ಕಲಾವಿದನಿಗೆ ಉತ್ತಮ ವೇದಿಕೆ ಅವಶ್ಯ: ಫರ್ಹಾನ್ ಅಖ್ತರ್
Team Udayavani, Jan 15, 2018, 9:35 AM IST
ಮಂಗಳೂರು: ಒಬ್ಬ ಕಲಾವಿದ, ಹಾಡುಗಾರನಿಗೆ ಉತ್ತಮ ವೇದಿಕೆ ದೊರೆಯುವುದು ಬಹಳ ಮುಖ್ಯ. ಅದನ್ನು ಸರಿಯಾಗಿ ಬಳಸಿ ಕೊಳ್ಳುವುದು ಒಬ್ಬ ಉದಯೋನ್ಮುಖ ನಟ, ಹಾಡುಗಾರನ ಹೊಣೆ ಎಂದು ನಟ, ಹಾಡುಗಾರ, ನಿರ್ದೇಶಕ ಫರ್ಹಾನ್ ಅಖ್ತರ್ ಹೇಳಿದರು.
ಇಂಪೀರಿಯಲ್ ಬ್ಲೂ ಸೂಪರ್ಹಿಟ್ ನೈಟ್ಸ್ ಸೀಸನ್ 4ರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ನಟನೆ, ಸಿನೆಮಾ ಮತ್ತು ಸಂಗೀತ ವಿಭಿನ್ನ ಅನುಭವವನ್ನು ನೀಡುತ್ತದೆ. ಒಂದನ್ನು ಬಿಟ್ಟು ಇನ್ನೊಂದನ್ನು ಆಯ್ಕೆ ಮಾಡುವಂತಿಲ್ಲ. ಎಲ್ಲವನ್ನೂ ಸಮಾನವಾಗಿ ಸರಿತೂಗಿಸಿಕೊಂಡು ಹೋಗುವುದು ನನಗೆ ಖುಷಿ ನೀಡುತ್ತದೆ. ಜೀವನದಲ್ಲಿ ಉತ್ತಮ ಅನುಭವಗಳನ್ನು ಪಡೆದುಕೊಳ್ಳುವುದು ನಮ್ಮನ್ನು ಸರಿ ದಾರಿಯಲ್ಲಿ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ಅಖ್ತರ್ ತಿಳಿಸಿದರು.
ಮೂರು ವರ್ಷಗಳ ಹಿಂದೆ ಮಣಿಪಾಲ ವಿಶ್ವವಿದ್ಯಾನಿಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದೆ. ಮಂಗಳೂರಿಗೆ ಬರಲು ಬಹಳ ಸಂತೋಷವಾಗುತ್ತದೆ. ಪ್ರಸ್ತುತ ಗೋಲ್ಡ್ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದೇನೆ. ಆ ಕೆಲಸ ಹಾಗೂ ಹಾಡುಗಾರಿಕೆಯಲ್ಲಿ ನಾನು ಬ್ಯುಸಿಯಾಗಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.