“ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನೂ ಅಳವಡಿಸಿಕೊಳ್ಳಿ’
Team Udayavani, Feb 26, 2017, 3:24 PM IST
ಬಡಗನ್ನೂರು : ಶಿಕ್ಷಣದ ಒಟ್ಟಿಗೆ ಮೌಲ್ಯಾಧಾರಿತ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಕಾರ್ಯದರ್ಶಿ ವಿದ್ಯಾಗೌರಿ ಕರೆ ನೀಡಿದರು.
ಪಟ್ಟೆ ಶ್ರೀ ಕೃಷ್ಣ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಸಂಸ್ಥಾಪಕ ಲಾರ್ಡ್ ಬೇಡನ್ ಪೊವೆಲ್ ಅವರ ಜನ್ಮ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪೂರಕವಾಗಿದೆ. ಮಕ್ಕಳು ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಈ ಮೂಲಕ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮವು ವಿದ್ಯಾಸಂಸ್ಥೆಯ ಅಧ್ಯಕ್ಷ ವೇಣುಗೋಪಾಲ ಭಟ್ ಪಿ. ಅಧ್ಯಕ್ಷತೆಯಲ್ಲಿ ನಡೆಯಿತು.
ಕಾಲೇಜಿನ ಸಂಚಾಲಕ ಶರೀಷ್ ಪಿ.ಬಿ. ಧ್ವಜಾರೋಹಣ ಮಾಡಿದರು. ಬಳಿಕ ವ್ಯಾಯಾಮ ಮತ್ತು ಸರ್ವಧರ್ಮ ಪ್ರಾರ್ಥನೆ ನಡೆಯಿತು. ಅನಂತರ ಶ್ರೀ ದೇಯಿಬೈದೆತಿ ಔಷಧಿ ವನ ವೀಕ್ಷಣೆ ನಡೆಯಿತು.
ಅನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಕಾಲೇಜಿನ ಪ್ರಾಚಾರ್ಯೆ ನವ್ಯತಾ ರೈ, ಪಾಪೆಮಜಲು ಗೈಡ್ ಶಿಕ್ಷಕಿ ಮೇಬಲ್, ಬೆಥೆನಿ ಪ್ರೌಢ ಶಾಲಾ ಶಿಕ್ಷಕಿ ಮೈತ್ರೇಯಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ, ಪ್ರೌಢ ಶಾಲೆ, ಬೆಥೆನಿ ಪ್ರೌಢ ಶಾಲೆ, ರಾಮಕೃಷ್ಣ ಪ್ರೌಢ ಶಾಲೆ, ಪಾಪೆಮುಜಲು ಸರಕಾರಿ ಪ್ರೌಢ ಶಾಲೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಹೀಗೆ ಒಟ್ಟು 5 ಶಾಲೆಯ 106 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದರು.
ಪುತ್ತೂರು ರಾಮಕೃಷ್ಣ ಪ್ರೌಢ ಶಾಲಾ ಎ.ಎಲ….ಟಿ.ಸಿ. ತರಬೇತುದಾರ ಶಿಕ್ಷಕಿ ಸುನೀತಾ ಅವರು ಪ್ರಾಸ್ತಾವಿಕ ಮಾತನಾಡಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಂಕರಿ ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನಾ ವಂದಿಸಿದರು. ಶಾಲಾ ಗೈಡ್ ಶಿಕ್ಷಕ ಗೋಪಾಲಕೃಷ್ಣ ಭಟ್ ಕಾರ್ಯಕ್ರಮ ನಿರೂಪಣೆ ಮಾಡಿದರು ಸಭೆಯಲ್ಲಿ ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಾಪಕಕರು, ವಿದ್ಯಾರ್ಥಿಗಳು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Grandfather: ಬಡ ತಾತನ ಹೃದಯ ಶ್ರೀಮಂತಿಕೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.