ಬೆಳ್ತಂಗಡಿ: ಏಳು ಕಳ್ಳತನ ಪ್ರಕರಣಗಳ ಮೂವರು ಆರೋಪಿಗಳ ಬಂಧನ, 5.50 ಲಕ್ಷ ರೂ. ಸೊತ್ತು ವಶ
Team Udayavani, Feb 22, 2020, 3:26 PM IST
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯ ವೇಣೂರು ಮತ್ತು ಧರ್ಮಸ್ಥಳ, ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 7 ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಹಿತ ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಮುಂಡಾಜೆ ನಿವಾಸಿ ಸತೀಶ (33), ಪುತ್ತೂರು ಆರ್ಯಾಪು ನಿವಾಸಿ ರವಿ (29), ಮಂಗಳೂರು ಕುರುಪು ನಿವಾಸಿ ಹರೀಶ್ ಪೂಜಾರಿ (29) ಎಂಬುವವರನ್ನು ಬಂಧಿಸಲಾಗಿದೆ.
ಒಂದು ಮಾರುತಿ 800, ಎರಡು ಬೈಕ್, ಚಿನ್ನಾಭರಣ, 5 ಮೊಬೈಲ್, 1 ಲ್ಯಾಪ್ ಟಾಪ್ ವಶಪಡಿಸಿ ಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 5,50,000 ರೂ. ಎಂದು ಅಂದಾಜಿಸಲಾಗಿದೆ.
ಒಟ್ಟು ಏಳು ಪ್ರಕಾರಗಳ ವಿಚಾರವಾಗಿ ಧರ್ಮಸ್ಥಳ, ವೇಣೂರು, ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ವೃತ್ತ ನಿರೀಕ್ಷಕ ಸಂದೇಶಸ್ ಪಿ.ಜಿ. ತಂಡ ಆರೋಪಿಗಳ ಹೆಡೆಮುರಿ ಕಟ್ಟಿದೆ.
ಆರೋಪಿಗಳ ಬಂಧನದಿಂದ ಬಹುದೊಡ್ಡ ಪ್ರಕರಣದ ಜಾಲವೊಂದು ಬೆಳಕಿಗೆ ಬಂದಿದೆ.
ಬಂಟ್ವಾಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ವೆಲೈಂಟೈನ್ ಡಿ ಸೋಜಾ, ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ., ಇತರ ಸಿಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.