Financial Helping Scheme 1,828 ಮಂದಿಗೆ 4 ಕೋ.ರೂ. ನೆರವು: ಪ್ರಕಾಶ್‌ ಶೆಟ್ಟಿ

ಡಿ. 25ರಂದು ಆಶಾ ಪ್ರಕಾಶ್‌ ಶೆಟ್ಟಿ ಸಹಾಯ ಹಸ್ತ ಪ್ರದಾನ

Team Udayavani, Dec 23, 2023, 12:37 AM IST

Financial Helping Scheme 1,828 ಮಂದಿಗೆ 4 ಕೋ.ರೂ. ನೆರವು: ಪ್ರಕಾಶ್‌ ಶೆಟ್ಟಿ

ಮಂಗಳೂರು: ಆಶಾ ಪ್ರಕಾಶ್‌ ಶೆಟ್ಟಿ ಸಹಾಯ ಹಸ್ತ ಯೋಜನೆಯಲ್ಲಿ ಡಿ. 25ರಂದು ಸಂಜೆ 1,828 ಮಂದಿಗೆ 4 ಕೋಟಿ ರೂ. ಮೊತ್ತದ ನೆರವು ವಿತರಿಸಲಾಗುವುದು ಎಂದು ಎಂಆರ್‌ಜಿ ಸಮೂಹ ಸಂಸ್ಥೆಗಳ ಚೇರ್ಮನ್‌ ಕೆ. ಪ್ರಕಾಶ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜ. 25ರಂದು ಸಂಜೆ 3.30ಕ್ಕೆ ಮಂಗಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಫಲಾನುಭವಿಗಳ ಪ್ರಯಾಣದ ವ್ಯವಸ್ಥೆಯನ್ನೂ ಸಂಸ್ಥೆಯಿಂದಲೇ ಕಲ್ಪಿಸಲಾಗುವುದು. ಚಲನಚಿತ್ರ ನಟ, ನಿರ್ದೇಶಕ ರಮೇಶ್‌ ಅರವಿಂದ್‌, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಎಂಆರ್‌ಜಿ ಗ್ರೂಪ್‌ನ ಚೇರ್ಮನ್‌ ಕೆ. ಪ್ರಕಾಶ್‌ ಶೆಟ್ಟಿ, ಆಡಳಿತ ನಿರ್ದೇಶಕ ಗೌರವ್‌ ಪಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಆಯ್ಕೆಗೆ ಎಸ್‌ಒಪಿ
ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿ ಮಾರ್ಗದರ್ಶಿ ಸೂತ್ರ (ಎಸ್‌ಒಪಿ) ಅನುಸರಿಸಿದ್ದೇವೆ. ಅರ್ಹರು ವಂಚಿತರಾಗ ಬಾರದು ಎಂಬ ಕಾರಣಕ್ಕೆ ಸ್ಥಳೀಯ ಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಅವರ ಆರ್ಥಿಕ ಸ್ಥಿತಿಗತಿ ಮತ್ತು ಅವರು
ಎದುರಿಸುತ್ತಿರುವ ಪರಿಸ್ಥಿತಿಯ ಪ್ರತ್ಯಕ್ಷ ಮಾಹಿತಿ ಪಡೆದುಕೊಳ್ಳಲಾಗಿದೆ. ಫಲಾನುಭವಿಗಳನ್ನು ಕರೆದುಕೊಂಡು ಬರುವ ಹೊಣೆಗಾರಿಕೆಯನ್ನು ಆಯಾ ಪ್ರದೇಶದ ಸಂಘ-ಸಂಸ್ಥೆಗಳಿಗೆ ನೀಡಲಾಗಿದೆ. ಡಿ. 25ರ ಸಮಾರಂಭದಲ್ಲಿ 25 ಕೌಂಟರ್‌ ತೆರೆಯಲಾಗುತ್ತದೆ. ಅಲ್ಲಿ ಫಲಾನುಭವಿಗಳು ತಮ್ಮ ಹೆಸರು ಹೇಳಿ ಮತ್ತು ಈಗಾಗಲೇ ವಿತರಣೆ ಮಾಡಿ ರುವ ಟೋಕನ್‌ಗಳನ್ನು ತೋರಿಸಿ ಚೆಕ್‌ ಪಡೆಯಬಹುದು ಎಂದು ವಿವರಿಸಿದರು.

