“ಎಪಿಎಂಸಿ ಪರ್ಯಾಯ ಬಳಕೆಗೆ ಅಗತ್ಯವಾದರೆ ಕಾಯ್ದೆ ತಿದ್ದುಪಡಿ’


Team Udayavani, Nov 15, 2020, 9:22 PM IST

APMC

ಬೈಕಂಪಾಡಿಯ ಎಪಿಎಂಸಿ ಯಾರ್ಡನ್ನು ಸಚಿವ ಸೋಮಶೇಖರ್‌ ಪರಿಶೀಲಿಸಿದರು.

ಸುರತ್ಕಲ್‌: ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಲು ಅಗತ್ಯಬಿದ್ದರೆ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಭೇಟಿ ನೀಡಿ ಸ್ಥಳೀಯ ಶಾಸಕರು, ಸಮಿ ತಿಯ ಪದಾಧಿ ಕಾರಿಗಳ ಸಭೆ ನಡೆಸಿ ಮಾತ ನಾಡಿದರು. ಕೇಂದ್ರ ಸರಕಾರವು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ಕಾನೂನು ತಂದ ಬಳಿಕ, ಬಹುತೇಕ ಎಪಿಎಂಸಿಗಳು ಭೀತಿ ಯಲ್ಲಿವೆ. ಆದರೆ ಎಪಿಎಂಸಿ ಯಾರ್ಡ್‌ ಗಳ ಪರ್ಯಾಯ ಬಳಕೆ, ಆರ್ಥಿಕವಾಗಿ ಸಮಿತಿಗಳನ್ನು ಸುದೃಢಗೊಳಿಸಲು ಅಗತ್ಯ ಕ್ರಮವನ್ನು ಶೀಘ್ರ ಕೈಗೊಳ್ಳಲಾಗುವುದು. ಇದರ ಜತೆಗೆ ಎಪಿಎಂಸಿಯ ಅ ಧಿಕಾರವನ್ನು ವಿಕೇಂದ್ರೀಕರಣ ಮಾಡುವ ಬಗ್ಗೆ ಸರಕಾರ ಚಿಂತಿಸಲಿದೆ ಎಂದರು.

ರಾಜ್ಯದ ಎಪಿಎಂಸಿಗಳಲ್ಲಿ ಎಕರೆ ಗಟ್ಟಲೆ ಭೂಮಿಯಿದ್ದು, ಪರ್ಯಾಯ ಬಳಕೆಗೆ ಸರಕಾರದ ಇತರ ಇಲಾಖೆಗಳಿಂದ ಮನವಿ ಗಳು ಬರುತ್ತಿವೆ. ಆದರೆ ಕೃಷಿಕರಿಗಾಗಿಯೇ ಇದು ಉಳಿಯಬೇಕು. ಈ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು, ಅ ಧಿಕಾರಿಗಳು ಆಯಾ ಎಪಿಎಂಸಿ ಬಲವರ್ಧನೆಗೆ ನೀಲಿ ನಕಾಶೆ ಮಾಡಿ ಕಳಿಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷರ ಮನವಿ
ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅವರು ಸಚಿವರಿಗೆ ಮನವಿ ಸಲ್ಲಿಸಿ, ಕನಿಷ್ಠ 1 ಕೋಟಿ ರೂ. ಕಾಮಗಾರಿಯನ್ನು ನಡೆಸಲು ಸಮಿತಿ ಮಟ್ಟದಲ್ಲಿ ಅ ಧಿಕಾರ ನೀಡುವುದು, ಆದಾಯ ನಿ ಧಿಯಲ್ಲಿ ಇದೀಗ ನಿಗದಿ ಮಾಡಿದ 34 ಪೈಸೆಗಳನ್ನು ಎಪಿಎಂಸಿಗೆ ನೀಡುವಂತೆ, ಬೈಕಂಪಾಡಿ ಎಪಿಎಂಸಿಯನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು. ಉಪಾಧ್ಯಕ್ಷೆ ರಜನಿ ದುಗ್ಗಣ್ಣ, ಸದಸ್ಯರಾದ ಅಶೋಕ್‌ ಶೆಟ್ಟಿ, ಪ್ರವೀಣ್‌ ಕುಮಾರ್‌, ರುಕ್ಮಯ್ಯ ನಾಯ್ಕ, ವರ್ತಕರ ಪ್ರತಿನಿಧಿ  ರಾಘವ ಶೆಟ್ಟಿ, ಎಂಜಿನಿಯರ್‌ ಗಣೇಶ್‌ ಹೆಗ್ಡೆ, ಕಾರ್ಯದರ್ಶಿ ಎಚ್‌.ಸಿ.ಎಂ. ರಾಣಿ, ವರ್ತಕರ ಸಂಘದ ಅಧ್ಯಕ್ಷ ಭರತ್‌ ರಾಜ್‌ ಕೃಷ್ಣಾಪುರ, ಮನಪಾ ಸದಸ್ಯ ವರುಣ್‌ ಚೌಟ ಮತ್ತಿತರರಿದ್ದರು.

ಕೋಲ್ಡ್‌ ಸ್ಟೋರೇಜ್‌ ಅಗತ್ಯ
ಬೈಕಂಪಾಡಿ ಯಾರ್ಡ್‌ ಸೂಕ್ತ ಸಂಪರ್ಕ ವ್ಯವಸ್ಥೆ ಹೊಂದಿದ್ದು, ಈ ಭಾಗದಲ್ಲಿ ಹಣ್ಣು ಹಂಪಲು ಕೋಲ್ಡ್‌ ಸ್ಟೋರೇಜ್‌ ಅಗತ್ಯವಿದೆ. ಇದರ ಜತೆಗೆ ಈ ಯಾರ್ಡನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದ್ದು, ಸಚಿವರು ಅನುಮೋದನೆ ನೀಡಲು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಮನವಿ ಮಾಡಿದರು.

80 ಎಕರೆ ಪ್ರದೇಶ ಸದ್ಬಳಕೆಯಾಗಲಿ
ಬೈಕಂಪಾಡಿ ಯಾರ್ಡ್‌ನಲ್ಲಿ ಹಣ್ಣು, ತರಕಾರಿ ಮಾರಲು ಆಸಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಕಾನೂನು ತಿದ್ದು ಪಡಿಯ ಅಗತ್ಯವಿದೆ. 80 ಎಕರೆ ಪ್ರದೇಶ ಸದ್ಬಳಕೆಯಾಗಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ನುಡಿದರು.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

5

Mangaluru: ಇಂದು ಕ್ರಿಸ್ಮಸ್‌ ಜಾಗರಣೆ ವಿಶೇಷ ಬಲಿಪೂಜೆ

2

Mangaluru; ಒಡಿಶಾದ ಗುಜ್ಜೆದೋಸೆ ಈಗ ಕರಾವಳಿಯಲ್ಲೂ ಪ್ರಯೋಗ

1

Kinnigoli-ಗುತ್ತಕಾಡು ರಸ್ತೆಯಂಚಿನಲ್ಲಿ ಅಪಾಯಕಾರಿ ಹೊಂಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.