ಬೆಳ್ತಂಗಡಿ ತಾಲೂಕಿನ ಕರಾಯದ ಯುವಕನಲ್ಲಿ ಕೋವಿಡ್ 19 ಪಾಸಿಟಿವ್ ದೃಢ
Team Udayavani, Mar 27, 2020, 10:05 PM IST
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕಿನ ಮತ್ತೊಂದು ಪ್ರಕರಣ ಇಂದು ದೃಢಗೊಂಡಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕನಲ್ಲಿ ಈ ವೈರಸ್ ಪಾಸಿಟಿವ್ ಆಗಿರುವುದು ಇಂದು ಪತ್ತೆಯಾಗಿದೆ. ಈ ಯುವಕ ಮಾರ್ಚ್ 21ರಂದು ದುಬಾಯಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ಆ ಬಳಿಕ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಮೂಲಕ ಕರಾಯದಲ್ಲಿರುವ ತನ್ನ ಮನೆಗೆ ಬಂದಿದ್ದ.
ಬಳಿಕ ಈ ಯುವಕನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಕಾರಣದಿಂದ ಮಾರ್ಚ್ 24ರಂದು ಪುತ್ತೂರಿನ ಆಸ್ಪತ್ರೆ ದಾಖಲುಗೊಂಡಿದ್ದ. ಈ ಸಂದರ್ಭದಲ್ಲಿ ಈತನ ಗಂಟಲು ಸ್ರಾವ ಮಾದರಿಯನ್ನು ತಪಾಸಣೆಗೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಇಂದು ಕೈಸೇರಿದ್ದು ಇದರಲ್ಲಿ ಈ ಯುವಕನಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.
ಇದೀಗ ವೈರಸ್ ಸೋಂಕಿತ ಯುವಕನನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಟ್ರಾವೆಲ್ ಹಿಸ್ಟರಿ ಮತ್ತು ಕಾಂಟ್ಯಾಕ್ಟ್ ಹಿಸ್ಟರಿಗಳನ್ನು ಕಂಡುಹಿಡಿಯಲಾಗುತ್ತಿದೆ. ಈ ಎಲ್ಲಾ ಮಾಹಿತಿಗಳನ್ನು ಜಿಲ್ಲಾ ಆರೋಗ್ಯ ಅಧಿಕಾರಿಯವರು ಇಂದು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.