ಪಿಯುಸಿ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್ 

Team Udayavani, Mar 1, 2018, 10:36 AM IST

1-Mar-3.jpg

ಮಹಾನಗರ: ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ ಮಾ. 1ರಿಂದ ಎ. 17ರ ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆಸಲಿದ್ದು, ಜಿಲ್ಲೆಯ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ 38,633 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಸಂಪೂ ರ್ಣ ಸಜ್ಜಾಗಿದ್ದು, ಈಗಾಗಲೇ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕೆಮರಾ ಅಳವಡಿಸಲಾಗಿದೆ. ಜತೆಗೆ ಎಲ್ಲ ಕೇಂದ್ರಗಳ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳ ದಾಖಲೆಗಳನ್ನು ಈಗಾಗಲೇ ನಿಯೋಜಿತ ಅಧಿಕಾರಿಗಳು ಪಡೆದುಕೊಂಡಿದ್ದು, ಎಲ್ಲ ಕೇಂದ್ರಗಳಲ್ಲೂ ಸೂಕ್ತ ರೀತಿಯಲ್ಲಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 38,633 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಒಟ್ಟು 19,567 ಗಂಡು ಮಕ್ಕಳು ಹಾಗೂ 19,066 ಹೆಣ್ಣು ಮಕ್ಕಳು ಸೇರಿ ಒಟ್ಟು 38,633 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 34,863 ರೆಗ್ಯುಲರ್‌ ವಿದ್ಯಾರ್ಥಿಗಳು, 1,400 ಮಂದಿ ರಿಪೀಟರ್‌, 2,370 ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4,901, ವಾಣಿಜ್ಯ ವಿಭಾಗದಲ್ಲಿ 17,045 ಹಾಗೂ ವಿಜ್ಞಾನ ವಿಭಾಗದಲ್ಲಿ 16,687 ವಿದ್ಯಾರ್ಥಿಗಳಿದ್ದಾರೆ. 

ಒಟ್ಟು 54 ಕೇಂದ್ರಗಳು
ಜಿಲ್ಲೆಯಲ್ಲಿ ಒಟ್ಟು 54 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ತಾಲೂಕುವಾರು ನೋಡುವುದಾದರೆ ಮಂಗಳೂರು 25, ಮೂಡಬಿದಿರೆ 5, ಬಂಟ್ವಾಳ 7, ಪುತ್ತೂರು 9, ಬೆಳ್ತಂಗಡಿ 5 ಹಾಗೂ ಸುಳ್ಯದ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ.

ಹೊಸ ಸೇರ್ಪಡೆ
ಈ ಬಾರಿ ಮೂಡಬಿದಿರೆ ಎಕ್ಸಲೆಂಟ್‌ ಪ.ಪೂ. ಕಾಲೇಜು, ವಾಮಂಜೂರು ಸಂತ ರೇಮಂಡ್ಸ್‌ ಪ.ಪೂ. ಕಾಲೇಜು, ಬೆಳ್ತಂಗಡಿ ಗುರುದೇವ ಪ.ಪೂ.ಕಾಲೇಜುಹೊಸದಾಗಿ ಸೇರ್ಪಡೆಗೊಂಡ ಮೂರು ಪರೀಕ್ಷಾ ಕೇಂದ್ರಗಳಾಗಿವೆ.

ಗೊಂದಲ ಬಿಟ್ಟು ಪರೀಕ್ಷೆ ಬರೆಯಿರಿ

.ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೆರಳುವ ವೇಳೆ ಗೊಂದಲಗಳಿಗೆ ಆಸ್ಪದ ಕೊಡಬೇಡಿ. ಹಾಲ್‌ ಟಿಕೆಟ್‌ ಮರೆಯದಿರಿ.

.ಪ್ರಸ್ತುತ ಪರೀಕ್ಷೆಗಳು ಆರಂಭಗೊಂಡಿದ್ದು, ಕೊನೆಯ ಅವಧಿಯಲ್ಲಿ ಗೊಂದಲದಿಂದ ಎಲ್ಲವೂ ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ರೀತಿ ಗೊಂದಲಕ್ಕೊಳಗಾಗಿ ನಿದ್ದೆ ಬಿಟ್ಟು ಓದುವುದು ಸರಿಯಲ್ಲ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

. ಬೆಳಗ್ಗೆ ಬೇಗ ಎದ್ದು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ. ಪರೀಕ್ಷೆಯು 10.15ಕ್ಕೆ ಆರಂಭಗೊಳ್ಳಲಿದ್ದು, ನಿಗದಿತ ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಿ. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೊಬೈಲ್‌ ಬಳಕೆ ಬೇಡಿ.

