ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ; ಕಾಡುತ್ತಿದೆ ಶಿಕ್ಷಕರ ಕೊರತೆ

Team Udayavani, Sep 14, 2021, 3:40 AM IST

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ; ಕಾಡುತ್ತಿದೆ ಶಿಕ್ಷಕರ ಕೊರತೆ

ಕಾವೂರು: ಪಂಜಿಮೊಗರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಲು 2017ರಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದ ಬಳಿಕ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ಮಕ್ಕಳ ಸಂಖ್ಯೆಯೂ ಹೆಚ್ಚಳವಾಯಿತು. ಆದರೆ ಶಿಕ್ಷಕರ ಕೊರತೆ ಕಾಡುತ್ತಿದೆ.

ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆ ಯಿಂದ ಬಡವಾದಂತೆ ಕಂಡರೂ ಊರವರ, ಗ್ರಾಮಸ್ಥರ, ದಾನಿಗಳ ನೆರವಿನೊಂದಿಗೆ ಸತತ ಪ್ರಯತ್ನದಿಂದ ಕೊರೊನಾ ಅವಧಿಯಲ್ಲಿ ಮತ್ತೆ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕ ಕಾಲನಿ ಸುತ್ತಮುತ್ತ ಇರುವುದರಿಂದ ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಇದು ಸಕಾಲವಾಗಿದೆ. ಇದೀಗ 1 ಮತ್ತು 2ನೇ ತರಗತಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆಗೆ ಅನುಮತಿ ಲಭಿಸಿದೆ. ಪ್ರಾಥಮಿಕ ಪೂರ್ವ ತರಗತಿಯನ್ನು ಸ್ಮಾರ್ಟ್‌ ಕ್ಲಾಸ್‌ನ ಕೊಠಡಿ ನಿರ್ಮಿಸಲಾಗಿದೆ. ಆಟದ ಮೈದಾನವಿದ್ದು, ಕ್ರೀಡೆಗಳಲ್ಲಿಯೂ ಪರಿಣಿತಿ ಪಡೆಯಲು ಎಲ್ಲ ಅವಕಾಶವಿದೆ.

ಸರಕಾರಿ ಶಾಲೆ ಎಂದಾಕ್ಷಣ ಕೆಲವು ವಿದ್ಯಾರ್ಥಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕು ತ್ತಾರೆ. ಆದರೆ ಈ ಸರಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳನ್ನು ಮೀರಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಇದರಿಂದ ಇಲ್ಲಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಾ ಹೋಗುತ್ತಿದೆ. ಕೊರೊನಾ ಬಳಿಕ ಮಧ್ಯಮ ವರ್ಗ, ಬಡ ವರ್ಗ ಕೆಲವೊಂದು ಕುಟುಂಬಗಳು ಶುಲ್ಕ ಪಾವತಿಗೆ ಸಮಸ್ಯೆಯಾಗಿ ಆಂಗ್ಲ ಮಾಧ್ಯಮ ಶಾಲೆಯಿಂದ ಈ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಮುಂದಾಗಿದ್ದಾರೆ ಇದೊಂದು ಉತ್ತಮ ಅರಂಭ ಎನ್ನುತ್ತಾರೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಪಂಜಿಮೊಗರು.

2020ರಲ್ಲಿ ಸುಮಾರು 250 ಇದ್ದ ಮಕ್ಕಳ ಸಂಖ್ಯೆ, 2021ರಲ್ಲಿ 285ರ ಗಡಿ ದಾಟಿದೆ. ಶೈಕ್ಷಣಿಕ ವರ್ಷದಲ್ಲಿ ಎಲ್‌ಕೆಜಿ ಗೆ 90 ಮಕ್ಕಳು ಈ ಶಾಲೆಯಲ್ಲಿ ಕಲಿಯಲು ಸೇರ್ಪಡೆಯಾಗಿದ್ದಾರೆ. 1ನೇ ತರಗತಿಗೆ ಒಟ್ಟು ಮಕ್ಕಳ ಸೇರ್ಪಡೆ 71.

ಶಿಕ್ಷಕರ ಕೊರತೆಯೇ ಇಲ್ಲಿರುವ ಸಮಸ್ಯೆ:

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದ ಸಂದರ್ಭ ಶಿಕ್ಷಕರನ್ನು ಸರಕಾರ ವರ್ಗಾಯಿಸಿತ್ತು. ಇದೀಗ ಮತ್ತೆ ಏರಿಕೆ ಆಗಿರುವುದರಿಂದ ಶಿಕ್ಷಕರ ನೇಮಕವಾಗ ಬೇಕಿದೆ. 7 ಸರಕಾರಿ ಶಿಕ್ಷಕರು ಇದ್ದಾರೆ. 4 ಮಂದಿ ಶಿಕ್ಷಕರನ್ನು ನೇಮಿಸಿ ಸರಕಾರ ಆಡಳಿತ ಮಂಡಳಿಗೆ  ನೆರವು ನೀಡಬೇಕಿದೆ. ಕೊಠಡಿಗಳು ಈಗಿನ ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ 4 ಹೆಚ್ಚುವರಿ ಕೊಠಡಿಗಳು ಬೇಕಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಗತ್ಯವಾಗಿದೆ.

ಪೀಠೊಪಕರಣ, ಶೌಚಾಲಯ ಸಮಸ್ಯೆ:

ಶಾಲೆಯಲ್ಲಿ ಈಗಿರುವ ಮಕ್ಕಳ ಸಂಖ್ಯೆಗನು ಗುಣವಾಗಿ ಹೆಚ್ಚಿನ ಪೀಠೊಪಕರಣಗಳನ್ನು ಒದಗಿಸಬೇಕಾಗಿದೆ. ಸೋರುತ್ತಿರುವ ಕಟ್ಟಡಗಳ ದುರಸ್ತಿ, ಆವರಣ ಗೋಡೆಯ ದುರಸ್ತಿ ಆಗಬೇಕಿದೆ.

ಪಂಜಿಮೊಗರು ಸರಕಾರಿ ಹಿರಿಯ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಬೋಧನೆ ಆರಂಭಿಸಿರುವುದರಿಂದ ಮಕ್ಕಳ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. ಆದ್ದರಿಂದ ಶಿಕ್ಷಕರ ನೇಮಕ, ಸೋರುತ್ತಿರುವ ಕಟ್ಟಡದ ದುರಸ್ತಿ, ಕೊಠಡಿ ನಿರ್ಮಾಣ, ಮೂಲಸೌಕರ್ಯ ಒದಗಿಸಬೇಕಿದೆ. ಸ್ಥಳೀಯ ಶಾಸಕರು ಶಾಲೆಯನ್ನು ದತ್ತು ತೆಗೆದುಕೊಂಡು ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಮನಪಾ ಸದಸ್ಯರು, ಶಾಲಾ ಮೇಲುಸ್ತುವಾರಿ ಸಮಿತಿ, ಪಿಟಿಎ ಸಹ ಶಾಲೆಯ ಸರ್ವಾಂಗೀಣ ಪ್ರಗತಿಗೆ ಕೈ ಜೋಡಿಸಿದೆ. -ಚಂದ್ರಾವತಿ, ಮುಖ್ಯೋಪಾಧ್ಯಾಯಿನಿ

-ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.