ಫೆ.17 ನಗರದಲ್ಲಿ ಅನಾಥ ಪ್ರಾಣಿಗಳ ದತ್ತು ಶಿಬಿರ


Team Udayavani, Feb 16, 2019, 10:45 AM IST

animal-care-1.jpg

ಮಂಗಳೂರು: ನಮ್ಮ ಜೀವನದಲ್ಲಿ ಸಾಕುಪ್ರಾಣಿಗಳು ಪ್ರಮುಖ ಪಾತ್ರವಹಿಸುತ್ತವೆ.  ಕೆಲವು ಅಧ್ಯಯನಗಳ ಪ್ರಕಾರ, ಪ್ರಾಣಿಗಳನ್ನು ಸಾಕುವವರ ಹೃದಯ ಆರೋಗ್ಯಕರವಾಗಿರುತ್ತದೆ ಮಾತ್ರವಲ್ಲದೇ, ಕಡಿಮೆ ಅನಾರೋಗ್ಯ, ವೈದ್ಯರಿಗೆ ಕಡಿಮೆ ಭೇಟಿ, ಹೆಚ್ಚು ವ್ಯಾಯಾಮ, ಮತ್ತು ಕಡಿಮೆ ಖಿನ್ನತೆಗೆ ಒಳಗಾಗುತ್ತಾರೆ. ಈ ನಿಟ್ಟಿನಲ್ಲಿ ಅನಿಮಲ್ ಕೇರ್ ಟ್ರಸ್ಟ್, ಶಕ್ತಿನಗರ, ಆಗಾಗ್ಗೆ ದತ್ತು ಶಿಬಿರಗಳನ್ನು ನಡೆಸುತ್ತಿದೆ.

ಸಾಕು ಪ್ರಾಣಿಗಳನ್ನು ಅಂಗಡಿಯಿಂದ ಹಣ ಕೊಟ್ಟು ತೆಗೆದುಕೊಳ್ಳುವ ಬದಲು, ನಮ್ಮ ದೇಶೀಯ ನಾಯಿ ಮತ್ತು ಬೆಕ್ಕಿನ ಮರಿಗಳನ್ನು ದತ್ತು ತೆಗೆದುಕೊಳ್ಳಬೇಕು ಎಂಬುದು ಅನಿಮಲ್ ಕೇರ್ ಟ್ರಸ್ಟ್ ನ ಧ್ಯೇಯವಾಗಿದೆ. ಈ ಉದ್ದೇಶದಿಂದಾಗಿ ದತ್ತು ಶಿಬಿರಗಳನ್ನು ನಡೆಸಿ, ಅನಾಥವಾಗಿರುವ ಭಾರತೀಯ ತಳಿಯ ನಾಯಿ ಮತ್ತು ಬೆಕ್ಕುಗಳಿಗೆ ಪ್ರೀತಿಭರಿತ, ಶಾಶ್ವತವಾದ ಮನೆಗಳನ್ನು ಸೇರಿಸುವ ಕಾರ್ಯವನ್ನು ಮಾಡುತ್ತಿದೆ.

ಅಂತಹ ಒಂದು ಶಿಬಿರವನ್ನು Pet Pantry, Sai Arcade, ಬಿಜೈನಲ್ಲಿ, ಫೆಬ್ರವರಿ 17ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಡೆಸಲಾಗುವುದು. ಈ ಶಿಬಿರದಲ್ಲಿ ಸುಮಾರು 20 ನಾಯಿ ಮರಿಗಳು ಮತ್ತು 6 ಬೆಕ್ಕಿನ ಮರಿಗಳನ್ನು ದತ್ತು ನೀಡಲಾಗುವುದು.


ನಾಯಿ ಮತ್ತು ಬೆಕ್ಕಿನ ಮರಿಗಳನ್ನು ದತ್ತು ತೆಗೆದುಕೊಳ್ಳಲು 200 ರೂಪಾಯಿಗಳ ಶುಲ್ಕವನ್ನು ಸಂಗ್ರಹಿಸಲಾಗುತ್ತದೆ. ಇದರಲ್ಲಿ ರಾಬೀಸ್ ತಡೆಯುವ ಲಸಿಕೆಯ ಶುಲ್ಕ ಸೇರಿದೆ. ದತ್ತು ತೆಗೆದುಕೊಳ್ಳುವವರು ತಮ್ಮ ವಾಸ್ತವ್ಯ ವಿಳಾಸದ ನಕಲು ಪ್ರತಿಯನ್ನು ನೀಡಬೆಕಾಗಿರುತ್ತದೆ. ನೀವು ಈ ಶಿಬಿರದಲ್ಲಿ ದತ್ತು ತೆಗೆದುಕೊಂಡ ಪ್ರ್ರಾಣಿಯ ಯೋಗಕ್ಷೇಮದ ಬಗ್ಗೆ ಹಾಗೂ ಅದರ ಸಂತಾನ ಹರಣ ಚಿಕಿತ್ಸೆಯ ಕುರಿತಾದಂತೆ ಅನಿಮಲ್ ಕೇರ್ ಟ್ರಸ್ಟ್ ನವರು ಬಳಿಕ ನಿಮ್ಮ ಸಂಪರ್ಕದಲ್ಲಿರುತ್ತಾರೆ.

ಅನಿಮಲ್ ಕೇರ್ ಟ್ರಸ್ಟ್ ಬಗ್ಗೆ
ಅನಾಥವಾಗಿರುವ, ಕಾಯಿಲೆಗೆ ಒಳಗಾದ ಮತ್ತು ತೊರೆದ ಪ್ರಾಣಿಗಳಿಗೆ ರಕ್ಷಣೆ ಮತ್ತು ಆಶ್ರಯ ಒದಗಿಸಲು, 2000 ಇಸವಿಯಲ್ಲಿ ಅನಿಮಲ್ ಕೇರ್ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ದೇಶೀಯ ತಳಿಗಳನ್ನು ನಿರ್ಲಕ್ಷಿಸುವುದು ಮತ್ತು ದಾರಿಯಲ್ಲಿ ಬಿಟ್ಟುಬಿಡುವುದು ಹೆಚ್ಚಾಗಿರುವಾಗ, ಅನಿಮಲ್ ಕೇರ್ ಟ್ರಸ್ಟ್ ನವರು, ಈ ಪ್ರಾಣಿಗಳಿಗೆ ಪ್ರೀತಿಯಿಂದ ನೋಡಿಕೊಳ್ಳುವ ಮನೆಗಳನ್ನು ಹುಡುಕುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅನಿಮಲ್ ಕೇರ್ ಟ್ರಸ್ಟ್, ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾದಿಂದ ಗುರುತಿಸಲ್ಪಟ್ಟ ನೋಂದಾಯಿತ ಚಾರಿಟಬಲ್ ಟ್ರಸ್ಟ್ ಆಗಿದೆ. ಮಂಗಳೂರು ಸಿಟಿ ಕಾರ್ಪೊರೇಶನ್ಗಾಗಿ ಎಬಿಸಿ / ಎಆರ್ವಿ ನಡೆಸುತ್ತದೆ ಮತ್ತು ಮಂಗಳೂರು ಸಿಟಿ ಕಾರ್ಪೊರೇಷನ್ ಅದರ ಚಟುವಟಿಕೆಗಳನ್ನು ಅಂಗೀಕರಿಸಲಾಗಿದೆ ಮತ್ತು ಗುರುತಿಸಿದೆ.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.