. ಪೋಷಕರು ವಿದ್ಯಾರ್ಥಿಗಳಿಗೆ ವಿನಾಕಾರಣ ಕಿರುಕುಳ ನೀಡದೆ ಓದುವಂತೆ ಒತ್ತಡ ಹೇರಬಾರದು.ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾದರೆ ಪೋಷಕರು ಅವರನ್ನು ಮಾನಸಿಕ ತಜ್ಞರಲ್ಲಿ ತೋರಿಸುವುದು ಅಗತ್ಯ.

.ಪರೀಕ್ಷಾ ಸಮಯದಲ್ಲಿ ಮೆಡಿಟೇಶನ್‌ ಮಾಡುವ ಅಭ್ಯಾಸ ಹೊಂದಿರಬೇಕು. ಇದರಿಂದ ಮನಸ್ಸು ನಿರ್ಮಲವಾಗುವ ಜತೆಗೆ ಓದಿದ್ದು ಅರ್ಥವಾಗುತ್ತದೆ. ಪೋಷಕರು ಪರೀಕ್ಷಾ ದಿನಗಳು ಹತ್ತಿರ ಬಂದಾಗ ಇಂತಿಷ್ಟೇ ಅಂಕ ತೆಗೆಯಬೇಕು ಎಂಬ ಟಾರ್ಗೆಟ್‌ ಕೂಡ ನೀಡಬಾರದು.

. ವಿದ್ಯಾರ್ಥಿಗಳು ಹೆಚ್ಚು ಒತ್ತಡಕ್ಕೆ ಒಳಗಾದರೆ ಎದೆಬಡಿತ ಜಾಸ್ತಿಯಾಗುವ ಸಾಧ್ಯತೆ ಇರುತ್ತದೆ. ಇದರಿಂದ ಪದೇ ಪದೇ ಶೌಚಕ್ಕೆ ತೆರಳುವ ಸಮಸ್ಯೆ ಕಂಡುಬರುತ್ತದೆ. ಈ ಕುರಿತು ಹೆತ್ತವರು ಎಚ್ಚರಿಕೆಯಿಂದಿರುವುದು ಅಗತ್ಯ. 

ಪೂರ್ಣ ರೀತಿಯಲ್ಲಿ ಸಜ್ಜು
ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, 54 ಕೇಂದ್ರಗಳಲ್ಲಿ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ಎದುರಿಸಲು ಇಲಾಖೆ ಪೂರ್ಣ ರೀತಿಯಲ್ಲಿ ಸಜ್ಜಾಗಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಇಒಗಳು, ಹಿರಿಯ ಪ್ರಾಂಶುಪಾಲರು, ತಹಶೀಲ್ದಾರ್‌ಗಳು ಪರೀಕ್ಷೆಯ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ.
ತಿಮ್ಮಯ್ಯ, ಉಪನಿರ್ದೇಶಕರು,
   ಪ.ಪೂ.ಶಿಕ್ಷಣ ಇಲಾಖೆ, ದ.ಕ.

ಆತ್ಮವಿಶ್ವಾಸ ತುಂಬಿ
ಪರೀಕ್ಷಾ ಸಮಯದಲ್ಲಿ 6 ಗಂಟೆಗಳ ನಿದ್ದೆ ಅಗತ್ಯವಾಗಿ ಬೇಕಿರುತ್ತದೆ. ಆಹಾರದ ಕುರಿತು ಗಮನಹರಿಸುವುದು ಅಗತ್ಯ. ಹೆತ್ತವರು ಯಾವುದೇ ಕಾರಣಕ್ಕೂ ಮಕ್ಕಳ ಮಾನಸಿಕತೆಯನ್ನು ಕುಗ್ಗಿಸದೆ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕಾರ್ಯ ಮಾಡಬೇಕು. ಯೋಗ, ಧ್ಯಾನ ಮಾಡಿದರೆ ಉತ್ತಮ. ನಿರಂತರವಾಗಿ ಓದುವ ವೇಳೆ 5 ನಿಮಿಷ ಬಿಡುವು ಪಡೆಯುವುದು ಉತ್ತಮ.
ಡಾ| ಕೇಶವ ಪೈ ಕೆ.
  ಮುಖ್ಯಸ್ಥರು, ಮನೋರೋಗ ವಿಭಾಗ
  ಕೆಎಂಸಿ ಮಂಗಳೂರು

ಟಾಪ್ ನ್ಯೂಸ್

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.