ಎಂಜಿರ-ಲಾವತ್ತಡ್ಕ: ಗ್ಯಾಸ್ ಟ್ಯಾಂಕರ್ ಪಲ್ಟಿ
Team Udayavani, May 26, 2017, 11:50 AM IST
ನೆಲ್ಯಾಡಿ: ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಒಂದು ಎದುರಿನಿಂದ ಬಂದ ಟಿಪ್ಪರ್ ಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯ ಎಂಜಿರ-ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಗುಂಡ್ಯ ಕಡೆಯಿಂದ ಡಾಮರ್ ಪ್ಯಾಚ್ ವಕ್ಸì ಮುಗಿಸಿ ಹಿಂದಿರುಗುತ್ತಿದ್ದ ಟಿಪ್ಪರ ಒಂದಕ್ಕೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು ,ಅಪಘಾತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ರಸ್ತೆಯ ಬದಿಗೆ ಮಗುಚಿ ಬಿದ್ದಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದರೂ ಅದೃಷ್ಟವಷಾತ್ ಗ್ಯಾಸ್ ಸೋರಿಕೆಯಾಗದಿದ್ದುದರಿಂದ ಅಪಾಯ ಸಂಭವಿಸಲಿಲ್ಲ. ಟಿಪ್ಪರ್ ವಾಹನದಲ್ಲಿದ್ದ ಚಾಲಕ ಮುಸ್ತಾಕ್ 30 ವ, ಸಫìರೋಜ್ 26 ವ, ಸಿದ್ದಿಕ್ 35 ವ, ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಘಟನೆ ನಡೆದ ತಕ್ಷಣ ಕ್ವಿಕ್ ರೆಸ್ಪಾನ್ಸ್ ವೆಹಿಕಲ್ನ ಸಿಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಧರ್ಮಸ್ಥಳ ಠಾಣೆಯ ಎಸೈ ರಾಮನ್ಯಾಕ್ ಹಾಗೂ ಸಿಬಂದಿಗಳು ಮತ್ತು ನೆಲ್ಯಾಡಿ ಹೊರಠಾಣಾ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.
ಲಾವತ್ತಡ್ಕದ ಈ ತಿರುವಿನಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು ವೇಗನಿಯಂತ್ರಕಗಳನ್ನು ಅಳವಡಿ ಸುವಂತೆ ಸಾರ್ವಜನಿಕರು ಹೆದ್ದಾರಿ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.