ವೈಯಕ್ತಿಕವಾಗಿ ಕನಿಷ್ಠ 10 ಸಾವಿರ ರೂ.ಗಳಿಂದ ಗರಿಷ್ಠ 1 ಲಕ್ಷ ರೂ., ಸಂಘ-ಸಂಸ್ಥೆಗಳಿಗೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ. ವಿತರಿಸಲಾಗುತ್ತಿದೆ. ಮಾನಸಿಕ, ಅಂಗವೈಕಲ್ಯ, ಕ್ಯಾನ್ಸರ್‌ ನಂತಹ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಆದ್ಯತೆ ಕೊಟ್ಟಿದ್ದೇವೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಿದ್ದೇವೆ. ಕ್ರೀಡಾಳುಗಳು, ರಾಷ್ಟ್ರ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸಾಧಕರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ನಡೆದ ಕಂಬಳವನ್ನು ವೀಕ್ಷಿಸಿ ಊರಿಗೆ ಮರಳುತ್ತಿದ್ದಾಗ ಅಪಘಾತದಲ್ಲಿ ಸಾವಿಗೀಡಾದ ವರ ಕುಟುಂಬಕ್ಕೆ ಮತ್ತು ಗಾಯಾಳು ಗಳಿಗೆ ಮಾನವೀಯ ನೆಲೆಯಲ್ಲಿ ನೆರವು ನೀಡಲಾಗುತ್ತಿದೆ. ಇತ್ತೀಚೆಗೆ ಮೃತಪಟ್ಟ ಕಾಪು ಲೀಲಾಧರ ಶೆಟ್ಟಿ ತಮ್ಮದೇ ಖರ್ಚಿ ನಲ್ಲಿ ನಡೆಸುತ್ತಿದ್ದ ಶಾಲೆಗೆ ಮುಂದಿನ ಕೆಲವು ವರ್ಷ ಆಶಾ ಪ್ರಕಾಶ್‌ ಶೆಟ್ಟಿ ಸಹಾಯ ಹಸ್ತದ ಮೂಲಕ ನೆರವು ನೀಡಲಾಗುವುದು ಎಂದರು.

ಬಂಟ್ವಾಳದ ಶಾಲೆಯೊಂದಕ್ಕೆ ಕಂಪ್ಯೂಟರ್‌, ಕಾಪು ಕೈಪುಂಜಾಲಿನಲ್ಲಿ ಉಡುಪಿ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಧ್ಯಕ್ಷರಾಗಿರುವ ವಿದ್ಯಾ ಸಾಗರ ಎಜುಕೇಶನ್‌ ಟ್ರಸ್ಟ್‌ ಶಾಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ನೆರವು ವಿತರಿಸಲಾಗುವುದು ಎಂದರು.

ಕ್ರೀಡಾ ಪ್ರೋತ್ಸಾಹ
ಅಮೆರಿಕದಲ್ಲಿ ನಡೆದ ವಿಶ್ವ ಜೂನಿಯರ್‌ ಚಾಂಪಿಯನ್‌ ಶಿಪ್‌ನಲ್ಲಿ ಕಂಚಿನ ಪದಕ ಪಡೆದ ನಮ್ಮ ಜಿಲ್ಲೆಯ ಕ್ರೀಡಾಳು ಆಯುಷ್‌ ಶೆಟ್ಟಿ, ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಭಾರತದ 10ನೇ ಶಟ್ಲರ್‌ ಮತ್ತು ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಪದಕ ಪಡೆದ ಕರ್ನಾಟಕ ಮೊದಲನೇ ಶಟ್ಲರ್‌ ಅರ್ಜುನ್‌ ಶೆಟ್ಟಿ ಅವರಿಗೆ ನೆರವು ನೀಡಲಾಗುತ್ತಿದೆ. ಪಿಯುಸಿಯಲ್ಲಿ 600ಕ್ಕೆ 600 ಅಂಕ ಗಳಿಸಿದ ಅನನ್ಯಾ ಮತ್ತು ಎಸೆಸೆಲ್ಸಿಯಲ್ಲಿ 625 ಅಂಕ ಗಳಿಸಿದ ವೀಕ್ಷಿತಾ ಅವರನ್ನು ಸಮ್ಮಾನಿಸಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಪ್ರಕಾಶ್‌ ವಿವರಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.