ಕುಖ್ಯಾತ ಗಾಂಜಾ ಮಾರಾಟ ಆರೋಪಿ ಬಂಧನ
Team Udayavani, Jul 9, 2019, 9:19 AM IST
ಮಂಗಳೂರು: ಗಾಂಜಾ ಮಾರಾಟ ಆರೋಪದಲ್ಲಿ ಮೂಲತಃ ಬಂದರ್ ಅನ್ಸಾರಿ ಕ್ರಾಸ್‌ರೋಡ್ ನಿವಾಸಿ, ಹಾಲಿ ಅಡೂರು ನೂಯಿ ಪ್ರದೇಶದ ಕಂಡಿ ರಹೀಂ ಯಾನೆ ಗೂಡ್ಸ್ ರಹೀಂ (44) ಎಂಬಾತನನ್ನು ಮಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸೋಮವಾರ ಪಾಂಡೇಶ್ವರದ ಖಾಸಗಿ ಕಾಲೇಜು ಸಮೀಪದ ಗ್ಯಾರೇಜೊಂದರ ಬಳಿ ಆರೋಪಿಯು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೆ0 ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಒಂದು 1,100 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಆ್ಯಕ್ಟಿವಾ ಹೋಂಡಾ, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕದ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಈಗಾಗಲೇ ಮಂಗ ಳೂರು ನಗರದ ವಿವಿಧ ಠಾಣೆಗಳಲ್ಲಿ 11 ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.
ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನ, ಡಿಸಿಪಿ ಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೆ„ಂ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ನಡೆಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.