ಚಿಣ್ಣರಿಗೆ ತೆರೆದುಕೊಳ್ಳುತ್ತಿದೆ ಅಂಗನವಾಡಿ

ಅರ್ಧ ತಾಸಿಗೊಮ್ಮೆ ಪುಟಾಣಿಗಳ ಕೈ ತೊಳೆಯುವುದು ಕಡ್ಡಾಯ ಸಂದರ್ಶಕರಿಗೆ ನಿರ್ಬಂಧ

Team Udayavani, Nov 2, 2021, 7:00 AM IST

ಚಿಣ್ಣರಿಗೆ ತೆರೆದುಕೊಳ್ಳುತ್ತಿದೆ ಅಂಗನವಾಡಿ

ಮಂಗಳೂರು: ಕೋವಿಡ್‌ ಆತಂಕ ಮರೆಯಾಗುತ್ತಿರುವಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಚಿಣ್ಣರ ಆಗಮನಕ್ಕೆ ಅಂಗನವಾಡಿಗಳೂ ಸಜ್ಜಾಗಿವೆ.

ರಾಜ್ಯಾದ್ಯಂತ ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ ಸೂಚಿಸಿದೆ. ವಿಶೇಷವೆಂದರೆ ಕೇಂದ್ರಕ್ಕೆ ಬರುವ ಎಲ್ಲರಿಗೂ ಕೈ ತೊಳೆಯಲು ಸೋಪು ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ ಎಲ್ಲ ಮಕ್ಕಳು ಪ್ರತೀ 30 ನಿಮಿಷಕ್ಕೊಮ್ಮೆ ಕೈ ತೊಳೆಯಬೇಕು.

ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹಾಗೂ ಹಾಜರಾಗುವ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್‌ ಲಸಿಕೆ ಪಡೆದಿರಬೇಕು. ಸಂದರ್ಶಕರಿಗೆ ನಿರ್ಬಂಧವಿರಲಿದೆ.

ಅಂಗನವಾಡಿ ಕೇಂದ್ರಗಳನ್ನು ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ 12ರ ವರೆಗೆ ತೆರೆಯಬಹುದಾಗಿದೆ. ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು, ಮೈಕೈ ನೋವು, ಉಸಿರಾಟದ ಸಮಸ್ಯೆ, ರುಚಿ ಹಾಗೂ ವಾಸನೆಯನ್ನು ಕಳೆದುಕೊಳ್ಳುವ ಲಕ್ಷಣಗಳಿದ್ದರೆ ಅಂತಹ ಮಗುವನ್ನು ಕರೆತರದಂತೆ ಸೂಚಿಸಬೇಕಿದೆ.

ಇದನ್ನೂ ಓದಿ:ಬೈಕ್‌ ಬೋಟ್‌ ಹಗರಣ ತನಿಖೆ ಕೈಗೆತ್ತಿಕೊಂಡ ಸಿಬಿಐ

ಮಕ್ಕಳನ್ನು 1 ಮೀಟರ್‌ ಅಂತರದಲ್ಲಿ ಕೂರಿಸಬೇಕು. ಮಕ್ಕಳ ಸಂಖ್ಯೆ ಹೆಚ್ಚು ಇದ್ದಲ್ಲಿ 2 ಅಥವಾ 3 ದಿನಕ್ಕೊಮ್ಮೆ ಬರುವಂತೆ ಸೂಚಿಸಬೇಕು. ಒಂದು ವೇಳೆ ಮಕ್ಕಳ ಸಂಖ್ಯೆ ಕಡಿಮೆ ಇದ್ದಲ್ಲಿ ಎಲ್ಲ ಮಕ್ಕಳನ್ನು ಪ್ರತೀ ದಿನ ಬರುವಂತೆ ತಿಳಿಸಬೇಕು. ವಲಸೆ ಬಂದವರ ಮಕ್ಕಳು ಊರಲ್ಲಿದ್ದರೆ ಅಂತಹ ಮಕ್ಕಳನ್ನು ಅಂಗನವಾಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಪೌಷ್ಟಿಕ ಆಹಾರದೊಂದಿಗೆ ಎಲ್ಲ ಸೇವೆಗಳನ್ನು ಒದಗಿಸಬೇಕು. ಯಾವುದೇ ದಾಖಲಾತಿ ಇಲ್ಲದಿದ್ದರೂ ನೋಂದಣಿ ನಿರಾಕರಿಸಬಾರದು.

ಸ್ಯಾನಿಟೈಸರ್‌ ಎಚ್ಚರಿಕೆ ಇರಲಿ!
ಸ್ಯಾನಿಟೈಸರ್‌/ಸೋಂಕು ನಿವಾರಕ ಪುಟಾಣಿಗಳ ಕೈಗೆ ಸಿಗದಂತೆ ಸುರಕ್ಷಿತ ಸ್ಥಳದಲ್ಲಿ ಇಡಬೇಕು ಎಂದು ಸೂಚಿಸಲಾಗಿದೆ.

ಪೌಷ್ಟಿಕ ಆಹಾರ ಮನೆಗೆ
ಪ್ರಸ್ತುತ ಅಂಗನವಾಡಿ ಕೇಂದ್ರವನ್ನು ಪೂರ್ಣಪ್ರಮಾಣದಲ್ಲಿ ತೆರೆಯದೇ ಇರುವುದರಿಂದ ಮುಂದಿನ ಸೂಚನೆಯವರೆಗೆ ಪೂರಕ ಪೌಷ್ಟಿಕಾಂಶ ಯುಕ್ತ ಆಹಾರ/ಆಹಾರ ಪದಾರ್ಥಗಳನ್ನು ಮನೆಗೆ ನೀಡಲಾಗುತ್ತದೆ. ಅಂಗನವಾಡಿ ಆರಂಭವಾಗಿ 15 ದಿನಗಳ ವರೆಗೂ ಇದೇ ಕ್ರಮ ಜಾರಿಯಲ್ಲಿರಲಿದೆ. ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ ಅಂಗನವಾಡಿಯಲ್ಲಿಯೇ ನೀಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ಕೇಂದ್ರ ಕಚೇರಿಯ ಸೂಚನೆಯ ಬಳಿಕ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ, ಬಿಸಿಯೂಟ, ಬಿಸಿಹಾಲು, ಬೇಯಿಸಿದ ಮೊಟ್ಟೆ ನೀಡಲಾಗುವುದು.

ಅಂಗನವಾಡಿ ಕೇಂದ್ರ ಗಳನ್ನು ನ. 8ರಿಂದ ಪುನರಾರಂಭಿಸುವಂತೆ ಸರಕಾರ ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
– ಪಾಪಾ ಬೋವಿ ಹಾಗೂ ಶೇಷಪ್ಪ ಆರ್‌.
ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ. ಹಾಗೂ ಉಡುಪಿ

-ದಿನೇಶ್‌ ಇರಾ

ಟಾಪ್ ನ್ಯೂಸ್

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.