ಅಂಬೇಡ್ಕರ್‌ ಭವನ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಭಾಗ್ಯವಿಲ್ಲ !

ಸುಮಾರು 17.85 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾದ ಭವನ

Team Udayavani, Mar 7, 2020, 5:10 AM IST

ಅಂಬೇಡ್ಕರ್‌ ಭವನ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಭಾಗ್ಯವಿಲ್ಲ !

ಮಹಾನಗರ: ದ.ಕ. ಜಿಲ್ಲೆಯ ಸುಸಜ್ಜಿತ ಅಂಬೇಡ್ಕರ್‌ ಭವನ ಕಾಮಗಾರಿ ಪೂರ್ಣಗೊಂಡು ಕೆಲ ತಿಂಗಳು ಕಳೆದರೂ, ಭವನಕ್ಕೆ ಇನ್ನೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. ರಾಜ್ಯ ಸರಕಾರದ ನಿರ್ಲಕ್ಷ್ಯದಿಂದಾಗಿ ಉದ್ಘಾಟನೆ ದಿನ ವಿಳಂಬವಾಗುತ್ತಿದೆ.

ಉರ್ವಸ್ಟೋರ್‌ ಬಳಿಯ ಅಂಗಡಿಗುಡ್ಡೆಯಲ್ಲಿ ಸುಮಾರು 17.85 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್‌ ಭವನದ ಕಾಮಗಾರಿಯ ಹಿನ್ನೆಲೆಯಲ್ಲಿ 14 ಕೋ.ರೂ. ಸರಕಾರದಿಂದ ಮಂಜೂರಾಗಿದೆ. 3.5 ಕೋಟಿ ರೂ. ವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿ ಕಾರ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ದ.ಕ.ಜಿ.ಪಂ.ನಿಂದ ಅನುದಾನ ಒದಗಿಸಬೇಕು ಎಂದು ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಮನವಿ ಸಲ್ಲಿಸಿತ್ತು.

ಆದರೆ, ಸ್ಥಳೀಯ ಮೂಲಗಳು ಅನು ದಾನ ನೀಡಲು ನಿರಾಕರಣ ಮಾಡಿದೆ. ಈ ಕಾರಣಕ್ಕೆ ಸಮಾಜ ಕಲ್ಯಾಣ ಇಲಾ ಖೆಯು ಇದೀಗ ರಾಜ್ಯ ಸರಕಾರಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಸ್ಥಳೀಯ ಶಾಸಕರು, ಸಂಸದರಿಗೂ ಅನು ದಾನಕ್ಕೆ ಒತ್ತಾಯಿಸಿ ಮನವಿ ಮಾಡಲಾಗಿದೆ. ರಾಜ್ಯ ಸರಕಾರದಿಂದ ಈ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ಬರುತ್ತಿಲ್ಲ. ಅನುದಾನ ಬಾರದೆ, ಸಂಬಂಧಪಟ್ಟ ಗುತ್ತಿಗೆ ಸಂಸ್ಥೆಗೆ ಹಣ ನೀಡದೆ, ಉದ್ಘಾಟನೆ ಮಾಡುವ ಹಾಗಿಲ್ಲ. ಇದೇ ಕಾರಣಕ್ಕೆ ಉದ್ಘಾಟನೆ ವಿಳಂಬ ವಾಗು ತ್ತಿದೆ. ಈ ಬಾರಿಯ ಅಂಬೇಡ್ಕರ್‌ ಜಯಂತಿಗೂ ಮೊದಲು ಉದ್ಘಾಟನೆ ನಡೆಸಲು ಸಮಾಜ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಸವಿನೆನಪಿಗಾಗಿ ನಗರದ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್‌ ಭವನಕ್ಕೆ ವಿವಿಧ ದಲಿತ ಸಂಘಟನೆಗಳು ಒತ್ತಾಯಿಸುತ್ತಾ ಬಂದಿದ್ದವು. ಪರಿಣಾಮವಾಗಿ ಹಿಂದಿನ ಜಿಲ್ಲಾಧಿಕಾರಿ ಸುಬೋಧ್‌ ಯಾದವ್‌ ಅವರು ದೇರೆಬೈಲ್‌ ವಾರ್ಡ್‌ನಲ್ಲಿ 1.61 ಎಕ್ರೆ ಜಾಗವನ್ನು ಅಂಬೇಡ್ಕರ್‌ ಭವನಕ್ಕೆ ಕಾದಿರಿಸಿದ್ದರು.

