ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ: ಪ್ರಧಾನ್‌


Team Udayavani, Apr 22, 2018, 11:06 AM IST

2104mlr31-Darmendra-pradhan.jpg

ಮಂಗಳೂರು: ರಾಜ್ಯದ ಕಾಂಗ್ರೆಸ್‌ ಸರಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದ್ದು ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ  ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು ಅಭಿವೃದ್ಧಿಯ ಸುವರ್ಣ ಯುಗವೊಂದು ಆರಂಭವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹಾಗೂ ಕರಾವಳಿಯಲ್ಲಿ ಪಕ್ಷದ ಚುನಾವಣೆ ಉಸ್ತುವಾರಿ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದರು.

ನಗರದದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ, ದೂರದೃಷ್ಟಿ ರಹಿತ ಆಡಳಿತದಿಂದ ಕರ್ನಾಟಕ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಿದ್ದು ಜನರ ಆಶೋತ್ತರಗಳಿಗೆ ಸ್ಪಂದಿಸಲು ವಿಫಲವಾಗಿದೆ. ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರ ಚುನಾವಣೆಯ ಮುಖ್ಯ ವಿಷಯವಾಗಲಿದೆ ಎಂದರು.

ಬರಲಿದೆ ಸುವರ್ಣಯುಗ 
ಕೇಂದ್ರದಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ಧಿ ಪರ ಆಡಳಿತ ಹಾಗೂ ಸಾಧನೆಗಳು, ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ದಕ್ಷ ನಾಯಕತ್ವ ಹಾಗೂ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀಡಿರುವ ಜನಪರ ಆಡಳಿತ ದಿಂದ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ರಾಜ್ಯ ಸುವರ್ಣಯುಗವೊಂದನ್ನು ಕಾಣಲಿದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದು ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನಾಂಕವಾದ ಎ. 27ರ ಬಳಿಕ ರಾಜ್ಯದಲ್ಲಿ ಪಕ್ಷದ ಚುನಾವಣಾ ಪ್ರಚಾರ ತೀವ್ರಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲೇ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಧಾನ್‌ ಹೇಳಿದರು.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಒಳಗೊಂಡಿರುವ ಆರೋಪದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅಪರಾಧ ಯಾರೇ ಮಾಡಿದರೂ ಶಿಕ್ಷೆಯಾಗಲೇ ಬೇಕು. ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಅತ್ಯಂತ ಕಠಿನ ಶಿಕ್ಷೆ ವಿಧಿಸಲು ಅನುವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕಠಿನ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ದೇಶದಲ್ಲಿ ಡೀಸೆಲ್‌, ಪೆಟ್ರೋಲ್‌ ಬೆಲೆ ದುಬಾರಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಚ್ಚಾತೈಲ ಪೂರೈಕೆ ದೇಶಗಳಾದ ಸಿರಿಯ, ವೆನಿಜೋಲಾ, ಹಾಗೂ ಇರಾಕ್‌ನಲ್ಲಿ ಆಂತರಿಕ ಬಿಕ್ಕಟ್ಟಿನಿಂದಾಗಿ ದೇಶಕ್ಕೆ ಕಚ್ಚಾ ತೈಲ ಸರಬರಾಜಿ
ನಲ್ಲಿ ವ್ಯತ್ಯಯವಾಗಿದ್ದು ಬೆಲೆ ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಡೀಸೆಲ್‌, ಪೆಟ್ರೋಲ್‌ಬೆಲೆಯಲ್ಲಿ ಹೆಚ್ಚಳವಾಗಿದೆ. ಸರಕಾರ ಪರಿಸ್ಥಿತಿ ಅವಲೋಕಿಸಿ ಪೂರಕ ಕ್ರಮ ಕೈಗೊಳ್ಳಲಿದೆ ಎಂದರು. 

ಕರಾವಳಿಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ, ಉತ್ತರಪ್ರದೇಶದ ಸಚಿವ ಮಹೇಂದ್ರ ಸಿಂಗ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ರಾಜ್ಯ ವಿಧಾನಪರಿಷತ್‌ ವಿರೋಧ ಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಮುಖಂಡ ರಾದ ಮೋನಪ್ಪ ಭಂಡಾರಿ, ಸುಲೋಚನಾ ಜಿ.ಕೆ. ಭಟ್‌, ರವಿಶಂಕರ ಮಿಜಾರ್‌, ಕಿಶೋರ್‌ ರೈ, ಕ್ಯಾ| ಬೃಜೇಶ್‌ ಚೌಟ, ಜೀತೇಂದ್ರ ಕೊಟ್ಟಾರಿ, ಸುದರ್ಶನ್‌ ಎಂ., ಸಂಜಯ ಪ್ರಭು, ಕಿಶೋರ್‌ ಕೊಟ್ಟಾರಿ ಉಪಸ್ಥಿತರಿದ್ದರು.

ಅಸಮಾಧಾನ ಬಗೆಹರಿಯಲಿದೆ
ಬಿಜೆಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಕಾಂಕ್ಷಿಗಳಿದ್ದು ಇವರೆಲ್ಲರ ಹೆಸರುಗಳನ್ನು ಪರಿಶೀಲಿಸಿ ಪಕ್ಷದ ವರಿಷ್ಠ ಮಂಡಳಿ
ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆಕಾಂಕ್ಷಿ ಗಳಲ್ಲಿ ಈ ಬಗ್ಗೆ ಅಸಮಾಧಾನಗಳಿದ್ದರೆ ಅದನ್ನು ಬಗೆಹರಿಸಲಾಗುವುದು. ಬಿಜೆಪಿಯಲ್ಲಿ ಜಾತಿಗೆ ಪ್ರಾಧಾನ್ಯ ಇಲ್ಲ. ಹಿಂದುಳಿದ ವರ್ಗಕ್ಕೆ ಸೇರಿರುವ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್‌ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.