Indian actor; ಸೆ. 3ರಂದು “ಅನಂತ ಅಭಿನಂದನೆ’
Team Udayavani, Aug 30, 2023, 1:13 AM IST
ಮಂಗಳೂರು: ಅನಂತ್‌ನಾಗ್-75 ಅಭಿನಂದನ ಸಮಿತಿ ಹಾಗೂ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಟ ಅನಂತ್‌ನಾಗ್ ಅವರಿಗೆ 75ರ ಸಂಭ್ರಮ ಮತ್ತು ವೃತ್ತಿ ಜೀವನದ 50ರ ಸಂಭ್ರಮದ ಕಾರ್ಯಕ್ರಮ “ಅನಂತ ಅಭಿನಂದನೆ’ ಸೆ. 3ರಂದು ಬೆಳಗ್ಗೆ 9.30ರಿಂದ ನಗರದ ಕೊಡಿಯಾಲಬೈಲ್‌ನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಭಿನಂದನ ಸಮಿತಿತ ಸಂಚಾಲಕ, ಚಲನಚಿತ್ರ, ರಂಗಭೂಮಿ ನಟ ಗೋಪಿನಾಥ ಭಟ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನ ಡೊಂಗರಕೇರಿ ಕೆನರಾ ಹೈಸ್ಕೂಲ್ ಆವರಣದಿಂದ ಅನಂತನಾಗ್ ದಂಪತಿಯನ್ನು ವಿವಿಧ ಕಲಾತಂಡಗಳೊಂದಿಗೆ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ಕರೆತರಲಾಗುತ್ತದೆ. 10 ಗಂಟೆಗೆ ಉದ್ಘಾಟನೆ ನೆರವೇರಲಿದ್ದು, ಬಳಿಕ ಯುವ ಸಮುದಾಯ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಹನ ಕಾರ್ಯ ಕ್ರಮ ನಡೆಯಲಿದೆ ಎಂದರು.
ಮಧ್ಯಾಹ್ನ 2ರಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ತಂಡದಿಂದ ಅನಂತನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ ನೆರವೇರಲಿದೆ. ಸಂಜೆ 6ರಿಂದ ಸಮ್ಮಾನ ಕಾರ್ಯಕ್ರಮ ನೆರವೇರಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ನಟ ರಿಷಭ್ ಶೆಟ್ಟಿ, ನಿರ್ಮಾಪಕ ಹರೀಶ್ ಶೇರಿಗಾರ್, ರಂಗಭೂಮಿ ನಟ ದೇವದಾಸ್ ಕಾಪಿಕಾಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸೆ. 4 ಅನಂತನಾಗ್ ಹುಟ್ಟಿದ ದಿನ. ಅಂದು ಅವರು ಬಾಲ್ಯದ ದಿನಗಳನ್ನು ಕಳೆದ ಕಾಸರಗೋಡು ಬಳಿಯ ಕಾಞಂಗಾಡಿನ ಆನಂದಾಶ್ರಮದಲ್ಲಿ ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪೂರಕ ಮಾಹಿತಿ ನೀಡಿದರು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ ಶೆಟ್ಟಿ, ರಂಗಸಂಗಾತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.