![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 21, 2024, 11:09 PM IST
ಕಿನ್ನಿಗೋಳಿ: ಐಕಳಬಾವ ಕಾಂತಬಾರೆ ಬೂದಾಬಾರೆ ಕಂಬಳ ಫೆ. 3ರ ಬೆಳಗ್ಗೆ 8.30ರಿಂದ ನಡೆಯಲಿದೆ. ಈ ಬಾರಿ ಆಧುನಿಕ ತಂತ್ರಜ್ಞಾನ ಬಳಿಸಿ ಗೇಟ್ ಸಿಸ್ಟಂ ಹಾಗೂ ಫೋಟೋ ಫಿನಿಶ್ ಕಾರ್ಯರೂಪಕ್ಕೆ ತರಲಾಗುವುದು.
ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಡಾ| ಕೆ.ಪಿ.ಕೆ. ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಉಮಾನಾಥ ಕೋಟ್ಯಾನ್, ಜಮೀರ್ ಅಹಮದ್, ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಆಳ್ವ ಭಾಗವಹಿಸಲಿದ್ದಾರೆ ಎಂದರು.
“ಕರಾವಳಿ ರತ್ನ’ ಬಿರುದು
ಐಕಳ ಕಂಬಳದ ಗೌರವಾಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ “ಕರಾವಳಿ ರತ್ನ’ ಬಿರುದು ನೀಡಿ ಗೌರವಿಸಲಾಗುವುದು ಎಂದರು.
ಕಂಬಳ ಮುಂಬಯಿ ಸಮಿತಿಯ ಅಧ್ಯಕ್ಷ ಕುಶಾಲ್ ಭಂಡಾರಿ ಐಕಳ ಬಾವ, ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ ಐಕಳ ಬಾವ, ಉಪಾಧ್ಯಕ್ಷ ಕೃಷ್ಣ ಮಾರ್ಲ, ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡ ಮನೆ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂಚಾಲಕ ಐಕಳ ಮುರಳೀಧರ ಶೆಟ್ಟಿ, ಪಂಚಾಯತ್ ಸದಸ್ಯ ದಯೇಶ್ ಕೋಟ್ಯಾನ್, ಜಯಪಾಲ ಶೆಟ್ಟಿ ಐಕಳ, ಶ್ರೀಶ ಸರಾಫ್ ಐಕಳ ಪತ್ರಿಕಾಗೋಷ್ಠಿಯಲ್ಲಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.