ಅರ್ಥಕ್ರಾಂತಿಯಿಂದ ಪಾರದರ್ಶಕತೆ: ಅನಿಲ್‌ ಬೋಕಿಲ್‌

Team Udayavani, Mar 22, 2017, 11:16 AM IST

22-KARAVALI-2.jpg

ಮಂಗಳೂರು: ಅರ್ಥಕ್ರಾಂತಿ ಪೂರ್ತಿಯಾಗಿ ಜಾರಿಗೊಂಡರೆ ದೇಶಾದ್ಯಂತ ಪಾರದರ್ಶಕತೆ ಹೆಚ್ಚಲಿದೆ. ತೆರಿಗೆ ಇಲ್ಲದ ಕಾರಣ ಕಾಳಧನದ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಪುಣೆಯ ಅರ್ಥಕ್ರಾಂತಿ ಪ್ರತಿಷ್ಠಾನದ ಮುಖ್ಯಸ್ಥ ಅನಿಲ್‌ ಬೋಕಿಲ್‌ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳಧಿವಾರ ಮಾತನಾಡಿದ ಅವರು, ಅರ್ಥಕ್ರಾಂತಿ ಯೋಜನೆಯನ್ನು ಪ್ರಾಯೋಗಿಕವಾಗಿ ಅನ್ವಧಿಯಿಸುವಂತೆ ಈಗಾಗಲೇ ತಂತ್ರಜ್ಞರ ನೆರವಿನಲ್ಲಿ ಯೋಜನೆ ರೂಪಿಸಲಾಗಿದೆ. ಇದು ಭಾರತದಲ್ಲಿ ಜಾರಿಯಾದರೆ 18 ತಿಂಗಳಲ್ಲೇ ಯಶಸ್ವಿಯಾಗಬಹುದು ಎಂದರು.

ಬ್ಯಾಂಕ್‌ ವಹಿವಾಟು ತೆರಿಗೆ ಉತ್ತಮ
ದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ತೆರಿಗೆಗಳಿಗಿಂತ ಜಿಎಸ್‌ಟಿ ಉತ್ತಮ ವ್ಯವಸ್ಥೆ. ಆದರೆ ಅರ್ಥಕ್ರಾಂತಿ ಪ್ರಸ್ತಾವದಲ್ಲಿರುವ ಬ್ಯಾಂಕ್‌ ವಹಿವಾಟು ತೆರಿಗೆ ಇದಕ್ಕಿಂತಲೂ ಪರಿಣಾಮಕಾರಿಯಾದ ಪರ್ಯಾಯವಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಅವರು ತಿಳಿಸಿದರು.

ಸರಕಾರ ಜಾರಿಗೊಳಿಸಬಹುದೆಂಬ ನಿರೀಕ್ಷೆ
ಅರ್ಥಕ್ರಾಂತಿ ತರುವ ಪ್ರಯತ್ನವನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದೇವೆ. ಹಿಂದಿನ ಯುಪಿಎ ಸರಕಾರಕ್ಕೆ ಪೂರ್ಣ ಬಹುಮತ ಇರದ ಕಾರಣ ಅವರಿಗೆ ನಮ್ಮ ಪ್ರಸ್ತಾವನೆ ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂದ ಅವರು, ನಮ್ಮದು ರಾಜಕೀಯರಹಿತ ಹಾಗೂ ಕೇವಲ ತಾಂತ್ರಿಕ ಸಲಹಾ ಗುಂಪು. ಯಾವುದೇ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿಲ್ಲ. ಕೇಂದ್ರ ಸರಕಾರಕ್ಕೆ ನಮ್ಮ ಪ್ರಸ್ತಾವದ ಪೂರ್ಣ ಪ್ರತಿಯನ್ನು ಈಗಾಗಲೇ ನೀಡಲಾಗಿದೆ. ನೋಟು ರದ್ದತಿಯು ನಮ್ಮ ಪ್ರಸ್ತಾವದ ಒಂದು ಸಣ್ಣ ಅಂಶವಾಗಿದೆ. ಈಗಿನ ಸರಕಾರಕ್ಕೆ ಬಹುಮತ ಇರುವ ಕಾರಣ ಪ್ರಸ್ತಾವದಲ್ಲಿರುವ ಅಂಶಧಿಗಳನ್ನು ಜಾರಿಗೆ ತರಬಹುದು ಎಂದು ನಿರೀಕ್ಷೆ ಹೊಂದಿದ್ದೇವೆ ಎಂದು ಅವರು ವಿವರಿಸಿದರು.

ಮಾನವ ಹಕ್ಕು ಹೋರಾಟಗಾರ ಡಾ| ರವೀಂದ್ರನಾಥ ಶ್ಯಾನುಭೋಗ್‌, ಅರ್ಥಕ್ರಾಂತಿ ಪ್ರತಿಷ್ಠಾನದ ಪ್ರಶಾಂತ್‌, ಮಂಗಳೂರಿನ ನ್ಯಾಯವಾದಿ ಜಿನೇಂದ್ರ ಕುಮಾರ್‌, ಮುಕೇಶ್‌ ಹೆಗ್ಡೆ, ಪ್ರಸಾದ್‌ ಅಡಪ ಉಪಸ್ಥಿತರಿದ್ದರು.

ಅರ್ಥಕ್ರಾಂತಿಯ ಉದ್ದೇಶ
ತೆರಿಗೆ ರಹಿತ ಹಾಗೂ ಕಡಿಮೆ ನಗದು ಆರ್ಥಿಕತೆ ಜಾರಿ ಅರ್ಥಕ್ರಾಂತಿಯ ಪ್ರಮುಖ ಉದ್ದೇಶ. ಬ್ಯಾಂಕ್‌ ವಹಿವಾಟಿನಲ್ಲಿ ಹಣ ಸ್ವೀಕರಿಸುವವರ ಖಾತೆಗೆ ತೆರಿಗೆ ಕಡಿತಗೊಳಿಸುವುದು ಮಾತ್ರವೇ ತೆರಿಗೆ ಆಗಿ ಇರಬೇಕು. ಗರಿಷ್ಠ ಮುಖಬೆಲೆಯ ನೋಟು 50 ರೂ. ಆಗಿರಬೇಕು. ಅದಕ್ಕಿಂತ ದೊಡ್ಡ ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ರದ್ದು ಮಾಡಬೇಕು. ಆಮದಾಗುವ ವಸ್ತುಧಿಗಳಿಗೆ ಮಾತ್ರವೇ ತೆರಿಗೆ ವಿಧಿಸಬೇಕು. ರಫ್ತಾಗುವ ವಸ್ತುಗಳಿಗೆ ತೆರಿಗೆ ರದ್ದಾಗಬೇಕು. ಇದರಿಂದ ಸಹಜವಾಗಿ ನಗದುರಹಿತ ವಹಿವಾಟು ಹೆಚ್ಚುತ್ತದೆ ಎನ್ನುವುದೇ ಅರ್ಥಕ್ರಾಂತಿಯ ಉದ್ದೇಶ ಎಂದು ಅನಿಲ್‌ ಬೋಕಿಲ್‌ ತಿಳಿಸಿದರು.

ಟಾಪ್ ನ್ಯೂಸ್

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.