ಆದರೆ ಇದಕ್ಕೆ ವಿರೋಧ ವ್ಯಕ್ತವಾದಾಗ ಮತ್ತೆ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದು ಕೊನೆಗೂ ಉರ್ವ ಸ್ಟೋರ್‌ನ ಅಂಗಡಿಗುಡ್ಡೆಯಲ್ಲಿ ಅಂಬೇ ಡ್ಕರ್‌ ಭವನ ನಿರ್ಮಾಣಕ್ಕೆ ಅಡಿ ಗಲ್ಲು ಹಾಕಲಾಗಿತ್ತು.

2012-13ರಲ್ಲಿ ಮಂಜೂ ರಾದ ದ.ಕ. ಜಿಲ್ಲಾ ಮಟ್ಟದ ಅಂಬೇ ಡ್ಕರ್‌ ಭವನಕ್ಕೆ ನಾಲ್ಕು ವರ್ಷಗಳ ಬಳಿಕ 2017ರ ಜನವರಿಯಲ್ಲಿ ಶಂಕು ಸ್ಥಾಪನೆ ನಡೆಸಲಾಗಿತ್ತು. ಒಂದು ವರ್ಷದಲ್ಲಿ ಪೂರ್ಣ ಗೊಳ್ಳುವ ಭರವಸೆಯನ್ನು ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್‌. ಆಂಜನೇಯ ತಿಳಿಸಿದ್ದರು.

ಆಕರ್ಷಕ ವಿನ್ಯಾಸದ‌ ಭವನ
ಅಂಬೇಡ್ಕರ್‌ ಭವನ ಆಕರ್ಷಕ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಸುಮಾರು 700 ಆಸನಗಳ ಸುಸಜ್ಜಿತ ಸಭಾ ಭವನ ನಿರ್ಮಾಣವಾಗಿದೆ. ಬೃಹತ್‌ ವೇದಿಕೆ ಸಭೆ, ಸಮಾರಂಭಗಳ ಜತೆಗೆ ರಂಗ ಚಟುವಟಿಕೆಗಳಿಗೆ ಅನುಕೂಲಕರವಾಗಿದೆ. ದ.ಕ. ಜಿಲ್ಲಾ ಪಂ. ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮತ್ತು ನಗರದ ಮಾರ್ಕೆಟ್‌ ರಸ್ತೆಯಲ್ಲಿರುವ ಮಂಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯು ಅಂಬೇಡ್ಕರ್‌ ಭವನಕ್ಕೆ ಸ್ಥಳಾಂತರವಾಗಲಿದೆ. ಸುಸಜ್ಜಿತ ಗ್ರಂಥಾಲಯ ಮತ್ತು ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಕೋಚಿಂಗ್‌ ಸೆಂಟರ್‌ ಕೂಡ ಭವನದಲ್ಲಿ ಆರಂಭಗೊಳ್ಳುವ ನಿರೀಕ್ಷೆ ಇದೆ.

ಮನವಿ ಸಲ್ಲಿಕೆ
ಜಿಲ್ಲಾ ಮಟ್ಟದ ಅಂಬೇಡ್ಕರ್‌ ಭವನ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 17.85 ಕೋ.ರೂ.ನಲ್ಲಿ ಭವನ ನಿರ್ಮಾಣವಾಗಿದೆ. ಆದರೆ, 3.5 ಕೋಟಿ ರೂ. ಅನುದಾನ ಅಗತ್ಯವಿದ್ದು, ಈ ಬಗ್ಗೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅನುದಾನದ ನಿರೀಕ್ಷೆಯಲ್ಲಿದ್ದೇವೆ.
 - ಡಾ| ಯೋಗೀಶ್‌, ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದ.ಕ.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.