ಅಮ್ಟಾಡಿ ಗ್ರಾಮ ಪಂಚಾಯತ್: ವಿವಿಧ ಸೌಲಭ್ಯ ವಿತರಣೆ
Team Udayavani, Dec 30, 2017, 4:36 PM IST
ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ಶೇ. 25 ಮತ್ತು ಶೇ. 3ರ ಅನುದಾನದಲ್ಲಿ ವಿವಿಧ ಸೌಲಭ್ಯ ವಿತರಣೆ ಕಾರ್ಯಕ್ರಮವು ಹರೀಶ್ ಶೆಟ್ಟಿ ಪಡು ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
2017-18ನೇ ಸಾಲಿನಲ್ಲಿ ಶೇ.25 ಪ.ಜಾ/ ಪ.ಪಂ. ಮೀಸಲು ಅನುದಾನದಲ್ಲಿ 28 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಶೇ. 3ರ ಅಂಗವಿಕಲ ನಿಧಿಯಲ್ಲಿ ಒಬ್ಬರಿಗೆ ಗಾಲಿ ಕುರ್ಚಿ, ಒಬ್ಬರಿಗೆ ಶ್ರವಣಸಾಧನ ಉಪಕರಣ ಹಾಗೂ 27 ಜನರಿಗೆ ವೈದ್ಯಕೀಯ ನೆರವು ನೀಡಲಾಯಿತು. ಗ್ರಾ.ಪಂ. ಉಪಾಧ್ಯಕ್ಷೆ ಯಶೋದಾ, ತಾ.ಪಂ. ಸದಸ್ಯೆ ಮಲ್ಲಿಕಾ ಶೆಟ್ಟಿ, ಮತ್ತು ಗ್ರಾ.ಪಂ ಸದಸ್ಯರು, ಸಿಬಂದಿ ವರ್ಗ,ಅಂಗನವಾಡಿ ಕಾರ್ಯಕರ್ತೆಯರು, ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಕೆ. ರಾಜಶೇಖರ ರೈ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.