Rain ದಕ್ಷಿಣ ಕನ್ನಡ, ಉಡುಪಿ: ಸಾಧಾರಣ ಮಳೆ
Team Udayavani, Sep 2, 2024, 11:52 PM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಸಾಮಾನ್ಯವಾಗಿದೆ. ಮುಂಜಾನೆ ವೇಳೆ ಮಳೆ ಸುರಿದಿದ್ದು, ಬಳಿಕ ತುಸು ಕಡಿಮೆಯಾಗಿದೆ. ಹಗಲಿನಲ್ಲಿ ಮೋಡ ಕವಿದ ಬಿಸಿಲಿನ ವಾತಾವರಣವಿತ್ತು. ಸಂಜೆಯ ಬಳಿಕ ಮತ್ತೆ ದಟ್ಟ ಮೋಡ ಕವಿದು ಆಗಾಗ್ಗೆ ಮಳೆ ಸುರಿದಿದೆ.
ಉಡುಪಿ: ಜಿಲ್ಲಾದ್ಯಂತ ಸೋಮವಾರ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಸಾಧಾರಣ ಮಳೆಯಾಗಿದೆ. ಉಡುಪಿ, ಬೈಂದೂರು, ಕಾಪು, ಬ್ರಹ್ಮಾವರ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ರವಿವಾರ ತಡರಾತ್ರಿ ಮಣಿಪಾಲ, ಉಡುಪಿ ಸುತ್ತಮುತ್ತ ಸ್ವಲ್ಪ ಹೊತ್ತು ಉತ್ತಮ ಮಳೆ ಸುರಿದಿದೆ.
ಇಂದು ಎಲ್ಲೋ ಅಲರ್ಟ್
ಮಂಗಳವಾರಕ್ಕೆ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಸದ್ಯ ಬುಧವಾರದಿಂದ ಯಾವುದೇ ಅಲರ್ಟ್ ಇಲ್ಲ. ಸಮುದ್ರದಲ್ಲಿ ಗಂಟೆಗೆ 35-45 ಕಿ.ಮೀ. ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.