ಜನರ ಸಮಸ್ಯೆಗೆ ಸ್ಪಂದಿಸಿ : ಲೋಬೋ


Team Udayavani, Oct 28, 2018, 11:10 AM IST

28-october-8.gif

ಸುರತ್ಕಲ್‌ : ಆರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸಂಸದರು ಆಗಮಿಸಿ ಅಹವಾಲು ಸ್ವೀಕರಿಸುವ ಮನಸ್ಸು ಮಾಡಿಲ್ಲ. ಹೋರಾಟಕ್ಕೆ ಮಾನವೀಯ ಸ್ಪಂದನೆ ನೀಡದಿದ್ದರೆ ಅಂಥವರು ಜನಪ್ರತಿನಿಧಿಗಳಾಗಿರುವುದು ಖೇದಕರ ಎಂದು ಮಾಜಿ ಶಾಸಕ ಜೆ.ಆರ್‌. ಲೋಬೋ ಹೇಳಿದರು.

ಸುರತ್ಕಲ್‌ನಲ್ಲಿ ನಡೆಯುತ್ತಿರುವ ಟೋಲ್‌ಗೇಟ್‌ ವಿರೋಧಿ  ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಲ್ಲಿನ ಹೆದ್ದಾರಿ, ಮೇಲ್ಸೇತುವೆ, ಕೆಳ ರಸ್ತೆಗಳು ಕಳಪೆಯಾಗಿದೆ. ಬಿಕರ್ನಕಟ್ಟೆ ಹೆದ್ದಾರಿಯ ಮೇಲ್ಸೇತುವೆ ಸಮೀಪ ಮೂಡಬಿದಿರೆಗೆ ಸಾಗುವ ರಸ್ತೆ ಗ್ರಾಮೀಣ ರಸ್ತೆಗಿಂತಲೂ ಕೆಟ್ಟದಾಗಿದೆ. ಇಡೀ ದೇಶದಲ್ಲಿ ಏಕಮುಖ ಮೇಲ್ಸೇತುವೆ ಇದ್ದರೆ ಬಹುಶಃ ಅದು ಜಿಲ್ಲೆಯಲ್ಲಿ ಮಾತ್ರ. ಗುತ್ತಿಗೆದಾರರ ಹೊಟ್ಟೆ ತುಂಬಿಸಲು ಟೋಲ್‌ಗ‌ಳು ಬೇಕಾಗಿಲ್ಲ ಎಂದರು.

ಸಂಸದರಾಗಿ ಒಂದು ಟೋಲ್‌ ಕೇಂದ್ರ ತೆಗೆಸಲು ಸಾಧ್ಯವಿಲ್ಲ ಎಂದ ಮೇಲೆ ಇವರ ಸಾಮರ್ಥ್ಯ ಇಷ್ಟೇ ಎಂದು ತಿಳಿದುಕೊಳ್ಳುವಂತಾಗಿದೆ. ಕಳಪೆ ಹೆದ್ದಾರಿ ನಿರ್ಮಾಣದಿಂದಾಗಿ ನಿತ್ಯ ಹಲವು ಮಂದಿಯ ಪ್ರಾಣ ಹಾನಿ ಮಾಡುತ್ತಿರುವ ಈ ರಸ್ತೆಗೆ ಟೋಲ್‌ ಕಟ್ಟಬೇಕಾಗಿಲ್ಲ. ನ. 1ರ ಬಳಿಕವೂ ಈ ಟೋಲ್‌ ಕೇಂದ್ರ ಮುಂದುವರಿದಲ್ಲಿ ಮುಂದಿನ ಉಗ್ರ ಹೋರಾಟಕ್ಕೆ ಸಂಸದರು ಹೊಣೆಯಾಗುತ್ತಾರೆ ಎಂದು ಮಿಥುನ್‌ ರೈ ಎಚ್ಚರಿಸಿದರು.

ಮಾಜಿ ಶಾಸಕ ವಿಜಯ್‌ಕುಮಾರ್‌ ಶೆಟ್ಟಿ, ಮಂಗಳೂರು ಉತ್ತರ ಯುವ ಕಾಂಗ್ರೆಸ್‌ ಅಧ್ಯಕ್ಷ ಗಿರೀಶ್‌ ಆಳ್ವ, ಯುವ ಕಾಂಗ್ರೆಸ್‌ ಮುಖಂಡ ಉತ್ತಮ್‌ ಆಳ್ವ, ಹಬೀಬ್‌ ಕಾಟಿಪಳ್ಳ, ವಿವಿಧ ಸಂಘಟನೆಗಳ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು, ಕಾರ್ಮಿಕ ಸಂಘಟನೆಗಳ ನಾಯಕರು ಭಾಗವಹಿಸಿದ್ದರು.

ಅಲ್ಲಿ ಕೇಂದ್ರಕ್ಕೆ ಪತ್ರ, ಇಲ್ಲಿ ಗುತ್ತಿಗೆ: ಮಿಥುನ್‌ ರೈ ವ್ಯಂಗ್ಯ
ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಮಾತ ನಾಡಿ, ಸಂಸದರು ಅಸಹಾಯಕತೆ ವ್ಯಕ್ತ ಪಡಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ. ಇದೇ ಸಂದರ್ಭ ಇತ್ತ ಕಡೆ ಗುತ್ತಿಗೆ ನೀಡಲು ಮೌನ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸುತ್ತಿದ್ದಾರೆ. ಭಾಷಾ ಜ್ಞಾನದ ಕೊರತೆಯಿಂದ ಯಾವ ಭಾಷೆಯಲ್ಲಿ ಪತ್ರ ಬರೆದಿದ್ದಾರೆ ಎಂಬುದು ತಿಳಿದಿಲ್ಲ. ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯವರಿಗೆ ಕನ್ನಡ ಓದಲು ತಿಳಿದಿಲ್ಲ. ಹೀಗಾಗಿ ನೇರವಾಗಿ ಮಾಡುವ ಕೆಲಸವನ್ನು ಪತ್ರ ಬರೆದು ವಿಳಂಬಿಸುತ್ತಿದ್ದಾರೆ. ಇದು ಒಂದು ನಾಟಕ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.