ಕೃಷಿ ಭೂಮಿ ಮರಳು ತೆಗೆಯಲು ಅವಕಾಶ: ಸಿಂಧೂ
ಪ್ರವಾಹ ಬಾಧಿತ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದಿಢೀರ್ ಭೇಟಿ
Team Udayavani, Oct 5, 2019, 5:08 AM IST
ಬೆಳ್ತಂಗಡಿ: ಪ್ರವಾಹ ಬಾಧಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು.
ಬೆಳ್ತಂಗಡಿ: ಪ್ರವಾಹದಿಂದ ತತ್ತರಿಸಿರುವ ತಾಲೂಕಿನ ಕೊಲ್ಲಿ ದಡ್ಡು ಪ್ರದೇಶ, ಗಣೇಶ ನಗರ, ದಿಡುಪೆ, ಕಜಕ್ಕೆ, ಕುಕ್ಕಾವು, ಚಾರ್ಮಾಡಿ ಹೊಸಮಠ ಮುಂತಾದ ಪ್ರದೇಶಗಳಿಗೆ ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮೀನುಗಳಲ್ಲಿ ತುಂಬಿರುವ ನದಿಯ ಹೂಳನ್ನು ತೆರವು ಗೊಳಿಸುವಂತೆ ಹಾಗೂ ಕೊಳೆರೋಗಕ್ಕೆ ಪರಿಹಾರ ವಿತರಿಸುವಂತೆ ಈ ಸಂದರ್ಭ ಸಂತ್ರಸ್ತರು ಮನವಿ ಮಾಡಿದರು. ಬಳಿಕ ಬೆಳ್ತಂಗಡಿ ಪ್ರವಾಸಿ ಮಂದಿರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಗಳು, ಪ್ರವಾಹದಿಂದಾಗಿ ಕೃಷಿ ಭೂಮಿಯಲ್ಲಿ ತುಂಬಿರುವ ನದಿಯ ಮರಳನ್ನು ಗ್ರಾ.ಪಂ. ಸುಪರ್ದಿಯಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾನೂನಿನ ತೊಡಕಿ ರುವುದರಿಂದ ನದಿಯಿಂದ ಹೂಳು ತೆರವಿಗೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಮರಳು ಶೇಖರಣೆಗೆ 22 ಸ್ಥಳಗಳನ್ನು ಗುರುತಿಸಲಾಗಿದ್ದು 12ರ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಪ್ರವಾಹದಿಂದಾಗಿ ಸೃಷ್ಟಿಯಾಗಿರುವ ಮರಳು ದಿಣ್ಣೆಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
53 ಕುಟುಂಬ ಸ್ಥಳಾಂತರ
ನದಿ ತೀರದ 22 ಕುಟುಂಬಗಳು ಹಾಗೂ ಕುಸಿತದಿಂದ ಹಾನಿಗೊಳಗಾದ 31 ಮನೆಗಳ ಜನರ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗಿದೆ. ಕೃಷಿ ನಾಶಕ್ಕೆ ಎನ್.ಡಿ.ಆರ್.ಎಫ್ ಮಾದರಿಯಂತೆ ಪರಿಹಾರ ವಿತರಿಸಲಾಗುವುದು. ಬೆಳ್ತಂಗಡಿ ತಾಲೂಕಿನಿಂದ ಸುಮಾರು 1,200 ಅರ್ಜಿಗಳು ಬಂದಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗರಿಷ್ಠ ಪರಿಹಾರ
ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪರಿಹಾರ ಒದಗಿಸಲಾಗಿದೆ. ನಿವೇಶನ ಹಂಚುವ ಸಲುವಾಗಿ ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ. ಶೀಘ್ರವೇ ನಿವೇಶನ ಹಂಚಿಕೆ ಮಾಡಲಾಗುವುದು. ಈಗಾಗಲೇ ಸ್ಥಳಾವಕಾಶ ಇದ್ದವರು ಅದೇ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶವಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ| ಆರ್. ಸೆಲ್ವಮಣಿ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ. ಇಒ ಕೆ.ಇ. ಜಯರಾಂ, ಸ್ಥಳೀಯ ಪಂಚಾಯತ್ ಅಧ್ಯಕ್ಷರು, ಕಂದಾಯ ನಿರೀಕ್ಷಕ ರವಿ., ತಾಲೂಕು ಪಂಚಾಯತ್ ಸಿಬಂದಿ ಗಣೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.