ಅಂಗನವಾಡಿ ಜಾಗ ಅತಿಕ್ರಮಣ ಆರೋಪ: ಗ್ರಾಮಸ್ಥರ ಪ್ರತಿಭಟನೆ
Team Udayavani, Jan 13, 2018, 4:25 PM IST
ಕೆದಿಲ: ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಯೊರ್ವರು ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜ. 12ರಂದು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕರಿಮಜಲ್ ಅಂಗನವಾಡಿ ಕೇಂದ್ರದಲ್ಲಿ ಸಂಭವಿಸಿದೆ.
ಈ ವೇಳೆ ಗ್ರಾ.ಪಂ. ಸದಸ್ಯ ಉಮೇಶ್ ಪೂಜಾರಿ ಮುರುವ ಮಾತನಾಡಿ, 202/ಐ ಅ1ರಲ್ಲಿ 0.5 ಎಕ್ರೆ ಜಾಗ ಅಂಗನವಾಡಿ ಕೇಂದ್ರದ ಹೆಸರಿನಲ್ಲಿದ್ದು, ಅದನ್ನು ಆನಂದ ಆಚಾರ್ಯ ಅವರ ಮಕ್ಕಳಾದ ಪುರಂದರ, ಹರೀಶ, ಯಶವಂತ ಆಚಾರ್ಯ ಅವರು ಅಕ್ರಮವಾಗಿ ವಶಪಡಿಸಿಕೊಂಡು ಅಲ್ಲಿ ತಡೆಗೋಡೆ ನಿರ್ಮಿಸಿದ್ದಾರೆ ಎಂದು ಆರೋಪಿಸಿದರು.
ಕರ್ತವ್ಯ ಲೋಪ
ಜತೆಗೆ 1.5 ಕೋಟಿ ರೂ. ವೆಚ್ಚದಲ್ಲಿ ಕೆದಿಲ – ಕರಿಮಜಲು ರಸ್ತೆ ಕಾಮಗಾರಿ ಹಂತದಲ್ಲಿದ್ದು, ಇದಕ್ಕೂ ಅವರು ವಿರೋಧಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಮನವರಿಕೆ ಮಾಡಿದರೂ ಸ್ಪಂದಿಸದೇ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ವರೆಗೆ ನಿರಂತರವಾಗಿ ನಮ್ಮ
ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳ ಭೇಟಿ
ಘಟನಾ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳಾದ ಸುದಾಜೋಷಿ ಹಾಗೂ ದೀಪಿಕಾ
ಅವರು ಆಗಮಿಸಿ ಪ್ರತಿಭಟನಕಾರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರತಿಭಟನಕಾರರು ಎ.ಸಿ. ಹಾಗೂ
ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ಕೊಟ್ಟು ಬೇಡಿಕೆಗೆ ಸ್ಪಂದಿಸುವ ವರೆಗೆ ನಮ್ಮ ಹೋರಾಟವನ್ನು ಕೊನೆಗೊಳಿಸುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಕುಲಾಲ್, ಕರಿಮಜಲ ಅಂಗನವಾಡಿ ಬಾಲವಿಕಾಸ ಅಧ್ಯಕ್ಷೆ, ಕೆದಿಲ ಗ್ರಾಮ ಪಂಚಾಯತ್ ಸದಸ್ಯೆ ಬೇಬಿ ಎಂ. ಮುರುವ, ಸುದರ್ಶನ್ ಆಚಾರ್ಯ, ಪದ್ಮನಾಭ ಭಟ್ ಪೆರ್ನಾಜೆ, ಬಿ. ಅಬ್ದುಲ್ ಖಾದರ್, ಪ್ರವೀಣ್ ಕಲ್ಲಾಜೆ, ಸ್ಥಳೀಯರಾದಂತಹವಿಜಯ್ ಡಿ’ಸೋಜಾ, ಪ್ರಸಾದ್ ಕರಿಮಜಲಲ್, ಅರುಣ್, ದಿನೇಶ್ ಮುರುವ, ಲಿಂಗಪ್ಪ ಗೌಡ, ಮಾರ್ಷಲ್, ಬಾಬು ಮೊದಲಾದವರು ಉಪಸ್ಥಿತರಿದ್ದರು.
ಕ್ರಮ ಕೈಗೊಳ್ಳಲು ನಿರಾಸಕ್ತಿ
ತಾ.ಪಂ. ಸದಸ್ಯ ಆದಂ ಕುಂಞಿ ಮಾತನಾಡಿ, ಬಡವರ ಆಸ್ತಿಯನ್ನು 24 ಗಂಟೆಗಳೊಳಗೆ ಎತ್ತಂಗಡಿ ಮಾಡೋ ಕಂದಾಯ ಇಲಾಖೆ ಸರಕಾರಿ ಸಂಸ್ಥೆಯ ಜಾಗವನ್ನೇ ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಯಾಕೆ ಇಷ್ಟು ನಿರಾಸಕ್ತಿ ತೋರುತ್ತಿದೆ. ಯಾರದೋ ವೈಯಕ್ತಿಕ ಹಿತಾಸಕ್ತಿಗೋಸ್ಕರ ಸರಕಾರಿ ಸಂಘ-ಸಂಸ್ಥೆಗಳ ಜಾಗವನ್ನು ಬಲಿ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಜನಪ್ರತಿನಿಧಿಗಳಾದ ನಮ್ಮ ಬೇಡಿಕೆ, ಮನವಿಗೆ ಸ್ಪಂದಿಸದಿದ್ದರೆ ನಾವು ಜನಪರ ಕೆಲಸದಲ್ಲಿ ತೊಡಗುವುದು ಹೇಗೆ. ನಮಗೆ ನ್ಯಾಯ ಬೇಕು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮಾನ್ಯ ಎಸಿ ಅವರು ಸ್ಥಳಕ್ಕೆ ಭೇಟಿ ಕೊಟ್ಟು ನಮಗೆ ಶಾಶ್ವತ ಪರಿಹಾರ ಒದಗಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.