ಅರ್ಪಾಜೆ ಕೆರೆ: ರಸ್ತೆ  ಬಂದ್‌

Team Udayavani, Jul 22, 2018, 11:50 AM IST

22-july-8.jpg

‌ಕಡಬ: ಕೋಡಿಂಬಾಳ ಗ್ರಾಮದ ಅರ್ಪಾಜೆಯ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ರಸ್ತೆ ನಿರ್ಮಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶನಿವಾರ ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಅವರ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಲಾಯಿತು.

ಅರ್ಪಾಜೆಯಲ್ಲಿ ಸರ್ವೆ ನಂ. 33/3ರಲ್ಲಿ 0.62 ಎಕ್ರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ನೀರು ಸಂಗ್ರಹವಾಗದಂತೆ ತೋಡು ನಿರ್ಮಿಸಲಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಗಡಿ ಗುರುತು ಮಾಡಿ ಕೆರೆಯನ್ನು ಸಂರಕ್ಷಿಸಲು ಮುಂದಾಗಿರುವ ಕಂದಾಯ ಇಲಾಖೆಯ ಅಧಿಕಾರಿಗಳು ಭೂಮಾಪನ ಇಲಾಖೆಯ ಮೂಲಕ ಕೆರೆಯನ್ನು ಅಳತೆ ಮಾಡಿಸಿದರು. ಅಳತೆ ಮಾಡಿದ ವೇಳೆ ಅಕ್ರಮವಾಗಿ ನಿರ್ಮಿಸಲಾಗಿದ್ದ ರಸ್ತೆ ಕೆರೆಯ ಮೂಲಕ ಹಾದು ಹೋಗಿರುವುದು ಕಂಡು ಬಂದಿದೆ. ಆ ರಸ್ತೆಯನ್ನು ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಬಂದ್‌ ಮಾಡಿಸಿದರು.

ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಸದಸ್ಯರಾದ ನಾರಾಯಣ ಪೂಜಾರಿ, ಎ.ಎಸ್‌. ಶರೀಫ್, ಆದಂ ಕುಂಡೋಳಿ, ಪ್ರಮುಖರಾದ ಶೇಖರ ರೈ ಅರ್ಪಾಜೆ, ಪ್ರಕಾಶ್‌ ಎನ್‌.ಕೆ., ಅಶೋಕ್‌ ಕುಮಾರ್‌ಪಿ., ಸರ್ವೆಯರ್‌ ವೆಂಕಟ್ರಮಣ, ಗ್ರಾಮ ಸಹಾಯಕ ವಿಜಯ ಕುಮಾರ್‌, ರಮೇಶ್‌ ರಾವ್‌ ಹೊಸಮನೆ, ಕಡಬ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಸಂತೋಷ್‌, ಸರ್ವೆ ಇಲಾಖೆಯ ಸಿಬಂದಿ ಹರೀಶ್‌ ಉಪಸ್ಥಿತರಿದ್ದರು.

ಒತ್ತುವರಿ ಸ್ಪಷ್ಟ
ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಅರ್ಪಾಜೆ ಕೆರೆ ಒತ್ತುವರಿ ಆಗಿರುವ ಬಗ್ಗೆ ದೂರು ಬಂದಿತ್ತು. ಆ ಹಿನ್ನಲೆಯಲ್ಲಿ ಸರ್ವೆ ನಡೆಸಿದಾಗ ಕೆರೆಯ ಜಾಗದಲ್ಲಿ ರಸ್ತೆ ನಿರ್ಮಿಸಿರುವುದು ಸ್ಪಷ್ಟಗೊಂಡಿದೆ. ಆದರೆ ಬೇರೆಡೆ ಅತಿಕ್ರಮಣವಾಗಿಲ್ಲ. ಅಕ್ರಮವಾಗಿ ನಿರ್ಮಿಸಲಾಗಿರುವ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಮತ್ತೆ ರಸ್ತೆ ನಿರ್ಮಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇಲ್ಲಿ ಸರಕಾರಿ ಕೆರೆ ಎಂದು ಕೆರೆಯ ವಿಸ್ತೀರ್ಣ ಸಹಿತ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.
– ಕೊರಗಪ್ಪ ಹೆಗ್ಡೆ, ಕಂದಾಯ ನಿರೀಕ್ಷಕರು, ಕಡಬ

ಟಾಪ್ ನ್ಯೂಸ್

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

6

Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.