ಬೆಳಂದೂರು ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಅಡಿಕೆ ನರ್ಸರಿ


Team Udayavani, Jun 14, 2018, 11:36 AM IST

14-june-5.jpg

ಬೆಳಂದೂರು: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಎನ್ನೆಸೆಸ್‌ ಘಟಕವು ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳನ್ನು ಸಮಾಜದ ಜತೆಗೆ ಬೆರೆಯಲು ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೂ ಸಮಾಜಮುಖೀಯಾಗಿ ಬೆಳೆಯಲು ಪ್ರೇರಣೆ ನೀಡುತ್ತಿದೆ.

ಗ್ರಾಮ ದತ್ತು ಸ್ವೀಕಾರ
ಕಳೆದ ಶೈಕ್ಷಣಿಕ ಸಾಲಿನಲ್ಲಿ ಬೆಳಂದೂರು ಗ್ರಾಮವನ್ನು ಕಾಲೇಜಿನ ಎನ್ನೆಸೆಸ್‌ ಘಟಕವು ಹಸುರೀಕರಣಕ್ಕಾಗಿ ದತ್ತು ತೆಗೆದುಕೊಂಡಿದೆ. ಇದರನ್ವಯ ಪ್ರತೀ ಮನೆ ಆವರಣದಲ್ಲೂ ವಾಣಿಜ್ಯ ಬೆಳೆಗಳಾದ ಅಡಿಕೆ, ನೇಂದ್ರ ಬಾಳೆ ಕಂದು, ಕೊಕ್ಕೋ, ತೆಂಗು, ಕಸಿ ಗೇರು ಗಿಡಗಳನ್ನು ಎನ್ನೆಸೆಸ್‌ ಘಟಕದ ವಿದ್ಯಾರ್ಥಿಗಳೇ ನೆಟ್ಟು ಅದರ ಸಂಪೂರ್ಣ ಪೋಷಣೆಯ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ವಾಣಿಜ್ಯ ಬೆಳೆಗಳ ಗಿಡ ಕೊಡುವುದರಿಂದ ಮನೆಯವರೂ ಗಿಡಗಳ ಕುರಿತು ನಿಗಾ ವಹಿ ಸುತ್ತಾರೆ ಎಂಬ ದೃಷ್ಟಿಯಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಎನ್ನೆಸೆಸ್‌ ಘಟಕದ ಯೋಜನಾಧಿಕಾರಿ ವೆಂಕಟೇಶ್‌ ಪ್ರಸನ್ನ ಹೇಳುತ್ತಾರೆ.

ಇದರೊಂದಿಗೆ ಪ್ರತೀ ಮನೆಯಲ್ಲೂ ಶುಚಿತ್ವ, ಜಲ ಸಂರಕ್ಷಣೆ, ಹಸುರೀಕರಣದ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಗಿಡ ನೆಡುವ ಕಾರ್ಯವನ್ನು ನಡೆಸಲಾಗುತ್ತಿದೆ.

ಕಲಿಕೆಯೊಂದಿಗೆ ಗಳಿಕೆ
ಕಳೆದ ವರ್ಷದಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಹಸುರೀಕರಣದ ಜತೆಗೆ ಕಲಿಕೆಯೊಂದಿಗೆ ಗಳಿಕೆ ಎಂಬ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿರುವ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಅನುಭವ ಹೊಂದುವಂತಾಗುತ್ತಾರೆ. ಇದಕ್ಕಾಗಿ ಎರಡು ಸಹಕಾರಿ ಸಂಘಗಳಲ್ಲಿ, ಮೊಬೈಲ್‌ ರಿಪೇರಿ ಸಂಸ್ಥೆಗಳಲ್ಲೂ ಮಾತುಕತೆ ನಡೆಸಲಾಗಿದೆ. ವಿದ್ಯಾರ್ಥಿನಿಯರಿಗೆ ಬ್ಯೂಟಿಷಿಯನ್‌ ತರಬೇತಿ ಕೇಂದ್ರದಲ್ಲೂ ಕಲಿಕೆಯೊಂದಿಗೆ ಗಳಿಕೆ ಕಲ್ಪನೆಯಡಿ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಕಾದ ಎಲ್ಲಾ ಪೂರಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳ ಹಾಗೂ ಪ್ರಾಚಾರ್ಯರ, ಉಪನ್ಯಾಸಕರ ಯೋಜನೆಗಳಿಗೆ ತಕ್ಕಂತೆ ಕಾಲೇಜು ಅಭಿವೃದ್ಧಿ ಸಮಿತಿಯೂ ಸಹಕಾರ ನೀಡುತ್ತಿದೆ ಎಂದು ಹೇಳುತ್ತಾರೆ ಕಾಲೇಜಿನ ಪ್ರಾಚಾರ್ಯ ಪ್ರೊ| ಕೆ. ಪದ್ಮನಾಭ ಅವರು.

ಅಡಿಕೆ ಸಸಿಗಳು ಸಿದ್ಧ
ಈ ಬಾರಿ ಕಾಲೇಜಿನಲ್ಲಿ ಅಡಿಕೆ ಸಸಿಗಳ ನರ್ಸರಿ ಮಾಡಲಾಗಿದೆ. ಉತ್ತಮ ತಳಿಯ ಸಾವಿರಕ್ಕೂ ಮಿಕ್ಕಿ ಅಡಿಕೆ ಗಿಡಗಳು ಲಭ್ಯವಿವೆ. ಕಾಲೇಜಿನಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಬೇಕಾದ ತರಕಾರಿಗಳನ್ನು ಆವರಣದ ಕೈತೋಟದಲ್ಲಿಯೇ ಬೆಳೆಸ ಲಾಗಿದೆ. ಬಸಳೆ, ಬೆಂಡೆ, ಸೌತೆ, ಬದನೆ, ತೊಂಡೆಕಾಯಿ, ಅಲಸಂಡೆ ಕೃಷಿ ಸಮೃದ್ಧವಾಗಿ ಬೆಳೆದಿದ್ದು ಸ್ವಾವಲಂಬನೆಯತ್ತ ಹೆಜ್ಜೆ ಇಡುತ್ತಿದೆ. ಕಾಲೇಜಿನಲ್ಲಿ ಅಡಿಕೆ ಸಸಿಗಳ ನರ್ಸರಿ ಮಾಡಿರುವುದು. 

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.