ಷೆ, ಪರಿಸರ ಸ್ವಚ್ಛತೆ ಹಾಗೂ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯ ರವಿವಾರ ವ್ಯಾಪಕವಾಗಿ ನಡೆಯಿತು.
ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಗುಜ್ಜರಕೆರೆ ವ್ಯಾಪ್ತಿಯಲ್ಲಿ ಸುಮಾರು 300ಕ್ಕೂ ಅಧಿಕ ಮಂದಿಯಿಂದ ಸ್ವಚ್ಛತೆ ಕಾರ್ಯ ನಡೆಯಿತು.
ತಹಶೀಲ್ದಾರ ಗುರುಪ್ರಸಾದ್, ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್ ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದ ಉಸ್ತುವಾರಿಯನ್ನು ನೋಡಿಕೊಂಡರು. ನಗರದ ಭಗಿನಿ ಸಮಾಜ, ಎಂಫಸಿಸ್ ಆವರಣ, ಮಂಗಳೂರು ಕ್ಲಬ್ ಆವರಣ, ಮುಳಿಹಿತ್ಲು ಜಂಕ್ಷನ್, ಕುಲಾಲ್ ಭವನ ಸಮೀಪ ಸಹಿತ ನಗರದ 71 ಕಡೆಗಳಲ್ಲಿ ಸೊಳ್ಳೆ ಉತ್ಪಾದನ ತಾಣಗಳನ್ನು ನಾಶಪಡಿಸಲಾಗಿದೆ. ಪಾಲಿಕೆಯ ಎಂಪಿಡಬ್ಲ್ಯು ಸಿಬಂದಿ, ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಸೇರಿ ಒಟ್ಟು 70 ಜನರನ್ನು ಆರು ವಿಭಾಗಗಳಾಗಿ ವಿಂಗಡಿಸಿ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಡೆಂಗ್ಯೂ ಮತ್ತು ಜ್ವರ ಹೆಚ್ಚು ಕಾಣಿಸಿಕೊಂಡಿರುವ ಹಾಗೂ ಸಂಭಾವ್ಯ ಪ್ರದೇಶಗಳನ್ನು ಆದ್ಯತೆಯಾಗಿಟ್ಟುಕೊಂಡು ರಾಸಾಯನಿಕ ಸಿಂಪಡಣೆ ಕಾರ್ಯ ನಡೆಸಲಾಗುತ್ತಿದೆ.
ಹೊಸದಾಗಿ ಇನ್ನೂ ನಾಲ್ಕು ಫಾಗಿಂಗ್ ಯಂತ್ರಗಳು
ಮನಪಾ ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಹೆಚ್ಚಾ ಗುತ್ತಿದ್ದು, ಸೊಳ್ಳೆಗಳ ನಾಶಕ್ಕಾಗಿ ಫಾಗಿಂಗ್ ಕಾರ್ಯಾಚರಣೆಯನ್ನು ಚುರುಕು ಗೊಳಿಸಲಾಗುತ್ತಿದೆ. ಪಾಲಿಕೆ ಅಧೀನದಲ್ಲಿ ನಾಲ್ಕು ಫಾಗಿಂಗ್ ಯಂತ್ರಗಳಿದ್ದವು. ಕೆಲವು ದಿನಗಳ ಹಿಂದೆ ಮತ್ತೆ ನಾಲ್ಕು ಫಾಗಿಂಗ್ ಯಂತ್ರಗಳನ್ನು ಖರೀದಿಸಲಾಗಿತ್ತು. ಫಾಗಿಂಗ್ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇನ್ನೆರಡು ದಿನಗಳ ಒಳಗಾಗಿ ಮತ್ತೆ ನಾಲ್ಕು ಫಾಗಿಂಗ್ ಯಂತ್ರಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಒಟ್ಟು 12 ಫಾಗಿಂಗ್ ಯಂತ್ರಗಳ ಮೂಲಕ ರೋಗ ಹರಡುವ ಸೊಳ್ಳೆಗಳ ನಾಶಕ್ಕಾಗಿ ಬಳಸಲಾಗುತ್ತದೆ.
ಸಾಂಕ್ರಾಮಿಕ ರೋಗ ಹರಡುವ ಜೀವಿಗಳಿಗೆ ಆಸ್ಪದ ನೀಡುವ ಅಂಗಡಿ – ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳು ರವಿವಾರ ಸ್ವಚ್ಛತೆ ಕಾಪಾಡದ ಹಿನ್ನೆಲೆಯಲ್ಲಿ ವಿವಿಧ ಖಾಸಗಿ ಕಟ್ಟಡ ಸಹಿತ ಇತರೆ ಕಟ್ಟಡಗಳ ಮಾಲಕರಿಗೆ 85,000 ರೂ. ದಂಡ ವಿಧಿಸಿದ್ದಾರೆ.
ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸಲು ಜಿಲ್ಲಾಡಳಿತ, ಪಾಲಿಕೆ, ಆರೋಗ್ಯ ಇಲಾಖೆ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದಕ್ಕಾಗಿ ಅಧಿಕಾರಿಗಳ ರಜಾದಿನವಾದ ರವಿವಾರವೂ ಕರ್ತವ್ಯ ನಿರ್ವ ಹಿಸಿದ್ದಾರೆ. ಸಮೀಕ್ಷೆ, ಸ್ವಚ್ಛತೆ, ದಂಡ ವಸೂಲಾತಿ ಸಹಿತ ಡೆಂಗ್ಯೂ ಕಾರ್ಯಾಚರಣೆಯಲ್ಲಿ ಅಧಿಕಾರಿ ಗಳು ಸಕ್ರೀಯರಾಗಿ ಕಾರ್ಯ ನಿರ್ವಹಿಸಿದರು.
ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.