ಐಶ್ವರ್ಯಾ ರೈ ದೇವಾಲಯಗಳಿಗೆ ಭೇಟಿ

Team Udayavani, Apr 10, 2017, 4:05 PM IST

aishwarya-rai.jpg

ಮಂಗಳೂರು: ಬಾಲಿವುಡ್‌ನ‌ ಖ್ಯಾತ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ರವಿವಾರ ಮಂಗಳೂರಿನ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸಂಜೆ ಮುಂಬಯಿಗೆ ವಾಪಸಾದರು.

ಐಶ್ವರ್ಯಾ ಅವರ ತಂದೆ ಕೃಷ್ಣರಾಜ್‌ ರೈ ಅವರು ಇತ್ತೀಚೆಗೆ ಮುಂಬಯಿಯಲ್ಲಿ ನಿಧನ ಹೊಂದಿದ್ದು, ಅವರ ಪಿಂಡ ಪ್ರದಾನ ಕಾರ್ಯಾಕ್ರಮದಲ್ಲಿ ಭಾಗವಹಿಸಲು ಅವರು ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದರು.

ಉಪ್ಪಿನಂಗಡಿಯಲ್ಲಿ ಈ ಸಂಬಂಧ ವಿಧಿ ವಿಧಾನಗಳನ್ನು ನೆರವೇರಿಸಿ, ಶನಿವಾರ ರಾತ್ರಿ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದರು.

ರವಿವಾರ ಬೆಳಗ್ಗೆ ಸುಮಾರು 11 ಗಂಟೆಗೆ ಐಶ್ವರ್ಯಾ ರೈ, ಪುತ್ರಿ ಆರಾಧ್ಯಾ, ತಾಯಿ ಬೃಂದಾ ರೈ, ಸಹೋದರ ಆದಿತ್ಯ ರೈ ಜತೆಗೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರದ ಕೆರೆಯ ಪಕ್ಕದಲ್ಲಿ ಕೃಷ್ಣರಾಜ್‌ ರೈ ಅವರ ಪಿಂಡ ಪ್ರದಾನ ಕಾರ್ಯಾಕ್ರಮದ ವಿಧಿವಿಧಾನಗಳನ್ನು ನೆರವೇರಿಸಿದರು. ಐಶ್ವರ್ಯಾ ಅವರ ಸಹೋದರ ಆದಿತ್ಯ ರೈ ನೇತೃತ್ವದಲ್ಲಿ ಕ್ರಮಗಳನ್ನು ನಡೆಸಲಾಯಿತು. ಅನಂತರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿದ ಐಶ್ವರ್ಯಾ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಾವು ತಂಗಿದ್ದ ಖಾಸಗಿ ಹೊಟೇಲ್‌ಗೆ ತೆರಳಿ ಊಟ ಮುಗಿಸಿ ವಿಶ್ರಾಂತಿ ಪಡೆದರು. ಸಂಜೆ ಜೆಟ್‌ ಏರ್‌ವೆಸ್‌ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬಯಿಗೆ ಮರಳಿದರು.

ಟಾಪ್ ನ್ಯೂಸ್

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.