ಪಠ್ಯದಿಂದ ಕಯ್ಯಾರ ಕಿಂಞಣ್ಣ ರೈ ಕೈ ಬಿಟ್ಟಿರುವುದು ಸರಿಯಲ್ಲ: ಐಕಳ ಹರೀಶ್ ಶೆಟ್ಟಿ

Team Udayavani, Jun 25, 2022, 1:28 PM IST

ಪಠ್ಯದಿಂದ ಕಯ್ಯಾರ ಕಿಂಞಣ್ಣ ರೈ ಕೈ ಬಿಟ್ಟಿರುವುದು ಸರಿಯಲ್ಲ: ಐಕಳ ಹರೀಶ್ ಶೆಟ್ಟಿ

ಮಂಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು  ಏಳನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದಗಳು ಎಂಬ ಪಠ್ಯದಲ್ಲಿ ಹಿಂದೆ ಕಯ್ಯಾರ ಕಿಂಞಣ್ಣ  ರೈಗಳು ಕರ್ನಾಟಕ ಏಕೀಕರಣಕ್ಕಾಗಿ ತನ್ನ ಕೊನೆ ಉಸಿರಿನ ತನಕ ಹೋರಾಟ ಮಾಡಿದ್ದರು ಎಂದಿತ್ತು. ಈಗ ಆ ವಾಕ್ಯವನ್ನು ತೆಗೆದು, ಮಂಜೇಶ್ವರ ಗೋವಿಂದ ಪೈಗಳ ಹೆಸರನ್ನು ಸೇರಿಸಲಾಗಿದೆ. ಆದರೆ ಗೋವಿಂದ ಪೈಗಳು 1963 ರಲ್ಲಿ ವೃದ್ಧಾಪ್ಯದಿಂದಾಗಿ ನಿಧನ ಹೊಂದಿದ್ದು, ಅವರಿಗೆ ಏಕೀಕರಣ ವಿಷಯದಲ್ಲಿ ಪರಿಣಾಮಕಾರಿ ಹೋರಾಟ ಮಾಡಲು ಅವಕಾಶ ಸಿಗಲಿಲ್ಲ. 1952ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾಗಿದ್ದು, ಆ ಬಳಿಕ ಅವರು ಬದುಕಿದ್ದು ಕೇವಲ 7 ವರ್ಷ ಮಾತ್ರ. ಆಗ ಅವರು ಅಸ್ವಸ್ಥತೆಯಿಂದಿದ್ದು, ತನ್ನ ಜತೆಗೆ ಶಿಷ್ಯ ಕಯ್ಯಾರ ಕಿಂಞಣ್ಣ ರೈಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಅದೇ ಕಯ್ಯಾರ ಕಿಂಞಣ್ಣ ರೈ ಅವರು 2018 ರಲ್ಲಿ ನಿಧನ ಹೊಂದುವವರೆಗೂ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು ಎಂದು ಬಲವಾಗಿ ಹೇಳುತ್ತಾ ಹೋರಾಟ ಮಾಡಿದ್ದರು. ಅಂಥವರ ಹೆಸರನ್ನು ಪಠ್ಯದಿಂದ ಕೈಬಿಟ್ಟಿರುವುದು ಯಾವುದೇ ಕಾರಣಕ್ಕೂ ಸರಿಯಲ್ಲ.

ಗೋವಿಂದ ಪೈ ಅವರ ಹೆಸರನ್ನು ಸೇರಿಸಿರುವುದಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ಕವಿ ಕಯ್ಯಾರ ಹೆಸರನ್ನು ತೆಗೆದು ಬಂಟ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ.  ಆದ್ದರಿಂದ ಅವರ ಹೆಸರನ್ನು ಕೂಡಲೇ ಪಠ್ಯದಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಐಕಳ ಹರೀಶ್ ಶೆಟ್ಟಿ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಕಯ್ಯಾರ ಕಿಂಞಣ್ಣ ರೈ ಅವರು ಬಂಟರ ಹೆಮ್ಮೆಯಾಗಿದ್ದು, ಅವರು ಇಡೀ ತುಳುನಾಡಿನ ಪ್ರತೀಕವೂ ಆಗಿದ್ದಾರೆ. ಆದ್ದರಿಂದ ಅವರಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಮಾಡುವ ಯಾವುದೇ ಅವಮಾನವು ಇಡೀ ಬಂಟ ಸಮುದಾಯ ಹಾಗೂ ಇಡೀ ತುಳುನಾಡಿಗೆ ಮಾಡುವ ಅನ್ಯಾಯವಾಗುತ್ತದೆ. ಆದ್ದರಿಂದ ಅವರ ಹೆಸರನ್ನು ಪಠ್ಯದಲ್ಲಿ ಸೇರಿಸಲೇ ಬೇಕು ಎಂದು ಐಕಳ ಹರೀಶ್ ಶೆಟ್ಟಿ  ಆಗ್ರಹಿಸಿದ್ದಾರೆ.

ಜೂನ್ 30 ರಂದು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ದವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಲು ಒಕ್ಕೂಟ ತೀರ್ಮಾನಿಸಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಐಕಳ‌ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ,  ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಹೆಗ್ಡೆ,  ಜೊತೆ ಕಾರ್ಯದರ್ಶಿ ಸತೀಶ್ ಅಡಪ  ಸಂಕಬೈಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.