ಇಂದಿನಿಂದ ಅಂಗನವಾಡಿ,ಪೂರ್ವ ಪ್ರಾಥಮಿಕ ಆರಂಭ
Team Udayavani, Nov 8, 2021, 6:57 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ.
ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ ಪೌಷ್ಟಿಕ ಆಹಾರವನ್ನು ಕೇಂದ್ರದಲ್ಲಿಯೇ ನೀಡಲಾಗುತ್ತದೆ.
ದ.ಕ. ಜಿಲ್ಲೆಯಲ್ಲಿ 2,108 ಅಂಗನವಾಡಿಗಳಿದೆ. ಫಲಾನುಭವಿಗಳ ಅಂದಾಜು ಸಂಖ್ಯೆ 1.80 ಲಕ್ಷವಿದ್ದು, ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು 4,200 ಮಂದಿ ಇದ್ದಾರೆ.
ಎಲ್‌ಕೆಜಿ ಹಾಗೂ ಯುಕೆಜಿಯು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30ರಿಂದ ಅಪರಾಹ್ನ 3.30ರ ವರೆಗೆ ನಡೆಸಲು ಸೂಚನೆ ನೀಡಲಾಗಿದೆ. ತರಗತಿಗಳನ್ನು ಸಿಂಗರಿಸಲಾಗಿದ್ದು, ಪುಟಾಣಿಗಳ ಸ್ವಾಗತಕ್ಕೆ ಸಕಲ ತಯಾರಿ ಮಾಡಲಾಗಿದೆ.
ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ
ಉಡುಪಿ: 1,191 ಅಂಗನವಾಡಿ
ಉಡುಪಿ: ಪೂರ್ವ ಪ್ರಾಥಮಿಕ ಮತ್ತು ಅಂಗನವಾಡಿಗಳು ಇಂದಿನಿಂದ ಆರಂಭಗೊಳ್ಳಲಿರುವ ಕಾರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಮತ್ತು ಕಾರ್ಕಳದ ಒಟ್ಟು 4 ಶಿಶು ಅಭಿವೃದ್ದಿ ಯೋಜ ನಾಧಿಕಾರಿಗಳ ವ್ಯಾಪ್ತಿಯ 1,191 ಅಂಗನವಾಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು 2 ಡೋಸ್ ಲಸಿಕೆ ಪಡೆದಿರುವುದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪರಿಶೀಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.