ಕರಾವಳಿಯಲ್ಲಿ ಶಾ:ಬಿಜೆಪಿ ಚುನಾವಣೆ ತಾಲೀಮು ಇಂದು ಆರಂಭ
Team Udayavani, Feb 19, 2018, 12:35 PM IST
ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವಸಿದ್ಧತೆ ಆರಂಭ ಗೊಂಡಿದ್ದು, ಪಕ್ಷವನ್ನು ಇನ್ನಷ್ಟು ಬಲ ಪಡಿ ಸುವ ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆ. 19ರಂದು ಮಂಗಳೂರಿಗೆ ಆಗಮಿಸಲಿದ್ದು, ಫೆ. 21ರ ತನಕ ಮೂರು ದಿನಗಳ ಕಾಲ ಅವರು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಅಮಿತ್ ಶಾ ಅವರು ಕರಾವಳಿ ಭಾಗಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡುವ ಮೂಲಕ ಬಿಜೆಪಿ ವತಿಯಿಂದ ಚುನಾ ವಣಾ ತಾಲೀಮು ಸೋಮವಾರ ಆರಂಭ ವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಅಮಿತ್ ಶಾ ಪ್ರವಾಸ
ಫೆ. 19ರಂದು ದಿಲ್ಲಿಯಿಂದ ಮಧ್ಯಾಹ್ನ 3 ಗಂಟೆಗೆ ವಿಮಾನದಲ್ಲಿ ಹೊರಡುವ ಅಮಿತ್ ಶಾ ಸಂಜೆ 5.30ಕ್ಕೆ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವರು. ಕೆಂಜಾರು ಪ್ರದೇಶದಲ್ಲಿ ರಸ್ತೆ ಬದಿ ಶಾ ಸ್ವಾಗತಕ್ಕೆ ಜಿಲ್ಲಾ ಬಿಜೆಪಿ ವ್ಯವಸ್ಥೆ ಮಾಡಿದೆ. ಸುಮಾರು 2,000 ಕಾರ್ಯ ಕರ್ತರು ಭಾಗವಹಿಸುವ ನಿರೀಕ್ಷೆ ಇದೆ. 6 ಗಂಟೆಗೆ ಕೆಂಜಾರಿನಿಂದ ಹೊರಟು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡ ಲಿದ್ದಾರೆ. ಅಲ್ಲಿ ಪ್ರಮುಖರ ಜತೆ ಮಾತುಕತೆ ನಡೆಸಿ ವಾಸ್ತವ್ಯ ಮಾಡುವರು. ಫೆ. 20ರಂದು ಬೆಳಗ್ಗೆ 8.15ರಿಂದ 9 ಗಂಟೆಯವರೆಗೆ ಕ್ಷೇತ್ರ ದಲ್ಲಿ ದೇವರ ದರ್ಶನ ಮಾಡಿ ಸ್ವಾಮೀಜಿ ಜತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಸಮೀಪದ ಕುಲ್ಕುಂದ ದಲ್ಲಿ ನಡೆಯ ಲಿರುವ ನವಶಕ್ತಿ ಸಮಾವೇಶದಲ್ಲಿ ಭಾಗವಹಿ ಸುವರು. ಬಳಿಕ ಅಲ್ಲಿಂದ ಹೊರಟು ಪುತ್ತೂರು ವಿವೇಕಾನಂದ ಕಾಲೇಜಿಗೆ ತೆರಳಿ ಅಲ್ಲಿ 10.15 ರಿಂದ 11.40ರ ವರೆಗೆ ಯುವ ವಿದ್ಯಾರ್ಥಿ ಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು ವರು. 12.30ಕ್ಕೆ ಬಂಟ್ವಾಳಕ್ಕೆ ಭೇಟಿ ನೀಡ ಲಿದ್ದು, ಅಲ್ಲಿ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಕ್ಷೇತ್ರಗಳ ನವಶಕ್ತಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗ ವಹಿಸುವರು. ಮಧ್ಯಾಹ್ನ 2.15ಕ್ಕೆ ಅಲ್ಲಿಂದ ಹೊರಟು 3 ಗಂಟೆಗೆ ಸುರತ್ಕಲ್‌ಗೆ ತಲುಪಿ ದೀಪಕ್ ರಾವ್ ಮನೆಗೆ ಭೇಟಿ ನೀಡುವರು. ಬಳಿಕ ಸೂರಜ್ ಹೊಟೇಲ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ. ಸಂಜೆ 4.15ಕ್ಕೆ ಉಡುಪಿಗೆ ತೆರಳಲಿದ್ದು, ಮಲ್ಪೆ ಯಲ್ಲಿ ಆಯೋಜಿ ಸಿರುವ ಮೀನು ಗಾರರ ಸಮಾವೇಶದಲ್ಲಿ ಭಾಗ ವಹಿಸುವರು. ಫೆ. 21ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಶಾ ರಾಜ್ಯ ಪ್ರವಾಸ ಮುಗಿಸಿದ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಂಸದ ನಳಿನ್ ಉತ್ತರಿಸಿದರು.
ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪದಾ ಧಿಕಾರಿಗಳಾದ ಡಾ| ವೈ. ಭರತ್ ಶೆಟ್ಟಿ, ಕಿಶೋರ್ ರೈ, ರವಿಶಂಕರ ಮಿಜಾರು, ವೇದವ್ಯಾಸ ಕಾಮತ್, ಸುದರ್ಶನ್ ಮೂಡ ಬಿದಿರೆ, ಜಿತೇಂದ್ರ ಕೊಟ್ಟಾರಿ, ಹರಿಕೃಷ್ಣ ಬಂಟ್ವಾಳ, ಪೂಜಾ ಪೈ, ಈಶ್ವರ ಕಟೀಲು, ಶೋಭೇಂದ್ರ ಸಸಿಹಿತ್ಲು ಪತ್ರಿಕಾಗೋಷ್ಠಿಯಲ್ಲಿದ್ದರು.
ಉಡುಪಿ ಜಿಲ್ಲೆಗೆ ಪ್ರಥಮ ಭೇಟಿ
ಶಾ ಅವರದ್ದು ಉಡುಪಿ ಜಿಲ್ಲೆಗೆ ಪ್ರಥಮ ಭೇಟಿಯಾಗಿದೆ. ಇದಕ್ಕೆ ಬಿಜೆಪಿ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯಕುಮಾರ್ ಶೆಟ್ಟಿ ಮತ್ತು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಜಿಲ್ಲೆಯ ಗಡಿಭಾಗ ಹೆಜಮಾಡಿಯಲ್ಲಿ ಬಿಜೆಪಿ ವತಿಯಿಂದ ಶಾ ಅವರನ್ನು ಸ್ವಾಗತಿಸ ಲಾಗುವುದು. ಯುವಮೋರ್ಚಾ ಕಾರ್ಯ ಕರ್ತರು ಬೈಕ್ ರ್ಯಾಲಿ ನಡೆಸ ಲಿದ್ದಾರೆ. ಮಲ್ಪೆಯ ಸಮಾವೇಶದಲ್ಲಿ 50,000 ಜನರು ಸೇರುವ ನಿರೀಕ್ಷೆ ಯಿದೆ. ಅನಂತರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀಪಾದರು, ಪೇಜಾವರ ಶ್ರೀಗಳನ್ನು ಅಮಿತ್ ಶಾ ಭೇಟಿ ಮಾಡಲಿದ್ದಾರೆ ಎಂದರು.
ಸಂವಾದ, ಸಭೆ, ವೈಬ್‌ಸೈಟ್ ಅನಾವರಣ
ಫೆ. 21ರ ಬೆಳಗ್ಗೆ 10ಕ್ಕೆ ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪ್ರಮುಖರ ಜತೆ ಸಂವಾದ, ಬಿಜೆಪಿ ವೆಬ್‌ಸೈಟ್‌ಅನಾವರಣ, ಅನಂತರ 5 ಜಿಲ್ಲೆ ಗಳ ನ್ನೊಳ ಗೊಂಡ ಶಿವಮೊಗ್ಗ ಮತ್ತು ಮಂಗಳೂರು ವಿಭಾಗಗಳ ಶಕ್ತಿಕೇಂದ್ರದ ಪ್ರಮುಖರ ಜತೆಸಂಘಟನಾತ್ಮಕ ವಿಚಾರಗಳ ಕುರಿತು ಸಭೆ ನಡೆಯಲಿದೆ. ಶಾ ಅವರೊಂದಿಗೆ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಮತ್ತು ರಾಜ್ಯದ ಮುಖಂಡರು ಇರ ಲಿದ್ದಾರೆ. ಬಳಿಕ ಉ.ಕ. ಜಿಲ್ಲೆಯ ಕುಮಟಾಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಲಿದ್ದಾರೆ ಎಂದರು.
ಪಕ್ಷದ ಪ್ರಮುಖ ನಾಯಕರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.