ಅಡಿಕೆ ಹಳದಿ ಎಲೆ ರೋಗ ಬಾಧೆ : ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಧನ
Team Udayavani, May 29, 2022, 6:05 AM IST
ಪುತ್ತೂರು : ಹಲವು ದಶಕಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಭಾಗದ ಅಡಿಕೆ ತೋಟಗಳನ್ನು ನಾಶ ಮಾಡುತ್ತಿರುವ ಹಳದಿ ಎಲೆ ರೋಗದ ಸಂತ್ರಸ್ತರಿಗೆ ಪರ್ಯಾಯ ಬೆಳೆಯ ಮೂಲಕ ಪ್ರೋತ್ಸಾಹ ನೀಡಬೇಕು ಎನ್ನುವ ಬೇಡಿಕೆಗೆ ಸರಕಾರ ಸ್ಪಂದಿಸಿದ್ದು, ತೋಟಗಾರಿಕೆ ಇಲಾಖೆಯ ಮೂಲಕ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
ಅಡಿಕೆ ತೋಟ ನಾಶ ಹೊಂದಿದವರಿಗೆ ಹಾಗೂ ಪರ್ಯಾಯ ಬೆಳೆ ಅಳವಡಿಸಿಕೊಳ್ಳದಿದ್ದವರಿಗೆ ಪರಿಹಾರ ರೂಪದಲ್ಲಿ 25 ಕೋಟಿ ರೂ. ಪ್ಯಾಕೇಜ್ ಘೋಷಿಸುವಂತೆ ಶಾಸಕ ಸಚಿವ ಎಸ್. ಅಂಗಾರ ನೇತೃತ್ವದಲ್ಲಿ ಕರಾವಳಿ ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಜತೆಗೆ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವಂತೆಯೂ ಆಗ್ರಹಿಸಿದ್ದರು. ಅದರಂತೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್‌ನಲ್ಲಿ 25 ಕೋ.ರೂ. ಮೀಸಲಿಟ್ಟಿದ್ದರು. ಆದರೆ ಅಷ್ಟೂ ಮೊತ್ತವನ್ನು ಸಂಶೋಧನೆಗೆ ಬಳಸಲು ನಿರ್ಧರಿಸಿದ ಕಾರಣ ನಷ್ಟ ಪರಿಹಾರ ಸಿಗುವ ನಿರೀಕ್ಷೆ ಕಮರಿತ್ತು. ಆದರೆ ಪರ್ಯಾಯ ಬೆಳೆಗೂ ಉತ್ತೇಜನ ನೀಡಬೇಕು ಎಂಬ ಕೃಷಿಕರ ಬೇಡಿಕೆಗೆ ಇದೀಗ ಮನ್ನಣೆ ಸಿಕ್ಕಿದೆ.
1,043.38 ಹೆಕ್ಟೇರ್ ಬಾಧಿತ ಪ್ರದೇಶ
ಹಳದಿ ರೋಗ ಬಾಧಿತ ಪ್ರದೇಶಗಳ ವ್ಯಾಪ್ತಿ ಮತ್ತು ತೀವ್ರತೆಯ ಅಂಕಿ-ಅಂಶಗಳ ನಿಖರ ಅಧ್ಯಯನಕ್ಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ಕಳೆದ ಜನವರಿಯಲ್ಲಿ ತಂಡ ರಚಿಸಲಾಗಿತ್ತು. 13,993 ಸರ್ವೇ ನಂಬರ್ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಒಟ್ಟು 7,048 ಸರ್ವೇ ನಂಬರ್ ವ್ಯಾಪ್ತಿಯಲ್ಲಿ ರೋಗ ಬಾಧೆ ಕಂಡುಬಂದಿತ್ತು. 1,043.38 ಹೆಕ್ಟೇರ್‌ಗಳಲ್ಲಿ ಸುಮಾರು 14,29,440 ಅಡಿಕೆ ಮರಗಳು ರೋಗಬಾಧಿತ ಎಂದು ಪರಿಗಣಿಸಲಾಗಿತ್ತು. ಇತ್ತೀಚೆಗೆ ಪುತ್ತೂರಿನಲ್ಲಿಯೂ ರೋಗ ಲಕ್ಷಣ ಕಂಡು ಬಂದಿದ್ದು 20 ಎಕರೆ ಅಧಿಕ ಪ್ರದೇಶಗಳನ್ನು ಗುರುತಿಸಲಾಗಿದೆ.
2022-23ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪರ್ಯಾಯ ಬೆಳೆಗಳಿಗೆ ಹೆಕ್ಟೇರಿಗೆ ಶೇ. 50ರಂತೆ ಪ್ರೋತ್ಸಾಹಧನ ನೀಡಲು ತಿರ್ಮಾನಿಸಲಾಗಿದೆ. ಈ ಬಗ್ಗೆ ಆಯಾ ಗ್ರಾ.ಪಂ. ವ್ಯಾಪ್ತಿಯ ಕೃಷಿಕರಿಗೆ ಮಾಹಿತಿ ನೀಡುತ್ತಿದ್ದೇವೆ.
– ಸುಹನಾ, ಹಿರಿಯ ಸಹಾಯಕ
ತೋಟಗಾರಿಕೆ ನಿರ್ದೇಶಕಿ, ತೋಟಗಾರಿಕೆ ಇಲಾಖೆ, ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.