ಬಂಟ್ವಾಳದ ಮತ್ತೋರ್ವ ಮಹಿಳೆಗೆ ಕೋವಿಡ್-19 ಸೋಂಕು ದೃಢ
Team Udayavani, Apr 23, 2020, 12:41 PM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮತ್ತೋರ್ವ ಮಹಿಳೆಗೆ ಕೋವಿಡ್-19 ಸೋಂಕು ದೃಢವಾಗಿದೆ. ಇತ್ತೀಚೆಗೆ ಸೋಂಕಿನ ಕಾರಣ ಮೃತರಾದ ಮಹಿಳೆ (ಸೋಂಕಿತ ಸಂಖ್ಯೆ 390)ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ದೃಢವಾಗಿದೆ.
78 ವರ್ಷದ ಮಹಿಳೆ ಇತ್ತೀಚೆಗೆ ಪಾರ್ಶ್ವವಾಯು ಗೆ ಸಂಬಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಮೃತಪಟ್ಟ ಮಹಿಳೆಗೆ ಹತ್ತಿರದ ಸಂಬಂಧಿಯಾಗಿರುವ ಈಕೆಯನ್ನು ಬುಧವಾರ ಖಾಸಗಿ ಆಸ್ಪತ್ರೆಯಿಂದ ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ಗೆ ದಾಖಲಿಸಲಾಗಿತ್ತು.
ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಹೊಸ 16 ಸೋಂಕು ಪ್ರಕರಣಗಳು ದೃಢವಾಗಿದ್ದು, ಒಟ್ಟು 443 ಸೋಂಕು ಪ್ರಕರಣಗಳಿವೆ. ಅದರಲ್ಲಿ 17 ಜನರು ಮೃತರಾಗಿದ್ದಾರೆ. 141 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.