ಶರವು ದೇಗುಲದಲ್ಲಿ ಅಂಗಾರಕ ಸಂಕಷ್ಟಿ
Team Udayavani, Apr 4, 2018, 10:45 AM IST
ಮಹಾನಗರ: ಶರವು ಶ್ರೀ ಮಹಾಗಣಪತಿ ದೇವಾಲಯದಲ್ಲಿ ಸಂಭ್ರಮದ ಅಂಗಾರಕ ಸಂಕಷ್ಟಿ ವ್ರತಾಚರಣೆ ಮಂಗಳವಾರ ನಡೆಯಿತು. ಬೆಳಗ್ಗೆ 7 ಗಂಟೆಯಿಂದಲೇ ದೇಗುಲಕ್ಕೆ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಸುಮಾರು 5,000ಕ್ಕೂ ಅಧಿಕ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ದೇವರಿಗೆ ಗರಿಕೆ, ಹಿಂಗಾರ, ಹೂ ಅರ್ಪಿಸಿ, ಪಂಚಕಜ್ಜಾಯ, ಗಣಪತಿ ಹೋಮ, ಅಪ್ಪದ ಪೂಜೆ ಸೇವೆ ಸಲ್ಲಿಸಿದರು.
ಶರವು ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ ಮತ್ತು ಸುದೇಶ್ ಶಾಸ್ತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 11.30ರಿಂದ ಮಹಾಗಣಯಾಗ ಪೂರ್ಣಾಹುತಿ, 12ಕ್ಕೆ ಮಹಾಗಣಪತಿ ದೇವರಿಗೆ ಮಹಾಪೂಜೆ ನಡೆಯಿತು.
ಎಸ್. ರಾಹುಲ್ ಶಾಸ್ತ್ರಿ, ಪ್ರಶಾಂತ್ ಆಚಾರ್, ವಿಟ್ಠಲ್ ಭಟ್, ಗಣೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆ ನೆರವೇರಿತು. ಅಂಗಾರಕ ಸಂಭ್ರಮದಲ್ಲಿ ಶರವು ದೇಗುಲವನ್ನು ಫಲಪುಷ್ಪಗಳಿಂದ ಅಲಂಕರಿಸಲಾಗಿತ್ತು. ಅಲಂಕಾರಕ್ಕೆ ತೋರಣ, ಸೀಯಾಳ, ಹೂವುಗಳ ಬಳಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.