ಅರ್ಜುನ್‌ ವೆಡ್ಸ್‌ ಅಮೃತ ಸಿನೆಮಾ ಬಿಡುಗಡೆ

Team Udayavani, Jul 22, 2017, 5:45 AM IST

2107mlr24-arjuna-weds-amrut.gif

ಮಂಗಳೂರು: ಬೆದ್ರ 9 ಕ್ರಿಯೇಷನ್ಸ್‌ ಲಾಂಛನದಲ್ಲಿ ತಯಾರಾದ ಪತ್ರಕರ್ತ ರಘು ಶೆಟ್ಟಿ ನಿರ್ದೇ ಶನದ “ಅರ್ಜುನ್‌ ವೆಡ್ಸ್‌ ಅಮೃತ ಸಿನೆಮಾದ ಬಿಡುಗಡೆ ಸಮಾರಂಭವು ಪಾಂಡೇಶ್ವರದ ಫಿಜ್ಜಾ ಮಾಲ್‌ನಲ್ಲಿರುವ ಪಿವಿಆರ್‌ ಥಿಯೇಟರ್‌ನಲ್ಲಿ ಶುಕ್ರವಾರ ಜರಗಿತು. 

ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಕವಿತಾ ಸನಿಲ್‌,ಸೀಮಿತ ಮಾರುಕಟ್ಟೆಯ ತುಳುಚಿತ್ರರಂಗದಲ್ಲಿ ಈಗ ಹಿಂದೆಂದಿಗಿಂತಲೂ ಹೆಚ್ಚು ಚಿತ್ರಗಳು ತಯಾರಾಗುತ್ತಿವೆ. ತುಳು
ಭಾಷಾಭಿಮಾನದಿಂದ ತಯಾರಾಗು ತ್ತಿರುವ ಚಿತ್ರಗಳನ್ನು ಪ್ರೇಕ್ಷಕರು ಸಿನೆಮಾ ನೋಡುವ ಮೂಲಕ ಪೊÅàತ್ಸಾಹಿಸ ಬೇಕು. ಸಮಾಜಕ್ಕೆ ಒಳ್ಳೆಯ ಸಂದೇಶ ಭರಿತ ಚಿತ್ರಗಳನ್ನು ನೀಡಿದಾಗ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಈಗ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧಗೊಂಡಿದೆ. ಹೀಗಾಗಿ ಕನಿಷ್ಠ ಮೂರು ಅಥವಾ ನಾಲ್ಕು ವಾರಗಳ ಅಂತರವಿದ್ದರೆ ನಿರ್ಮಾಪಕರಿಗೆ ಅನುಕೂಲವಾಗುತ್ತದೆ. ಇದರಿಂದ ತುಳು ಚಿತ್ರೋದ್ಯಮಕ್ಕೂ ಲಾಭ ಎಂದು ಹೇಳಿದರು.
 
ಚಿತ್ರದ ನಿರ್ದೇಶಕ ರಘು ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಅರ್ಜುನ್‌ ವೆಡ್ಸ್‌ ಅಮೃತ ರೋಮ್ಯಾಂಟಿಕ್‌ ಲವ್‌ ಸ್ಟೋರಿಯಾಗಿದ್ದು, ಆ್ಯಕ್ಷನ್‌ ಇಲ್ಲದ ಲವ್‌, ಸೆಂಟಿಮೆಂಟ್‌ ಹಾಗೂ ಹಾಸ್ಯ ಮಿಶ್ರಿತದಿಂದ ಕೂಡಿದೆ ಎಂದರು. 

ಈ ಸಂದರ್ಭದಲ್ಲಿ ತುಳು ಸಿನೆಮಾರಂಗದ ಹಿರಿಯ ಸಾಧಕರಾದ ಡಾ| ರಿಚರ್ಡ್‌ ಕ್ಯಾಸ್ಟಲಿನೋ, ಡಾ| ಸಂಜೀವ ದಂಡಕೇರಿ ಹಾಗೂ ರಂಗನಟ, ಸಂಘಟಕ ವಿ.ಜಿ. ಪಾಲ್‌ರನ್ನು ಗೌರವಿಸ ಲಾಯಿತು. ಸಮಾರಂಭದಲ್ಲಿ ತುಳು ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಟಿ.ಎ. ಶ್ರೀನಿವಾಸ್‌, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಜಯಕುಮಾರ್‌ ಕೊಡಿಯಾಲ್‌ಬೆ„ಲ್‌, ಮೇಗಿನ ಮಾಲಾಡಿ ಬಾಲಕೃಷ್ಣ ಶೆಟ್ಟಿ , ವೀರೇಂದ್ರ ಶೆಟ್ಟಿ ಕಾವೂರು, ಪ್ರಕಾಶ್‌ ಪಾಂಡೇಶ್ವರ್‌, ನಿರ್ಮಾಪಕರಾದ ಕಿರಣ್‌ ಬಿ.ಎನ್‌., ದಿನೇಶ್‌ ಮಲ್ಯ, ವೆಂಕಟೇಶ್‌ ಕಾಮತ್‌,ಅಕ್ಷತಾ ಕಾಮತ್‌, ನಟ ಅನೂಪ್‌ ಸಾಗರ್‌, ನಟಿ ಆರಾಧ್ಯ ಶೆಟ್ಟಿ ಉಪಸ್ಥಿತರಿದ್ದರು. ಆರ್‌.ಜೆ. ಅನುರಾಗ್‌ ಕಾರ್ಯಕ್ರಮ ನಿರ್ವಹಿಸಿದರು.

ಅರ್ಜುನ್‌ ವೆಡ್ಸ್‌ ಅಮೃತ ಸಿನೆಮಾವು ಮಂಗಳೂರಿನಲ್ಲಿ ಜ್ಯೋತಿ, ಪಿವಿಆರ್‌, ಬಿಗ್‌ ಸಿನೆಮಾಸ್‌, ಸಿನಿಪೊಲಿಸ್‌, ಉಡುಪಿಯಲ್ಲಿ ಆಶೀರ್ವಾದ್‌, ಮೂಡಬಿದ್ರೆಯಲ್ಲಿ ಅಮರ ಶ್ರೀ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್‌, ಮಣಿಪಾಲದಲ್ಲಿ ಐನಾಕ್ಸ್‌, ಬೆಳ್ತಂಗಡಿಯಲ್ಲಿ ಭಾರತ್‌, ಸುಳ್ಯದಲ್ಲಿ ಸಂತೋಷ್‌, ಸುರತ್ಕಲ್‌ನಲ್ಲಿ ನಟರಾಜ್‌ ಸಿನೆಮಾ ಮಂದಿರಗಳಲ್ಲಿ ಬಿಡುಗಡೆ ಗೊಂಡಿದ್ದು, ಎಲ್ಲ ಟಾಕೀಸ್‌ಗಳಲ್ಲೂ ಹೌಸ್‌ಫುಲ್‌ ಪ್ರದರ್ಶನದಿಂದ ಜನ ಮೆಚ್ಚುಗೆ ಪಡೆದಿದೆ. 

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.