Nagara Panchami ಸಾರ್ವತ್ರಿಕ ರಜೆ ಘೋಷಿಸುವಂತೆ ಆಗ್ರಹ
ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ
Team Udayavani, Aug 20, 2023, 12:05 AM IST
ಮಂಗಳೂರು/ಕಾಪು: ತುಳುನಾಡಿನಲ್ಲಿ ವಿಶಿಷ್ಟವಾಗಿ ಆಚರಿಸ ಲಾಗುವ ನಾಗರ ಪಂಚಮಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡ ಬೇಕೆಂದು ಜೈ ತುಳುನಾಡ್ ಸಂಘಟನೆ ವತಿಯಿಂದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ತುಳುನಾಡು “ದೈವಸೃಷ್ಟಿ ನಾಗದೃಷ್ಟಿ’ ಎಂಬ ಪ್ರತೀತಿ ಹೊಂದಿದೆ. ಇಲ್ಲಿ ದೈವಾರಾಧನೆಯಂತೆ ನಾಗರಾಧನೆಯೂ ತುಂಬಾ ಪ್ರಾಮುಖ್ಯ ಪಡೆದಿದೆ. ಕುಟುಂಬದ ಹಿರಿಯರು-ಕಿರಿಯರು ಸೇರಿ ಮೂಲಸ್ಥಳಕ್ಕೆ ಹೋಗಿ ನಾಗರಪಂಚಮಿ ಆಚರಿಸುವುದು ತುಳುನಾಡಿನ ವೈಶಿಷ್ಟ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಮತ್ತು ಶಾಲೆ-ಕಾಲೇಜು, ಕಚೇರಿಗಳಿಗೆ ರಜೆ ಇಲ್ಲದ ಕಾರಣ ಯುವಪೀಳಿಗೆ ಈ ಎಲ್ಲವುಗಳಿಂದ ದೂರ ಉಳಿದು, ತಮ್ಮ ಮೂಲ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಆದ್ದರಿಂದ ನಾಗರಪಂಚಮಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಸಂಘಟನೆ ಮನವಿಯಲ್ಲಿ ಆಗ್ರಹಿಸಿದೆ.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೂ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಶಾಸಕರು ಈ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬುಶೇಖರ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರಿಗೆ ತುಳು ಲಿಪಿಯಲ್ಲಿ ಬರೆದ ನಾಮಫಲಕ ನೀಡಲಾಯಿತು.
ಜೈತುಳುನಾಡು ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.