ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ: ರೈತರಿಗೆ ಕ್ಯಾಂಪ್ಕೊ ಮಾಹಿತಿ
Team Udayavani, Dec 16, 2022, 5:25 AM IST
ಮಂಗಳೂರು : ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ಕೆಂಪಡಿಕೆ ದರ ಚೇತರಿಕೆ ಕಾಣು ತ್ತಿದ್ದು ಸಂಕ್ರಾಂತಿ ಬಳಿಕ ಚಾಲಿ ಅಡಿಕೆಗೂ ಪೂರ್ತಿಯಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆ ಎದುರಾಗುವುದರಿಂದ ಸಾಮಾನ್ಯ ವಾಗಿ ಪಾನ್ ಮಸಾಲ ಕಂಪೆನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದಿಸು ವುದಿಲ್ಲ, ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿತ ಸಾಮಾನ್ಯ.ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ.
ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆ ಬರುತ್ತಿದೆ. ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ.ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ರೈತರು ಗಾಳಿ ಸುದ್ದಿ ಮತ್ತು ಖಾಸಗಿ ವರ್ತಕರ ಬೆದರಿಕೆಗಳಿಗೆ ಕಿವಿಗೊಡುವ ಆವಶ್ಯಕತೆ ಇಲ್ಲ. ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು ಎಂದು ತಿಳಿಸಿದ್ದಾರೆ.
ಆಮದು ಬೆಲೆ ಹೆಚ್ಚಳಕ್ಕೆ ಶಿಫಾರಸು
ಸಹಕಾರ ಸಂಘಗಳ ನಿರಂತರ ಅನುಸರಣ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ವಾಣಿಜ್ಯ ಸಚಿವಾಲಯದಿಂದ ಕೃಷಿ ಸಚಿವಾಲಯಕ್ಕೆ ಶಿಫಾರಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವು ದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಕೊಡ್ಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.