ಬಾಲಕಾರ್ಮಿಕ ಪದ್ಧತಿಯಿಂದ ಅಭಿವೃದ್ಧ ಕುಂಠಿತ: ಕಿರಣ ಕಿಣಿ
Team Udayavani, Jun 13, 2018, 5:38 PM IST
ಬೆಳಗಾವಿ: ಬಾಲಕಾರ್ಮಿಕ ಪದ್ಧತಿ ಇರುವವರೆಗೆ ಸಮಾಜದ ಅಭಿವೃದ್ಧಿ ಅಸಾಧ್ಯ. ಇದರಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಿ, ಕೈಲಾದ ಪ್ರಯತ್ನ ಮಾಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಿರಣ ಕಿಣಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮಹೇಶ್ವರಿ ಅಂಧ ಮಕ್ಕಳ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿದ ಶಾಪ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಾನೂನು ವಿರೋಧವಿದ್ದರೂ ಕೆಲವರು ಕಾರ್ಖಾನೆ, ಹೋಟೆಲ್ ಇನ್ನಿತರೆ ಉದ್ದಿಮೆಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುತ್ತಿರುವುದು ವಿಷಾದನೀಯ. ಮಕ್ಕಳನ್ನು ದುಡಿಸುವುದು ನ್ಯಾಯ ಸಮ್ಮತವಲ್ಲ. ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಹೇಳಿದರು.
ಅಂಗನವಾಡಿ ಶಿಕ್ಷಕಿಯರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಕೂಲಿಗೆ ಹೋಗುವ ಮಕ್ಕಳನ್ನು ಗುರುತಿಸಿ ಮಾಹಿತಿ ನೀಡಿದರೆ ಜಿಲ್ಲಾ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಇನ್ನಿತರ ಇಲಾಖೆಗಳಿಂದ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಹಕ್ಕುಗಳ ರಕ್ಷಣೆ ಮಾಡಿ, ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ಮುನಿರಾಜು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಅದರಿಂದ ಹಣ ಸಂಪಾದಿಸುವ ದೊಡ್ಡ ಮಾಫಿಯಾ ಕೂಡ ಈ ದೇಶದಲ್ಲಿರುವುದು ವಿಪರ್ಯಾಸ ಎಂದರು. ಕಾನೂನು ಬಲಿಷ್ಠವಾಗೆ ಇದೆ. ಆದರೆ ಕಾನೂನಿನಿಂದ ಎಲ್ಲ ಬದಲಾವಣೆ ಅಸಾಧ್ಯ. ನಮ್ಮ ಮನಸ್ಸು ಬದಲಾದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯ ಸಮಾನ ಮನಸ್ಕ ಅಧಿಕಾರಿಗಳು, ಸುಶಿಕ್ಷಿತರು ಹಾಗೂ ಸ್ನೇಹಿತರು ಸೇರಿ ಭಿಕ್ಷಾಟನೆ ಹಾಗೂ ಕೂಲಿ ಮಾಡುವ ಮಕ್ಕಳನ್ನು ಗುರುತಿಸಿ, ಅವರಿಗೆ ಶಿಕ್ಷಣ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿದರೆ ಅವರು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸಿಸ್ಟರ್ ನೂರ್ದ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಇಂದಿಗೂ ಜೀವಂತವಾಗಿರುವುದಕ್ಕೆ ಸಮಾಜದ ಪ್ರತಿಯೊಬ್ಬರೂ ಹೊಣೆಗಾರರಾಗಿದ್ದಾರೆ. ಒಂದು ಮಗುವನ್ನಾದರೂ ರಕ್ಷಣೆ ಮಾಡಬೇಕೆಂಬ ಧ್ಯೇಯ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹೇಳಿದರು.
ಕಾ ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಬಾಲಕಾರ್ಮಿಕ ಮತ್ತು ಕಿಶೋರ ಕಾಯಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ವಿಷಯದ ಕುರಿತು ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಉಮೇಶ ಶರ್ಮ ಬಾಲಕಾರ್ಮಿಕ ಪದ್ಧತಿ
ನಿರ್ಮೂಲನೆಯಲ್ಲಿ ಉದ್ಯೋಗದಾತರ ಪಾತ್ರ ವಿಷಯದ ಕುರಿತು ಉಪನ್ಯಾಸ ನೀಡಿದರು.
ಸಹಿ ಅಭಿಯಾನ:
ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಿರಣ ಕಿಣಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಕೈಜೋಡಿಸುವ ಕುರಿತು ಎಲ್ಲರಿಗೂ ಪ್ರಮಾಣವಚನ ಬೋಧಿಸಿದರು. 1098 ಮಕ್ಕಳ ಸಹಾಯವಾಣಿ ಕೇಂದ್ರದಿಂದ ಸಹಿ ಸಂಗ್ರಹ ಅಭಿಯಾನ ಜರುಗಿತು. ಬಾಲಕಾರ್ಮಿಕ ಶಾಲೆಯ ಮಕ್ಕಳಿಗೆ ಶಾಲಾ ಕಿಟ್ ವಿತರಿಸಲಾಯಿತು.
ಮಹೇಶ್ವರಿ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಬೆಂಬಳಗಿ, ಹಿರಿಯ ಅಧಿಕಾರಿ ರವೀಂದ್ರ ರಾಠೊಡ, ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಉಪಸ್ಥಿತರಿದ್ದರು. ಸಹಾಯಕ ಕಾರ್ಮಿಕ ಆಯುಕ್ತ ಧರಣೇಶ ಸ್ವಾಗತಿಸಿದರು.ಸ್ಮಿತಾ ನೀಲಗಾರ ಹಾಗೂ ಅನಿತಾ ಗಾವಡೆ ನಿರೂಪಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಜ್ಯೋತಿ ಕಾಂತೆ ವಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಿರಣ ಕಿಣಿ ಜಾಥಾದಲ್ಲಿ ಪಾಲ್ಗೊಂಡಿದ್ದರು .
ಜಾಗೃತಿ ಜಾಥಾ
ಬೆಳಿಗ್ಗೆ ಜಿಲ್ಲಾಧಿಕಾರಿ ಕಾರ್ಯಾಲಯ ಆವರಣದಿಂದ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.