ನೀರು ಹರಿಯಲು ವ್ಯವಸ್ಥೆ; ಕುಸಿತ ಭೀತಿ ದೂರ

Team Udayavani, Jun 28, 2018, 10:41 AM IST

malalim2.png

ವಾಮಂಜೂರು: ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ ಸಂಭವಿಸಿರುವ ಸ್ಥಳಕ್ಕೆ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಿದ್ದು, ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಲಾಗಿದೆ. ಕುಸಿತ ಪ್ರದೇಶಕ್ಕೆ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳು ಭೇಟಿ ನೀಡಿ ಕಾಮಗಾರಿ ನಡೆಸಿಕೊಟ್ಟಿದ್ದಾರೆ.

ಕೆತ್ತಿಕಲ್‌ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆಯಲ್ಲಿ ಬಿರುಕು ಹಾಗೂ ಅದರ ಬದಿಯಲ್ಲಿ ಆಳವಾದ ತೂತು ಕಂಡುಬಂದಿದ್ದರಿಂದ ಈ ಭಾಗ ಕುಸಿಯುವ ಭೀತಿ ವ್ಯಕ್ತವಾಗಿತ್ತು. ಸುಮಾರು 20 ವರ್ಷಗಳ ಮುಂಚೆ ಈ ಭಾಗದಲ್ಲಿ ಕುಸಿತ ಕಂಡುಬಂದಿದ್ದು, ಸ್ವಲ್ಪ ದಿನಗಳ ಕಾಲ ಸಂಚಾರ ಸ್ಥಗಿತ ಗೊಂಡಿತ್ತು. ಇದೀಗ ಮತ್ತೆ ಕುಸಿ ಯುವ ಭೀತಿ ವ್ಯಕ್ತವಾಗಿದ್ದರಿಂದ ಈ ರಸ್ತೆಯಾಗಿ ಸಂಚರಿಸುವ ವಾಹನಗಳಿಗೆ ಅಪಾಯ ಒದಗುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಎಇಇ ಆಗಿರುವ ಯಶವಂತ್‌ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ನೀರು ಹರಿಯಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಆಳವಾದ ತೂತನ್ನು ಮುಚ್ಚಲಾಗಿದೆ.

ಕೆತ್ತಿಕಲ್‌ ಗುಡ್ಡ ಭಾಗದಿಂದ ಮಳೆಯ ನೀರು ರಸ್ತೆಯ ಒಳಗಿನಿಂದ ಹರಿಯುತ್ತಿದ್ದ ಕಾರಣ ಆಳವಾದ ತೂತು ಕಾಣಿಸಲು ಕಾರಣವಾಗಿತ್ತು. ಇದಕ್ಕಾಗಿ ರಸ್ತೆಯ ನೀರು ಹರಿಯುವ ಭಾಗದಲ್ಲಿ ಜೆಸಿಬಿಯಿಂದ ತೋಡು ಮಾಡಿ ಮಣ್ಣಿನಡಿಯಲ್ಲಿ ಹುದುಗಿಹೋಗಿದ್ದ ಮೋರಿಯನ್ನು ತೆರೆದು ಆ ಮೂಲಕ ನೀರು ಹರಿಯಲು ವ್ಯವಸ್ಥೆ ಮಾಡ ಲಾಗಿದೆ. ಇದೀಗ ಕಾಡನೀರು ಮೋರಿಯ ಮೂಲಕ ರಸ್ತೆಯ ಒಳಗಿನಿಂದಲೇ ಹಾದು ಹೋಗಿ ಗುಡ್ಡದಿಂದ ಇಳಿಯುತ್ತಿದೆ.

ಯಾವುದೇ ಆತಂಕವಿಲ್ಲ
ಕೆತ್ತಿಕಲ್‌ ಪ್ರದೇಶದಲ್ಲಿ ನೀರು ಹರಿಯುವ ಮೋರಿ ಮುಚ್ಚಿಹೋಗಿದ್ದರಿಂದ ಈ ಸ್ಥಿತಿ ಉಂಟಾಗಿದೆ. ನೀರು ಹರಿ ಯಲು ತೋಡನ್ನು ಬಿಡಿಸಿ ಕೊಟ್ಟ ಕಾರಣ ಆತಂಕವಿಲ್ಲ. ವಾಹನಗಳು ಎಂದಿನಂತೆ ಸಾಗಬಹುದು. ಅಲ್ಲದೆ ಈ ಭಾಗದಲ್ಲಿ ಕುಸಿಯುವ ಆತಂಕವೂ ಇಲ್ಲ. ಆದ್ದರಿಂದ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ.
 
ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

1-kambala

Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.