ಅರಂತೋಡು: ಹೊಳೆ ತೋಡಿನಲ್ಲಿ ಕುಸಿದ ನೀರಿನ ಪ್ರಮಾಣ
Team Udayavani, Nov 8, 2018, 10:22 AM IST
ಅರಂತೋಡು: ಕಳೆದ ವರ್ಷಕ್ಕೆ ಹೋಲಿಸಿದರೆ ಸುಳ್ಯ ತಾಲೂಕಿನ ಹೊಳೆ ತೋಡಿನಲ್ಲಿ ನೀರಿನ ಪ್ರಮಾಣ ಈ ವರ್ಷ ಗಣನೀಯವಾಗಿ ಕುಸಿತಗೊಂಡಿದೆ. ಬೇಸಗೆಯಲ್ಲಿ ರೈತರಿಗೆ ನೀರಿಗೆ ಬರ ಎದುರಾಗುವ ಆತಂಕ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಿಂಡಿ ಅಣೆಕಟ್ಟು, ಸಾಂಪ್ರದಾಯಿಕ ಕಟ್ಟದ ಮೂಲಕ ರೈತರು ನೀರು ಸಂಗ್ರಹಿಸಲು ಮುಂದಾಗಿದ್ದಾರೆ.
ಪ್ರತಿ ವರ್ಷ ಡಿಸೆಂಬರ್ ತಿಂಗಳಿನ ಕೊನೆಯಲ್ಲಿ ಕಿಂಡಿ ಅಣೆಕಟ್ಟು, ಇತರೆ ಸಾಂಪ್ರದಾಯಿಕ ಅಣೆಕಟ್ಟಿನ ಮೂಲಕ ರೈತರು ನೀರು ಸಂಗ್ರಹಿಸುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ವರ್ಷ ಒಂದೂವರೆ ತಿಂಗಳಿಗೆ ಮೊದಲೇ ನೀರು ಸಂಗ್ರಹಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದಕ್ಕೆ ಉದಾಹರಣೆ ಎನ್ನುವಂತೆ ಅರಂತೋಡು ಗ್ರಾಮದ ಅಂಗಡಿಮಜಲಿನಲ್ಲಿ ನೂತನವಾಗಿ ನಿರ್ಮಿಸಿದ ಕಿರು ಕಿಂಡಿ ಅಣೆಕಟ್ಟಿನಲ್ಲಿ ಈಗ ನೀರು ಸಂಗ್ರಹಿಸಲಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಪೂರ್ಣಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದ್ದು, ಈ ಭಾಗದ ರೈತರ ಮುಖದಲ್ಲಿ ಮಂದಹಾಸ ಬೀರಿದೆ. ಸುಮಾರು 8 ರೈತ ಕುಟುಂಬಗಳು ಇದರ ಪ್ರಯೋಜನ ಪಡೆಯಲಿದ್ದಾರೆ.
ಮೂರು ಕಿಂಡಿ ಅಣೆಕಟ್ಟು
2017-18ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್‌ನ ಪ್ರೋತ್ಸಾಹದಿಂದ ಅರಂತೋಡು ಗ್ರಾಮ ಪಂಚಾಯತ್‌ನ ವತಿಯಿಂದ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿಗೆ ನೀರು ಒದಗಿಸುವ ದೃಷ್ಟಿಯಿಂದ ಹಾಗೂ ಅಂತರ್ಜಲ ಮಟ್ಟ ಏರಿಕೆ ಉದ್ದೇಶ ಇರಿಸಿಕೊಂಡು ಮೂರು ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಅದರಲ್ಲಿ ಒಂದು ಅಂಗಡಿಮಜಲಿನಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು. ಇನ್ನೆರಡನ್ನು ತೊಡಿಕಾನ ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿದೆ.
ಉದ್ಯೋಗ ಖಾತರಿಯಲ್ಲಿ ಅವಕಾಶ
ಅರಂತೋಡು ಗ್ರಾ.ಪಂ. ವತಿಯಿಂದ ಖಾಸಗಿಯಾಗಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವವರು ಇದ್ದರೆ ಅವರಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಉದ್ಯೋಗ ಖಾತರಿ ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಅಂಗಡಿ ಮಜಲು ಕಿಂಡಿ ಅಣೆಕಟ್ಟನ್ನು ಜಿಲ್ಲಾ ಪಂ.ನ ಸಹಕಾರದೊಂದಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಪೂರ್ಣ ಪ್ರಮಾಣದಲ್ಲಿ ಈಗ ನೀರು ಸಂಗ್ರಹಗೊಂಡಿದೆ. ಇದೊಂದು ಮಾದರಿ ಕಾಮಗಾರಿಯಾಗಿದೆ.
– ಶಿವಾನಂದ ಕುಕ್ಕುಂಬಳ ಉಪಾಧ್ಯಕ್ಷರು,
ಅರಂತೋಡು ಗ್ರಾ.ಪಂ.
ತೇಜೇಶ್ವರ್ ಕುಂದಲ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.